Mangalore style gojjavalakki in Kannada | ಮಂಗಳೂರು ಶೈಲಿಯ ಗೊಜ್ಜವಲಕ್ಕಿ
ತಯಾರಿ ಸಮಯ: 10 ನಿಮಿಷ
ಅಡುಗೆ ಸಮಯ : 20 ನಿಮಿಷ
ಪ್ರಮಾಣ : 3 ಜನರಿಗೆ
ಅಡುಗೆ ಸಮಯ : 20 ನಿಮಿಷ
ಪ್ರಮಾಣ : 3 ಜನರಿಗೆ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 2 ಕಪ್ ಗಟ್ಟಿ ಅವಲಕ್ಕಿ
- 1/2 ಕಪ್ ತೆಂಗಿನ ತುರಿ
- 2 - 4 ಕೆಂಪು ಮೆಣಸಿನಕಾಯಿ
- 1/4 ಟೀಸ್ಪೂನ್ ಸಾಸಿವೆ
- 1 ಸಣ್ಣ ನಿಂಬೆ ಗಾತ್ರದ ಬೆಲ್ಲ
- 1 ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು
- 1 ಟೇಬಲ್ ಸ್ಪೂನ್ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- ಉಪ್ಪು ರುಚಿಗೆ ತಕ್ಕಷ್ಟು.
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಒಣ ಮೆಣಸಿನಕಾಯಿ
- 1/2 ಟೀಸ್ಪೂನ್ ಸಾಸಿವೆ
- 2 ಟೇಬಲ್ ಚಮಚ ಕಡಲೇಕಾಯಿ ಅಥವಾ ಶೇಂಗಾ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡಲೆಬೇಳೆ
- 4 - 6 ಕರಿಬೇವಿನ ಎಲೆ
- 1/4 ಟೀಸ್ಪೂನ್ ಅರಿಶಿನ ಪುಡಿ
- 4 ಟೇಬಲ್ ಚಮಚ ಅಡುಗೆ ಎಣ್ಣೆ (ತೆಂಗಿನೆಣ್ಣೆಗೆ ಆದ್ಯತೆ)
ಮಂಗಳೂರು ಶೈಲಿಯ ಗೊಜ್ಜವಲಕ್ಕಿ ಮಾಡುವ ವಿಧಾನ :
- ಮಿಕ್ಸಿ ಜಾರಿಗೆ ತೆಂಗಿನಕಾಯಿ, ಕೆಂಪು ಮೆಣಸಿನಕಾಯಿ ಮತ್ತು ಸಾಸಿವೆಯನ್ನು ಹಾಕಿ.
- ಅಗತ್ಯವಿದ್ದಷ್ಟು ನೀರು ಬಳಸಿ ನುಣ್ಣನೆ ಅರೆದು ಪಕ್ಕಕ್ಕಿಡಿ.
- ಗಟ್ಟಿ ಅವಲಕ್ಕಿಯನ್ನು ತೊಳೆದು 5 ನಿಮಿಷಗಳ ಕಾಲ ನೆನೆಸಿ. ನೆನೆಸುವ ಸಮಯ ಅವಲಕ್ಕಿಯ ದಪ್ಪ ಅವಲಂಬಿಸಿ ಬದಲಾಗಬಹುದು. ಹುಣಿಸೇಹಣ್ಣನ್ನು ಸಹ ನೀರಿನಲ್ಲಿ ನೆನೆಸಿಡಿ.
- ಅವಲಕ್ಕಿ ನೆನೆಯುವ ಸಮಯದಲ್ಲಿ ಒಗ್ಗರಣೆಯನ್ನು ತಯಾರು ಮಾಡಿ ಕೊಳ್ಳೋಣ. ಒಂದು ಬಾಣಲೆಯಲ್ಲಿ ಎಣ್ಣೆ, ಕೆಂಪು ಮೆಣಸಿನಕಾಯಿ, ಸಾಸಿವೆ , ಉದ್ದಿನ ಬೇಳೆ, ಕಡಲೆಬೇಳೆ ಮತ್ತು ಕಡಲೆಕಾಯಿ (ಶೇಂಗಾ) ಬಳಸಿಕೊಂಡು ಒಗ್ಗರಣೆ ಮಾಡಿ.
- ನಂತರ ಅರಿಶಿನ ಪುಡಿ , ಕರಿಬೇವು ಸೇರಿಸಿ ಸ್ಟವ್ ಆಫ್ ಮಾಡಿ.
- ಈಗ ಅರೆದ ಮಸಾಲಾ ಪೇಸ್ಟ್, ಉಪ್ಪು, ಬೆಲ್ಲ ಮತ್ತು ಹುಣಸೆ ರಸ ಸೇರಿಸಿ.
- ಚೆನ್ನಾಗಿ ಕಲಸಿ ಸಣ್ಣ ಉರಿಯಲ್ಲಿ ಬೆಲ್ಲ ಕರಗುವವರೆಗೆ ಕುದಿಸಿ.
- ಈಗ ನೆನೆಸಿದ ಅವಲಕ್ಕಿಯ ನೀರು ಹಿಂಡಿ ತೆಗೆದು ಹಾಕಿ.
- ಚೆನ್ನಾಗಿ ಕಲಸಿ.
- ಮುಚ್ಚಳವನ್ನು ಮುಚ್ಚಿ. 5 ನಿಮಿಷ ಕಡಿಮೆ ಜ್ವಾಲೆಯಲ್ಲಿ ಬೇಯಿಸಿ.
- 5 ನಿಮಿಷಗಳ ನಂತರ ಮುಚ್ಚಳವನ್ನು ತೆರೆದು, ಹೆಚ್ಚಿದ ಕೊತ್ತಂಬರಿ ಸೊಪ್ಪು ಸೇರಿಸಿ ಕಲಸಿ.
- ರುಚಿಕರ ಮಂಗಳೂರು ಶೈಲಿಯ ಗೊಜ್ಜವಲಕ್ಕಿಯನ್ನು ತಿಂದು ಆನಂದಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ