Poori recipe in Kannada | ಪೂರಿ ಮಾಡುವ ವಿಧಾನ
ಪೂರಿ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 2 ಕಪ್ ಗೋಧಿ ಹಿಟ್ಟು
- 2 ಟೇಬಲ್ ಚಮಚ ಸಣ್ಣ ರವೆ (1/2 ಕಪ್ ವರೆಗೆ ಹೆಚ್ಚಿಸಬಹುದು)
- 2 ಟೇಬಲ್ ಚಮಚ ಬಿಸಿ ತುಪ್ಪ ಅಥವಾ ಎಣ್ಣೆ
- ಉಪ್ಪು ರುಚಿಗೆ ತಕ್ಕಷ್ಟು
- ಎಣ್ಣೆ ಪೂರಿ ಕಾಯಿಸಲು
ಪೂರಿ ಮಾಡುವ ವಿಧಾನ:
- ಒಂದು ಅಗಲವಾದ ಬಟ್ಟಲಿಗೆ ಗೋಧಿ ಹಿಟ್ಟು, ಸಣ್ಣ ರವೆ ಮತ್ತು ಉಪ್ಪು ಹಾಕಿ ಚೆನ್ನಾಗಿ ಬೆರೆಸಿಕೊಳ್ಳಿ. ರವೆ ಹಾಕುವುದರಿಂದ ಪೂರಿ ಚೆನ್ನಾಗಿ ಉಬ್ಬಿ, ಗರಿ ಗರಿಯಾಗುತ್ತದೆ.
- ನಂತರ 2 ಟೇಬಲ್ ಚಮಚ ಬಿಸಿ ತುಪ್ಪ ಅಥವಾ ಎಣ್ಣೆ ಸೇರಿಸಿ ಚೆನ್ನಾಗಿ ಕಲಸಿ.
- ಸ್ವಲ್ಪ ಸ್ವಲ್ಪವೇ ನೀರು ಸೇರಿಸುತ್ತಾ ಪೂರಿ ಹಿಟ್ಟನ್ನು ತಯಾರಿಸಿ. ಹಿಟ್ಟು ಚಪಾತಿ ಹಿಟ್ಟಿಗಿಂತ ಸ್ವಲ್ಪ ಗಟ್ಟಿಯಾಗಿರಲಿ. ಹೆಚ್ಚು ಗಟ್ಟಿ ಮಾಡಿದಲ್ಲಿ ಪೂರಿ ಗಟ್ಟಿಯಾಗುವುದು, ಹಾಗೆಯೇ ಮೃದು ಮಾಡಿದಲ್ಲಿ ಪೂರಿ ಎಣ್ಣೆ ಎಳೆದು ಮೆತ್ತಗಾಗಬಹದು.
- ಸಣ್ಣ ಲಿಂಬೆ ಹಣ್ಣಿನ ಗಾತ್ರದ ಉಂಡೆಗಳನ್ನು ಮಾಡಿಕೊಳ್ಳಿ.
- ಸ್ವಲ್ಪ ಹಿಟ್ಟು ಉದುರಿಸಿ ಅಂಗೈ ಅಗಲದ ಪೂರಿ ಲಟ್ಟಿಸಿ. ಪೂರಿ ಚಪಾತಿಗಿಂತ ಸ್ವಲ್ಪ ದಪ್ಪನಾಗಿರಲಿ.
- ಎಣ್ಣೆ ಕಾಯಿಸಿ ಒಂದೊಂದಾಗಿ ಲಟ್ಟಿಸಿದ ಪೂರಿಗಳನ್ನು ಕಾಯಿಸಿ. ಕಾಯಿಸುವಾಗ ಒಂದೋ ಸೌಟಿನ ಹಿಂಭಾಗದಿಂದ ಮೆಲ್ಲನೆ ಒತ್ತುವುದು, ಇಲ್ಲವೇ ಎಣ್ಣೆ ಹಾರಿಸುವುದು ಮಾಡಿದಲ್ಲಿ ಪೂರಿ ಚೆನ್ನಾಗಿ ಉಬ್ಬುವುದು.
- ಚಿನ್ನದ ಹೊಂಬಣ್ಣ ಬರುವವರೆಗೆ ಎರಡು ಬದಿ ಕಾಯಿಸಿ. ಸಾಂಬಾರ್ ಅಥವಾ ಆಲೂ ಭಾಜಿಯೊಂದಿಗೆ ಬಡಿಸಿ.
wonderful recipe. Continue Sharing.Sri Mayyia Caterers dates back to 1953, a nostalgic era where traditional Indian fare was a clear favourite, and every feast or celebration was incomplete without the mouthwatering delicacies. for further details pls visit our official website https://www.srimayyiacaterers.co.in/, Contact us @ +91 98450 38235/ +91 98454 9722260
ಪ್ರತ್ಯುತ್ತರಅಳಿಸಿ