Avarekalu usli recipe in Kannada | ಅವರೇಕಾಳು ಉಸ್ಲಿ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಅವರೇಕಾಳು
- 1 ಟೇಬಲ್ ಚಮಚ ಅಡುಗೆ ಎಣ್ಣೆ
- 1/4 ಟೀಸ್ಪೂನ್ ಸಾಸಿವೆ
- 1/4 ಟೀಸ್ಪೂನ್ ಜೀರಿಗೆ
- 1/2 ಒಣಮೆಣಸಿನಕಾಯಿ ಚೂರು ಮಾಡಿದ್ದೂ
- 4 - 5 ಕರಿಬೇವಿನ ಎಲೆ
- 1 ಈರುಳ್ಳಿ ಸಣ್ಣಗೆ ಹೆಚ್ಚಿದ್ದು
- ಒಂದು ಚಿಟಿಕೆ ಅರಿಶಿನ ಪುಡಿ
- ಒಂದು ದೊಡ್ಡ ಚಿಟಿಕೆ ಇಂಗು
- 1 ಟೀಸ್ಪೂನ್ ಲಿಂಬೆ ರಸ (ಬೇಕಾದಲ್ಲಿ)
- ಉಪ್ಪು ರುಚಿಗೆ ತಕ್ಕಷ್ಟು.
ಮಸಾಲೆ ಅರೆಯಲು ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/2 ಕಪ್ ತೆಂಗಿನ ತುರಿ
- ಸಣ್ಣ ಚೂರು ಶುಂಠಿ
- 2 - 3 ಹಸಿರು ಮೆಣಸಿನಕಾಯಿ
- ಸ್ವಲ್ಪ ಕೊತಂಬರಿ ಸೊಪ್ಪು
ಅವರೇಕಾಳು ಉಸ್ಲಿ ಮಾಡುವ ವಿಧಾನ:
- ಅವರೇಕಾಳನ್ನು ಕುಕ್ಕರ್ ನಲ್ಲಿ 3 - 4 ವಿಷಲ್ ಮಾಡಿ ಚೆನ್ನಾಗಿ ಬೇಯಿಸಿಕೊಳ್ಳಿ.
- ತೆಂಗಿನತುರಿ, ಶುಂಠಿ, ಹಸಿಮೆಣಸಿನಕಾಯಿ ಮತ್ತು ಕೊತ್ತಂಬರಿ ಸೊಪ್ಪನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ, ಮಸಾಲೆ ಅರೆದಿಟ್ಟುಕೊಳ್ಳಿ.
- ನಂತರ ಒಂದು ಬಾಣಲೆಯನ್ನು ಬಿಸಿ ಮಾಡಿ. ಎಣ್ಣೆ, ಸಾಸಿವೆ, ಜೀರಿಗೆ ಮತ್ತು ಒಣಮೆಣಸಿನಕಾಯಿ ಹಾಕಿ ಒಗ್ಗರಣೆ ತಯಾರಿಸಿ.
- ನಂತರ ಒಗ್ಗರಣೆಗೆ ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ
- ಜೊತೆಯಲ್ಲಿ ಅರಿಶಿನ ಪುಡಿ ಮತ್ತು ಇಂಗು ಸೇರಿಸಿ ಈರುಳ್ಳಿ ಮೆತ್ತಗಾಗುವವರೆಗೆ ಹುರಿಯಿರಿ.
- ಅದಕ್ಕೆ ಬೇಯಿಸಿದ ಅವರೇಕಾಳನ್ನು ಹಾಕಿ ಮಗುಚಿ.
- ರುಚಿಗೆ ತಕ್ಕಂತೆ ಉಪ್ಪು ಸೇರಿಸಿ.
- ಅರೆದ ಮಸಾಲೆ ಸೇರಿಸಿ, ಚೆನ್ನಾಗಿ ಮಗುಚಿ ಒಂದು ನಿಮಿಷ ಬೇಯಿಸಿ.
- ಸ್ಟವ್ ಆಫ್ ಮಾಡಿ.
- ಕೊನೆಯಲ್ಲಿ ಬೇಕಾದಲ್ಲಿ ಲಿಂಬೆರಸ ಸೇರಿಸಿ. ಚಹಾದೊಂದಿಗೆ ಸವಿದು ಆನಂದಿಸಿ. ಅನ್ನ ಅಥವಾ ಚಪಾತಿಯೊಂದಿಗೂ ಬಡಿಸಬಹುದು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ