Hasi majjige recipe in Kannada | ಹಸಿ ಮಜ್ಜಿಗೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಟೇಬಲ್ ಚಮಚ ಹುರಿಗಡಲೆ
- 1/2 ಚಮಚ ಸಾಸಿವೆ
- 1 - 2 ಹಸಿರು ಮೆಣಸಿನಕಾಯಿ
- 1/4 " ಉದ್ದ ಶುಂಠಿ
- 1 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- 1/4 ಕಪ್ ತೆಂಗಿನ ತುರಿ
- 1 ಕಪ್ ಮೊಸರು
- ಉಪ್ಪು ರುಚಿಗೆ ತಕ್ಕಷ್ಟು.
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1/2 ಟೀಸ್ಪೂನ್ ಸಾಸಿವೆ
- 4 - 5 ಕರಿಬೇವಿನ ಎಲೆ
- ಒಂದು ಚಿಟಿಕೆ ಇಂಗು
- 1 ಟೀಸ್ಪೂನ್ ಅಡುಗೆ ಎಣ್ಣೆ
ಹಸಿ ಮಜ್ಜಿಗೆ ಮಾಡುವ ವಿಧಾನ:
- ಒಂದು ಮಿಕ್ಸಿ ಜಾರಿಗೆ ಹುರಿಗಡಲೆ, ಸಾಸಿವೆ, ಹಸಿರು ಮೆಣಸಿನಕಾಯಿ, ಶುಂಠಿ, ಕೊತ್ತಂಬರಿ ಸೊಪ್ಪು, ತೆಂಗಿನ ತುರಿ ಹಾಕಿ, ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ.
- ಉಪ್ಪು ಮತ್ತು ಮೊಸರು ಸೇರಿಸಿ.
- ಸಾಸಿವೆ, ಇಂಗು ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ