alugadde-eerulli sambar in Kannada | ಆಲೂಗಡ್ಡೆ ಈರುಳ್ಳಿ ಸಾಂಬಾರ್ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು:
- 2 ಮಧ್ಯಮ ಗಾತ್ರದ ಆಲೂಗಡ್ಡೆ
- 2 ಮಧ್ಯಮ ಗಾತ್ರದ ಈರುಳ್ಳಿ
- 1/4 ಟೀಸ್ಪೂನ್ ಅರಿಶಿನ ಪುಡಿ
- ಒಂದು ಸಣ್ಣ ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು
- 2 ಟೀಸ್ಪೂನ್ ಕಲ್ಲುಪ್ಪು (ನಿಮ್ಮ ರುಚಿ ಪ್ರಕಾರ)
ಮಸಾಲೆಗೆ ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/2 - 3/4 ಕಪ್ ತೆಂಗಿನ ತುರಿ (ಸಾಂಬಾರ್ ದಪ್ಪ ಅವಲಂಬಿಸಿ)
- 2 - 4 ಕೆಂಪು ಮೆಣಸಿನಕಾಯಿ
- 1 ಟೀಸ್ಪೂನ್ ಉದ್ದಿನ ಬೇಳೆ
- 2 ಟೀಸ್ಪೂನ್ ಕೊತ್ತಂಬರಿ ಬೀಜ
- 1/4 ಟೀಸ್ಪೂನ್ ಜೀರಿಗೆ
- 1/4 ಟೀಸ್ಪೂನ್ ಇಂಗು
- 1 ಟೀಸ್ಪೂನ್ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಕೆಂಪು ಮೆಣಸಿನಕಾಯಿ
- 5 - 6 ಕರಿಬೇವು
- 1/4 ಟೀಸ್ಪೂನ್ ಸಾಸಿವೆ
- 2 ಟೀಸ್ಪೂನ್ ಅಡುಗೆ ಎಣ್ಣೆ
ಆಲೂಗಡ್ಡೆ ಈರುಳ್ಳಿ ಸಾಂಬಾರ್ ಮಾಡುವ ವಿಧಾನ:
- ಆಲೂಗಡ್ಡೆಯನ್ನು ತೊಳೆದು, ಕತ್ತರಿಸಿ. ಈರುಳ್ಳಿಯನ್ನು ತೊಳೆದು, ಕತ್ತರಿಸಿ.
- ಒಂದು ಕುಕ್ಕರ್ ನಲ್ಲಿ ಕತ್ತರಿಸಿದ ಆಲೂಗಡ್ಡೆ ಮತ್ತು ಈರುಳ್ಳಿಯನ್ನು ತೆಗೆದುಕೊಳ್ಳಿ. ನೀರು, ಅರಶಿನ ಪುಡಿ ಮತ್ತು ಉಪ್ಪು ಹಾಕಿ ಒಂದೆರಡು ವಿಷಲ್ ಮಾಡಿ.
- ಈಗ ಒಂದು ಬಾಣಲೆ ತೆಗೆದು ಕೊಂಡು, ಕೆಂಪು ಮೆಣಸಿನಕಾಯಿ, ಉದ್ದಿನಬೇಳೆ, ಕೊತ್ತಂಬರಿ ಬೀಜ ಮತ್ತು ಜೀರಿಗೆಯನ್ನು ಮಧ್ಯಮ ಉರಿಯಲ್ಲಿ 1 ಟೀಸ್ಪೂನ್ ಎಣ್ಣೆ ಹಾಕಿ ಹುರಿಯಿರಿ.
- ಉದ್ದಿನಬೇಳೆ ಹೊಂಬಣ್ಣಕ್ಕೆ ತಿರುಗಿದ ಕೂಡಲೇ ಇಂಗನ್ನು ಹಾಕಿ, ಒಮ್ಮೆ ಮಗುಚಿ ಸ್ಟವ್ ಆಫ್ ಮಾಡಿ.
- ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ನೀರು ಸೇರಿಸಿ ಅರೆಯಿರಿ.
- ಅರೆದ ಮಸಾಲೆಯನ್ನು ತರಕಾರಿ ಇರುವ ಕುಕ್ಕರ್ ಗೆ ಹಾಕಿ.
- ಉಪ್ಪು ಮತ್ತು ಹುಣಿಸೆರಸ ಹಾಕಿ.
- ನಿಮಗೆ ಸಾಂಬಾರ್ ಎಷ್ಟು ದಪ್ಪ ಬೇಕೋ ಅಷ್ಟು ನೀರು ಸೇರಿಸಿ, ಮಗುಚಿ, ಒಂದು ಕುದಿ ಕುದಿಸಿ.
- ಕೆಂಪು ಮೆಣಸು, ಸಾಸಿವೆ, ಕರಿಬೇವಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಅಥವಾ ಇಡ್ಲಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ