ಶನಿವಾರ, ಸೆಪ್ಟೆಂಬರ್ 24, 2016

Sabsige soppu akki rotti recipe in Kannada | ಸಬ್ಬಸಿಗೆ ಸೊಪ್ಪು ಅಕ್ಕಿ ರೊಟ್ಟಿ ಮಾಡುವ ವಿಧಾನ

Sabsige soppu akki rotti recipe in Kannada

Sabsige soppu akki rotti recipe in Kannada | ಸಬ್ಬಸಿಗೆ ಸೊಪ್ಪು ಅಕ್ಕಿ ರೊಟ್ಟಿ ಮಾಡುವ ವಿಧಾನ 

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 1.5 ಕಪ್ ಅಕ್ಕಿಹಿಟ್ಟು
  2. 2.5 ಕಪ್ ನೀರು (ಅಕ್ಕಿಹಿಟ್ಟಿನ ಗುಣಮಟ್ಟವನ್ನು ಅವಲಂಬಿಸಿ ಸ್ವಲ್ಪ ಹೆಚ್ಚು ಕಡಿಮೆ)
  3. ಒಂದು ಸಣ್ಣ ಕಟ್ಟು ಸಬ್ಬಸಿಗೆ ಸೊಪ್ಪು
  4. 2-4 ಸಣ್ಣಗೆ ಹೆಚ್ಚಿದ ಹಸಿರುಮೆಣಸಿನ ಕಾಯಿ
  5. 2 ಸಣ್ಣಗೆ ಹೆಚ್ಚಿದ ಈರುಳ್ಳಿ
  6. 1/2 ಕಪ್ ತೆಂಗಿನ ತುರಿ
  7. 1 ಟೀಸ್ಪೂನ್ ಜೀರಿಗೆ 
  8. ಉಪ್ಪು ರುಚಿಗೆ ತಕ್ಕಷ್ಟು
  9. 1/4 ಕಪ್ ಅಡುಗೆ ಎಣ್ಣೆ
  10. 15x15cm ಗಾತ್ರದ ದಪ್ಪ ಪ್ಲಾಸ್ಟಿಕ್ ಹಾಳೆ / ಬಾಳೆ ಎಲೆ

ಸಬ್ಬಸಿಗೆ ಸೊಪ್ಪು ಅಕ್ಕಿ ರೊಟ್ಟಿ ಮಾಡುವ ವಿಧಾನ:

  1. ಒಂದು ಬಾಣಲೆ ಅಥವಾ ಪಾತ್ರೆಯಲ್ಲಿ ನೀರು ಮತ್ತು ಉಪ್ಪು ಹಾಕಿ ಕುದಿಸಿ. ನೀರು ಕುಡಿಯಲು ಪ್ರಾರಂಭಿಸಿದ ಕೂಡಲೇ ಅಕ್ಕಿ ಹಿಟ್ಟು ಹಾಕಿ ಸ್ಟೋವ್ ಆಫ್ ಮಾಡಿ.
  2. ಈಗ ಕತ್ತರಿಸಿದ ಈರುಳ್ಳಿ , ಸಬ್ಬಸಿಗೆ ಸೊಪ್ಪು, ಹಸಿರು ಮೆಣಸಿನಕಾಯಿ ಮತ್ತು ತೆಂಗಿನ ತುರಿಯನ್ನು ಸೇರಿಸಿ ಚೆನ್ನಾಗಿ ಕಲಸಿ. ಬೇಕಾದಲ್ಲಿ ನೀರು ಅಥವಾ ಹಿಟ್ಟು ಸೇರಿಸಿ ಮೃದುವಾದ ಹಿಟ್ಟನ್ನು ತಯಾರಿಸಿಕೊಳ್ಳಿ.
  3. ಒಂದು ಸಣ್ಣ ಬಟ್ಟಲಿನಲ್ಲಿ ಎಣ್ಣೆಯನ್ನು ತೆಗೆದು ಕೊಳ್ಳಿ. ಪ್ಲಾಸ್ಟಿಕ್ ಹಾಳೆ ಅಥವಾ ಬಾಳೆ ಎಲೆಯ ಮೇಲೆ ಎಣ್ಣೆಯನ್ನು ಹಚ್ಚಿ ಒಂದು ಟೆನ್ನಿಸ್ ಚಂಡಿನ ಗಾತ್ರದ ಹಿಟ್ಟು ಇರಿಸಿ.
  4. ಈಗ ನಿಮ್ಮ ಬೆರಳುಗಳಿಗೆ ಎಣ್ಣೆ ಹಚ್ಚಿಕೊಂಡು, ಬೆರಳುಗಳಿಂದ ಮೆಲ್ಲನೆ ಒತ್ತುತ್ತಾ ವೃತ್ತಾಕಾರದ ಅಕ್ಕಿ ರೊಟ್ಟಿಯನ್ನು ತಟ್ಟಿ. ಆಗಾಗ್ಯೆ ಕೈ ಬೆರಳುಗಳಿಂದ ಎಣ್ಣೆ ಮುಟ್ಟುತ್ತಾ ರೊಟ್ಟಿ ತಟ್ಟುವುದರಿಂದ ಕೈಗೆ ಅಂಟುವುದಿಲ್ಲ.
  5. ಎಚ್ಚರಿಕೆಯಿಂದ ಪ್ಲಾಸ್ಟಿಕ್ ಹಾಳೆಯಲ್ಲಿರುವ ಅಕ್ಕಿ ರೊಟ್ಟಿಯನ್ನು ಕೈಯಲ್ಲಿ ತೆಗೆದುಕೊಂಡು ಬಿಸಿ ತವಾ ಮೇಲೆ ಹಾಕಿ. ಈ ಹಂತದಲ್ಲಿ ನೀವು ಎಚ್ಚರಿಕೆಯಿಂದಿರಬೇಕು ಮತ್ತು ವೇಗವಾಗಿರಬೇಕು. ಇಲ್ಲವಾದಲ್ಲಿ ರೊಟ್ಟಿ ಹರಿದುಹೋಗಬಹುದು.
  6. ಮೇಲಿನಿಂದ ಎಣ್ಣೆ ಹಾಕಿ, ಸುಮಾರು ಒಂದು ನಿಮಿಷದ ನಂತರ ರೊಟ್ಟಿಯನ್ನು ತಿರುವಿ ಹಾಕಿ. ಇನ್ನೊಂದು ಬದಿಯೂ ಕಾಯಿಸಿ. ಬೆಣ್ಣೆ ಅಥವಾ ಮೊಸರು ಅಥವಾ ಚಟ್ನಿಯೊಂದಿಗೆ ಬಡಿಸಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Related Posts Plugin for WordPress, Blogger...