Oodhalu or siridhanya dose recipe in Kannada | ಊಧಲು ಅಥವಾ ಸಿರಿಧಾನ್ಯ ದೋಸೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 1 ಕಪ್ ಊಧಲು ಅಥವಾ ಯಾವುದೇ ಸಿರಿಧಾನ್ಯ
- 1/3 ಕಪ್ ಉದ್ದಿನ ಬೇಳೆ
- 1/2 ಟೀಸ್ಪೂನ್ ಮೆಂತ್ಯ
- 2 - 4 ಟೇಬಲ್ ಚಮಚ ದಪ್ಪ ಅವಲಕ್ಕಿ / ಗಟ್ಟಿ ಆವಲಕ್ಕಿ
- ಉಪ್ಪು ರುಚಿಗೆ ತಕ್ಕಷ್ಟು.
ದೋಸೆ ಹಿಟ್ಟು ಮಾಡುವ ವಿಧಾನ:
- ಸಿರಿಧಾನ್ಯ, ಉದ್ದಿನಬೇಳೆ ಮತ್ತು ಮೆಂತೆಯನ್ನು ತೊಳೆದು 5-6 ಗಂಟೆಗಳ ಕಾಲ ನೆನೆಯಲು ಬಿಡಿ.
- ಅವಲಕ್ಕಿ ಯನ್ನು ತೊಳೆದು ನೀರಿನಲ್ಲಿ 30 ನಿಮಿಷಗಳ ಕಾಲ ನೆನೆಸಿಡಿ. ತೆಳು ಅವಲಕ್ಕಿ ಆದಲ್ಲಿ ನೆನೆಸಬೇಕಾಗಿಲ್ಲ.
- ನೆನೆಸಿದ ನಂತರ ನೀರು ಬಗ್ಗಿಸಿ. ಸಿರಿಧಾನ್ಯ, ಉದ್ದಿನಬೇಳೆ, ಮೆಂತೆ ಮತ್ತು ಅವಲಕ್ಕಿಯನ್ನು ಅಗತ್ಯವಿದ್ಧಷ್ಟು ನೀರು ಸೇರಿಸಿ, ಮಿಕ್ಸಿಯಲ್ಲಿ ಅರೆದು ಒಂದು ಪಾತ್ರೆಗೆ ಹಾಕಿ.
- ಮುಚ್ಚಳವನ್ನು ಮುಚ್ಚಿ, 8-9 ಘಂಟೆ ಕಾಲ ಹಿಟ್ಟು ಹುದುಗಲು ಬಿಡಿ.
- 8-9 ಘಂಟೆಯ ನಂತರ ಹಿಟ್ಟಿಗೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
ಉದ್ದಿನ ದೋಸೆ ಮಾಡುವ ವಿಧಾನ:
- ದೋಸೆ ಹೆಂಚು ಅಥವಾ ನಾನ್ ಸ್ಟಿಕ್ ಪ್ಯಾನ್ ಬಿಸಿಮಾಡಿ ಕೊಳ್ಳಿ. ದೋಸೆ ಹೆಂಚನ್ನು ಬಳಸುತ್ತಿದ್ದರೆ ಮೊದಲಿಗೆ ಎಣ್ಣೆ ಹಚ್ಚಿ. ನಾನ್ ಸ್ಟಿಕ್ ಪ್ಯಾನ್ ಆದಲ್ಲಿ ಎಣ್ಣೆ ಹಚ್ಚಬೇಡಿ, ಎಣ್ಣೆ ಹಚ್ಚಿದರೆ ದೋಸೆ ಹರಡಲು ಸಾಧ್ಯವಾಗುವುದಿಲ್ಲ. ಈಗ ವೃತ್ತಾಕಾರದ ರೀತಿಯಲ್ಲಿ ದೋಸೆ ಹಿಟ್ಟನ್ನು ಹರಡಿ, ಮುಚ್ಚಳವನ್ನು ಮುಚ್ಚಿ .
- 5 ಸೆಕೆಂಡುಗಳ ನಂತರ ಮುಚ್ಚಳವನ್ನು ತೆಗೆದು, ಎಣ್ಣೆ ಅಥವಾ ತುಪ್ಪ ಹಾಕಿ. ದೋಸೆ ಒಂದು ಬದಿ ಕಾಯಿಸಿದರೆ ಸಾಕು. ತೆಂಗಿನಕಾಯಿ ಚಟ್ನಿ ಅಥವಾ ಸಾಂಬಾರ್ ನೊಂದಿಗೆ ಬಡಿಸಿರಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ