Thondekai palya recipe in Kannada | ತೊಂಡೆಕಾಯಿ ಒಣ ಪಲ್ಯ ಮಾಡುವ ವಿಧಾನ
ತೊಂಡೆಕಾಯಿ ಒಣ ಪಲ್ಯ ವಿಡಿಯೋ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್)
- 250gm ತೊಂಡೆಕಾಯಿ
- 4 ಟೀಸ್ಪೂನ್ ಅಡುಗೆ ಎಣ್ಣೆ
- 1/2 ಚಮಚ ಸಾಸಿವೆ
- 1/2 ಟೀಸ್ಪೂನ್ ಜೀರಿಗೆ
- ಒಂದು ದೊಡ್ಡ ಚಿಟಿಕೆ ಅರಿಶಿನ ಪುಡಿ
- ಒಂದು ದೊಡ್ಡ ಚಿಟಿಕೆ ಇಂಗು
- 4 - 5 ಕರಿಬೇವಿನ ಎಲೆ
- 1/2 - 1 ಟೀಸ್ಪೂನ್ ಅಚ್ಚ ಖಾರದ ಪುಡಿ
- 1 ಟೀಸ್ಪೂನ್ ಧನಿಯಾ ಪುಡಿ
- 1/4 ಟೀಸ್ಪೂನ್ ಜೀರಿಗೆ ಪುಡಿ
- 1/4 ಟೀಸ್ಪೂನ್ ಮಾವಿನಕಾಯಿ ಪುಡಿ ಅಥವಾ ವಾಟೆ ಹುಳಿ ಅಥವಾ ದಪ್ಪ ಹುಣಿಸೇಹಣ್ಣು ರಸ
- 1/4 ಕಪ್ ತೆಂಗಿನಕಾಯಿ ತುರಿ (ನೀರು ಹಾಕದೆ ಪುಡಿ ಮಾಡಿಟ್ಟು ಕೊಳ್ಳಿ)
- ಉಪ್ಪು ರುಚಿಗೆ ತಕ್ಕಷ್ಟು
ತೊಂಡೆಕಾಯಿ ಒಣ ಪಲ್ಯ ಮಾಡುವ ವಿಧಾನ:
- ತೊಂಡೆಕಾಯಿಯನ್ನು ತೊಳೆದು, ತುದಿ ಬುಡ ತೆಗೆದು, 1/2cm ದಪ್ಪದ ಗಾಲಿಗಳನ್ನಾಗಿ ಕತ್ತರಿಸಿ.
- ಒಂದು ಬಾಣಲೆಯಲ್ಲಿ ಎಣ್ಣೆ ಹಾಕಿ. ಸಾಸಿವೆ, ಜೀರಿಗೆ, ಅರಿಶಿನ ಪುಡಿ, ಇಂಗು ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
- ಅದಕ್ಕೆ ಕತ್ತರಿಸಿದ ತೊಂಡೆಕಾಯಿ ಹಾಕಿ ಸಣ್ಣ ಉರಿಯಲ್ಲಿ ಮುಚ್ಚಳ ಮುಚ್ಚಿ ಬೇಯಿಸಿ. ಆಗಾಗ್ಯೆ ಮಗುಚುತ್ತಾ ಇರಿ.
- ನಂತರ ಅಚ್ಚ ಖಾರದ ಪುಡಿ, ಧನಿಯಾ ಪುಡಿ, ಜೀರಿಗೆ ಪುಡಿ ಮತ್ತು ಮಾವಿನಕಾಯಿ ಪುಡಿ ಹಾಕಿ ಮಗುಚಿ.
- ಕೊನೆಯಲ್ಲಿ ಪುಡಿ ಮಾಡಿದ ತೆಂಗಿನ ತುರಿ ಮತ್ತು ಉಪ್ಪು ಸೇರಿಸಿ ಮಗುಚಿ. ಸ್ಟವ್ ಆಫ್ ಮಾಡಿ. ಅನ್ನ ಅಥವಾ ಚಪಾತಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ