Tomato salad or bajji recipe in kannada | ಟೊಮೇಟೊ ಸಲಾಡ್ ಅಥವಾ ಬಜ್ಜಿ ಮಾಡುವ ವಿಧಾನ
ಅತ್ಯಂತ ಸರಳ ಮತ್ತು ರುಚಿಕರ ಸಲಾಡ್ ಅಥವಾ ಟೊಮೇಟೊ ಬಜ್ಜಿ ಮಾಡುವ ವಿಧಾನ ಇಲ್ಲಿದೆ. ಇದನ್ನು ಅಣ್ಣ ಅಥವಾ ಚಪಾತಿಯೊಂದಿಗೆ ಸವಿಯಬಹುದು. ಯಾರು ಬೇಕಾದರೂ, ಅತ್ಯಂತ ಕಡಿಮೆ ಪದಾರ್ಥಗಳನ್ನು ಉಪಯೋಗಿಸಿಕೊಂಡು ಮಾಡಬಹುದಾದ ಅಡುಗೆಯಾಗಿದ್ದು, ಒಮ್ಮೆಯಾದರೂ ಮಾಡಿ ರುಚಿ ನೋಡಲು ಮರೆಯದಿರಿ.ತಯಾರಿ ಸಮಯ: 5 ನಿಮಿಷ
ಅಡುಗೆ ಸಮಯ : 5 ನಿಮಿಷ
ಪ್ರಮಾಣ : 2 ಜನರಿಗೆ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ದೊಡ್ಡ ಈರುಳ್ಳಿ
- 2 ದೊಡ್ಡ ಟೊಮ್ಯಾಟೊ
- 1 ಟೇಬಲ್ ಚಮಚ ಸಣ್ಣಗೆ ಕತ್ತರಿಸಿದ ಕೊತ್ತಂಬರಿ ಸೊಪ್ಪು
- 0.5 - 1 ಸಣ್ಣಗೆ ಕತ್ತರಿಸಿದ ಹಸಿರು ಮೆಣಸಿನಕಾಯಿ
- ಉಪ್ಪು ರುಚಿಗೆ ತಕ್ಕಷ್ಟು
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1/4 ಚಮಚ ಸಾಸಿವೆ
- 1 ಒಣ ಮೆಣಸಿನಕಾಯಿ
- 2 ಟೀಸ್ಪೂನ್ ಅಡುಗೆ ಎಣ್ಣೆ
ಟೊಮೇಟೊ ಸಲಾಡ್ ಅಥವಾ ಬಜ್ಜಿ ಮಾಡುವ ವಿಧಾನ:
- ಸಣ್ಣಗೆ ಹೆಚ್ಚಿದ ಈರುಳ್ಳಿಯನ್ನು ಒಂದು ಬಟ್ಟಲಿನಲ್ಲಿ ತೆಗೆದುಕೊಳ್ಳಿ.
- ಅದಕ್ಕೆ ಸಣ್ಣಗೆ ಹೆಚ್ಚಿದ ಟೊಮೇಟೊ ಸೇರಿಸಿ.
- ನಂತರ ಸಣ್ಣಗೆ ಹೆಚ್ಚಿದ ಹಸಿರುಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು ಮತ್ತು ಉಪ್ಪು ಹಾಕಿ.
- ಚೆನ್ನಾಗಿ ಕಲಸಿ. ಎಣ್ಣೆ, ಸಾಸಿವೆ ಮತ್ತು ಒಣಮೆಣಸಿನ ಕಾಯಿಯ ಒಗ್ಗರಣೆ ಕೊಡಿ. ಅನ್ನ ಅಥವಾ ಚಪಾತಿಯೊಂದಿಗೆ ಬಡಿಸಿ. ಹಾಗೇ ಬೇಕಾದರೂ ಸವಿಯಬಹುದು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ