Palak parota recipe in Kannada | ಪಾಲಕ್ ಪರೋಟ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- ಗೋಧಿ ಹಿಟ್ಟು (10 ದೊಡ್ಡ ಚಪಾತಿಗಾಗುವಷ್ಟು)
- 1 ಕಟ್ಟು ಪಾಲಕ್ ಸೊಪ್ಪು
- 1ಸೆಮೀ ಉದ್ದದ ಶುಂಠಿ
- 4 ಬೇಳೆ ಬೆಳ್ಳುಳ್ಳಿ
- 1 - 2 ಹಸಿರು ಮೆಣಸಿನಕಾಯಿ
- 2 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- 1/4 ಟೀಸ್ಪೂನ್ ಓಮ ಅಥವಾ ಅಜವೈನ್
- 10 ಟೀಸ್ಪೂನ್ ಅಡುಗೆ ಎಣ್ಣೆ
- ಉಪ್ಪು ರುಚಿಗೆ ತಕ್ಕಷ್ಟು
ಪಾಲಕ್ ಪರೋಟ ಮಾಡುವ ವಿಧಾನ:
- ಪಾಲಕ್ ಸೊಪ್ಪನ್ನು ತೊಳೆದು ಕತ್ತರಿಸಿ.
- ಪಾಲಕ್ ಸೊಪ್ಪು, ಕೊತ್ತಂಬರಿ ಸೊಪ್ಪು, ಶುಂಠಿ, ಬೆಳ್ಳುಳ್ಳಿ ಮತ್ತು ಹಸಿರು ಮೆಣಸಿನಕಾಯಿಯನ್ನು ಮಿಕ್ಸಿಯಲ್ಲಿ ಅರೆಯಿರಿ. ಅರೆಯುವಾಗ ಆದಷ್ಟು ಕಡಿಮೆ ನೀರು ಉಪಯೋಗಿಸಿ.
- ನಂತರ ಒಂದು ಬಟ್ಟಲಿನಲ್ಲಿ ಗೋಧಿ ಹಿಟ್ಟು ತೆಗೆದುಕೊಂಡು, ಅದಕ್ಕೆ ಅರೆದ ಪಾಲಕ್ ಸೊಪ್ಪಿನ ಮಿಶ್ರಣ, ಉಪ್ಪು ಮತ್ತು ಓಮ (ಅಜವೈನ್) ಹಾಕಿ ಕಲಸಿ.
- ಕೊನೆಯಲ್ಲಿ 4 ಚಮಚ ಎಣ್ಣೆ ಹಾಕಿ, ಪುನಃ ಒಮ್ಮೆ ಕಲಸಿ ಒಂದು ಇಪ್ಪತ್ತು ನಿಮಿಷ ಮುಚ್ಚಿಡಿ.
- ಈಗ ಒಂದು ದೊಡ್ಡ ನಿಂಬೆ ಗಾತ್ರದ ಹಿಟ್ಟನ್ನು ತೆಗೆದುಕೊಂಡು, ಗೋಧಿ ಹಿಟ್ಟು ಮುಟ್ಟಿಸಿಕೊಂಡು ಚಪಾತಿಯಂತೆ ವೃತ್ತಾಕಾರವಾಗಿ ಲಟ್ಟಿಸಿ.
- ಒಂದು ಹೆಂಚು ಅಥವಾ ತವಾ ತೆಗೆದುಕೊಂಡು ಬಿಸಿ ಮಾಡಿ. ಲಟ್ಟಿಸಿದ ಪರೋಟವನ್ನು ತವಾ ಮೇಲೆ ಹಾಕಿ ಎರಡು ಬದಿ ಖಾಯಿಸಿ. ಖಾಯಿಸುವಾಗ ಎರಡೂ ಬದಿಯೂ ಸ್ವಲ್ಪ ತುಪ್ಪ ಅಥವಾ ಎಣ್ಣೆ ಹಾಕಿ. ಬಿಸಿ ಬಿಸಿಯಾಗಿರುವಾಗಲೇ ಮೊಸರು ಅಥವಾ ಬೆಣ್ಣೆ ಅಥವಾ ನಿಮ್ಮಿಷ್ಟದ ಗೊಜ್ಜು ಅಥವಾ ಪಲ್ಯದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ