Uppu huli or masale neer dose recipe in Kannada | ಉಪ್ಪು ಹುಳಿ ಅಥವಾ ಮಸಾಲೆ ನೀರ್ ದೋಸೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 2 ಕಪ್ ಅಕ್ಕಿ (ದೋಸೆ ಅಕ್ಕಿ ಆಥವಾ ಸೋನಾ ಮಸೂರಿ)
- 1/2 ಕಪ್ ತೆಂಗಿನ ತುರಿ
- 3 ಕಪ್ ನೀರು (ಅರೆಯುವ ನೀರು ಸೇರಿಸಿ)
- 2 ಟೀಸ್ಪೂನ್ ಕೊತ್ತಂಬರಿ ಬೀಜ
- 1 ಟೀಸ್ಪೂನ್ ಜೀರಿಗೆ
- 2 - 4 ಕೆಂಪು ಮೆಣಸಿನಕಾಯಿ
- 1/2 ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು
- 1 ಟೀಸ್ಪೂನ್ ಬೆಲ್ಲ (ಬೇಕಾದಲ್ಲಿ)
- 7 - 8 ಸಣ್ಣದಾಗಿ ಕೊಚ್ಚಿದ ಕರಿಬೇವಿನ ಎಲೆ
- 1 ಸಣ್ಣದಾಗಿ ಕೊಚ್ಚಿದ ಹಸಿರು ಮೆಣಸಿನಕಾಯಿ (ಬೇಕಾದಲ್ಲಿ)
- ಉಪ್ಪು ರುಚಿಗೆ ತಕ್ಕಷ್ಟು
ಉಪ್ಪು ಹುಳಿ ಅಥವಾ ಮಸಾಲೆ ನೀರ್ ದೋಸೆ ಮಾಡುವ ವಿಧಾನ:
- ಅಕ್ಕಿಯನ್ನು ತೊಳೆದು 5-6 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿ.
- ನಂತರ ನೀರನ್ನು ಬಗ್ಗಿಸಿ, ತೆಂಗಿನ ತುರಿ, ಕೊತ್ತಂಬರಿ, ಜೀರಿಗೆ, ಕೆಂಪು ಮೆಣಸಿನಕಾಯಿ ಮತ್ತು ಹುಣಸೆ ಹಣ್ಣು ಹಾಕಿ ಮಿಕ್ಸರ್ ಗ್ರೈಂಡರ್ ನಲ್ಲಿ ನಯವಾಗಿ ಅರೆಯಿರಿ. ರುಬ್ಬುವ ವೇಳೆ ಹೆಚ್ಚು ನೀರು ಸೇರಿಸಬೇಡಿ. ರುಬ್ಬಲು ಬೇಕಾದಷ್ಟು ನೀರನ್ನು ಮಾತ್ರ ಹಾಕಿ. ಜಾಸ್ತಿ ನೀರು ಹಾಕಿದರೆ ನುಣ್ಣಗೆ ರುಬ್ಬಲು ಸ್ವಲ್ಪ ಕಷ್ಟವಾಗುತ್ತದೆ.
- ನೀರ್ ದೋಸೆ ಹಿಟ್ಟು ಅರೆದ ಮೇಲೆ ಒಂದು ಪಾತ್ರೆಗೆ ಹಾಕಿ. ಈಗ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ. ಸಣ್ಣದಾಗಿ ಕೊಚ್ಚಿದ ಕರಿಬೇವಿನ ಎಲೆ ಸೇರಿಸಿ. ಬೇಕಾದಲ್ಲಿ ಹಸಿರು ಮೆಣಸಿನಕಾಯಿ ಮತ್ತು ಬೆಲ್ಲ ಸೇರಿಸಿ.
- ದೋಸೆ ಹಿಟ್ಟು ತೆಳುವಾಗಲು ಸಾಕಷ್ಟು ನೀರು ಸೇರಿಸಿ. ಒಮ್ಮೆಲೇ ತುಂಬಾ ನೀರು ಸೇರಿಸಬೇಡಿ. ದೋಸೆ ಮಾಡಲು ಪ್ರಾರಂಭಿಸಿದ ನಂತರ ಸ್ವಲ್ಪ ಸ್ವಲ್ಪವಾಗಿ ನೀರು ಸೇರಿಸಿ ಹಿಟ್ಟನ್ನು ಸರಿ ಮಾಡಿಕೊಳ್ಳಿ.
- ಕಬ್ಬಿಣದ ಕಾವಲಿ ಅಥವಾ ನಾನ್ ಸ್ಟಿಕ್ ಪ್ಯಾನ್ ತೆಗೆದುಕೊಂಡು ಒಲೆ ಮೇಲೆ ಇರಿಸಿ. ನೀರು ದೋಸೆ ಮಾಡಲು ಕಾವಲಿ ಚೆನ್ನಾಗಿ ಕಾದಿರ ಬೇಕು. ಕಾದಿದೆಯೇ ಎಂದು ತಿಳಿಯಲು ಎರಡು ಹನಿ ನೀರು ಚಿಮುಕಿಸಿ, ಚರ-ಪರ ಸದ್ದಿನೊಂದಿಗೆ ಆವಿಯಾದಲ್ಲಿ ಕಾದಿದೆ ಎಂದರ್ಥ. ಸಣ್ಣ ಈರುಳ್ಳಿ ಅಥವಾ ಒಂದು ಕ್ಯಾರೆಟ್ ಬಳಸಿಕೊಂಡು ಕಾವಲಿಗೆ ಎಣ್ಣೆ ಹಚ್ಚಿ. ಪ್ರತಿ ದೋಸೆ ಮಾಡುವ ಮುನ್ನ, ಹಿಟ್ಟನ್ನು ಚೆನ್ನಾಗಿ ಸೌಟಿನಲ್ಲಿ ಬೆರೆಸಿಕೊಳ್ಳ ಬೇಕು. ಬಿಸಿ ಕಾವಲಿ ಮೇಲೆ ದೋಸೆ ಹಿಟ್ಟನ್ನು ಸೌಟಿನಿಂದ ಸುರಿಯಿರಿ.
- ಸುಮಾರು 10 ಸೆಕೆಂಡುಗಳ ಕಾಲ ಮುಚ್ಚಳವನ್ನು ಮುಚ್ಚಿ. ನಂತರ ಮುಚ್ಚಳ ತೆರೆದು, ಉರಿಯನ್ನು ಕಡಿಮೆ ಮಾಡಿ, 5 ಸೆಕೆಂಡುಗಳ ಕಾಲ ಬಿಟ್ಟು, ಜಾಗ್ರತೆಯಿಂದ ದೋಸೆ ಸಟ್ಟುಗ ಉಪಯೋಗಿಸಿ ದೋಸೆಯನ್ನು ತೆಗೆಯಿರಿ. ಪುನಃ ಉರಿಯನ್ನು ಹೆಚ್ಚಿಸಿ. ದೋಸೆ ದಪ್ಪ ಎನಿಸಿದರೆ, ಸ್ವಲ್ಪ ನೀರು ಸೇರಿಸಿ. ನೀರ್ ದೋಸೆ ಕಾವಲಿಯಿಂದ ತೆಗೆಯಲು ಕಷ್ಟಸಾಧ್ಯವಾದಲ್ಲಿ, ಸ್ವಲ್ಪ ಅಕ್ಕಿ ಹಿಟ್ಟು ಬೆರೆಸಿ ನಂತರ ಮತ್ತೆ ಪ್ರಯತ್ನಿಸಿ. ಕಾವಲಿ ಮೇಲೆಯೇ ದೋಸೆಯನ್ನು ಮಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ