Uddina dose recipe in Kannada | ಉದ್ದಿನ ದೋಸೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 2 ಕಪ್ ದೋಸೆ ಅಕ್ಕಿ
- 3/4 ಕಪ್ ಉದ್ದಿನ ಬೇಳೆ (ಗ್ರೈಂಡರ್ ಬಳಸುತ್ತೀರಾದರೆ 1/2 ಕಪ್ ಸಾಕು )
- 1 ಟೀಸ್ಪೂನ್ ಮೆಂತ್ಯ
- 1/2 ಕಪ್ ತೆಳು ಅಥವಾ 1/4 ಕಪ್ ದಪ್ಪ ಅವಲಕ್ಕಿ / ಗಟ್ಟಿ ಆವಲಕ್ಕಿ
- ಉಪ್ಪು ರುಚಿಗೆ ತಕ್ಕಷ್ಟು.
ದೋಸೆ ಹಿಟ್ಟು ಮಾಡುವ ವಿಧಾನ:
- ಅಕ್ಕಿಯನ್ನು ತೊಳೆದು 5-6 ಗಂಟೆಗಳ ಕಾಲ ನೆನೆಯಲು ಬಿಡಿ.
- ಇನ್ನೊಂದು ಪಾತ್ರೆಯಲ್ಲಿ ಉದ್ದಿನಬೇಳೆ ಮತ್ತು ಮೆಂತೆಯನ್ನು ತೊಳೆದು 5-6 ಗಂಟೆಗಳ ಕಾಲ ನೆನೆಯಲು ಬಿಡಿ.
- ಅವಲಕ್ಕಿ ಯನ್ನು ತೊಳೆದು ನೀರಿನಲ್ಲಿ 30 ನಿಮಿಷಗಳ ಕಾಲ ನೆನೆಸಿಡಿ. ತೆಳು ಅವಲಕ್ಕಿ ಆದಲ್ಲಿ ನೆನೆಸಬೇಕಾಗಿಲ್ಲ.
- ಮೊದಲಿಗೆ ಉದ್ದಿನಬೇಳೆ ಮತ್ತು ಮೆಂತೆಯನ್ನು ಸ್ವಲ್ಪ ಸ್ವಲ್ಪವೇ ನೀರು ಸೇರಿಸಿತ್ತಾ ಮಿಕ್ಸಿಯಲ್ಲಿ ಅರೆದು ಒಂದು ಪಾತ್ರೆಗೆ ಹಾಕಿ.
- ನಂತರ ಅಕ್ಕಿಯನ್ನು ನುಣ್ಣನೆ ಅರೆದು ಅದೇ ಪಾತ್ರೆಗೆ ಬಗ್ಗಿಸಿ.
- ಕೊನೆಯಲ್ಲಿ ಅವಲಕ್ಕಿ ಮತ್ತು ಉಳಿದ ಅಕ್ಕಿಯನ್ನು ನುಣ್ಣನೆ ಅರೆದು ಅದೇ ಪಾತ್ರೆಗೆ ಬಗ್ಗಿಸಿ.
- ಹಿಟ್ಟನ್ನು ಚೆನ್ನಾಗಿ ಕಲಸಿ, ಮುಚ್ಚಳವನ್ನು ಮುಚ್ಚಿ, 8-9 ಘಂಟೆ ಕಾಲ ಹಿಟ್ಟು ಹುದುಗಲು ಬಿಡಿ.
- 8-9 ಘಂಟೆಯ ನಂತರ ಹಿಟ್ಟಿಗೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
ಉದ್ದಿನ ದೋಸೆ ಮಾಡುವ ವಿಧಾನ:
- ದೋಸೆ ಹೆಂಚು ಅಥವಾ ನಾನ್ ಸ್ಟಿಕ್ ಪ್ಯಾನ್ ಬಿಸಿಮಾಡಿ ಕೊಳ್ಳಿ. ದೋಸೆ ಹೆಂಚನ್ನು ಬಳಸುತ್ತಿದ್ದರೆ ಮೊದಲಿಗೆ ಎಣ್ಣೆ ಹಚ್ಚಿ. ನಾನ್ ಸ್ಟಿಕ್ ಪ್ಯಾನ್ ಆದಲ್ಲಿ ಎಣ್ಣೆ ಹಚ್ಚಬೇಡಿ, ಎಣ್ಣೆ ಹಚ್ಚಿದರೆ ದೋಸೆ ಹರಡಲು ಸಾಧ್ಯವಾಗುವುದಿಲ್ಲ. ಈಗ ವೃತ್ತಾಕಾರದ ರೀತಿಯಲ್ಲಿ ದೋಸೆ ಹಿಟ್ಟನ್ನು ಹರಡಿ, ಮುಚ್ಚಳವನ್ನು ಮುಚ್ಚಿ .
- 5 ಸೆಕೆಂಡುಗಳ ನಂತರ ಮುಚ್ಚಳವನ್ನು ತೆಗೆದು, ಎಣ್ಣೆ ಅಥವಾ ತುಪ್ಪ ಹಾಕಿ. ದೋಸೆ ಒಂದು ಬದಿ ಕಾಯಿಸಿದರೆ ಸಾಕು. ತೆಂಗಿನಕಾಯಿ ಚಟ್ನಿ ಅಥವಾ ಸಾಂಬಾರ್ ನೊಂದಿಗೆ ಬಡಿಸಿರಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ