Peas pulao recipe in Kannada | ಹಸಿ ಬಟಾಣಿ ಪುಲಾವ್ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಬಾಸಮತಿ ಅಕ್ಕಿ
- 1 ಕಪ್ ಹಸಿ ಬಟಾಣಿ
- 1.5 ಕಪ್ ನೀರು
- 0.5 ಕಪ್ ತೆಂಗಿನ ಕಾಯಿಹಾಲು
- 4 ಟೇಬಲ್ ಚಮಚ ತುಪ್ಪ ಅಥವಾ ಎಣ್ಣೆ
- 1 ಸಣ್ಣ ಪುಲಾವ್ ಎಲೆ
- 1 ಮರಾಟಿ ಮೊಗ್ಗು
- 2 ದಳ ಜಾಪತ್ರೆ (ಬೇಕಾದಲ್ಲಿ)
- 1 ಏಲಕ್ಕಿ
- 1/2 ಬೆರಳುದ್ದ ಚಕ್ಕೆ
- 5 - 6 ಲವಂಗ
- 1 ಟೀಸ್ಪೂನ್ ನುಣ್ಣಗೆ ಕತ್ತರಿಸಿದ ಶುಂಠಿ
- 5 ಗೋಡಂಬಿ ತುಂಡು ಮಾಡಿದ್ದು
- 4 - 5 ಬೇಳೆ ಬೆಳ್ಳುಳ್ಳಿ ಸಣ್ಣದಾಗಿ ಕತ್ತರಿಸಿದ್ದು
- 1 - 2 ಹಸಿರು ಮೆಣಸಿನಕಾಯಿ
- 2 ಟೇಬಲ್ ಚಮಚ ಕತ್ತರಿಸಿದ ಪುದೀನಾ ಎಲೆ ಅಥವಾ ಮೆಂತೆ ಸೊಪ್ಪು (ಬೇಕಾದಲ್ಲಿ)
- 2 ಈರುಳ್ಳಿ ಸಣ್ಣದಾಗಿ ಕತ್ತರಿಸಿದ್ದು
- 1 ಟೇಬಲ್ ಚಮಚ ಕತ್ತರಿಸಿದ ಕೊತ್ತಂಬರಿ ಸೊಪ್ಪು
- 2 ಚಮಚ ನಿಂಬೆ ರಸ (ಬೇಕಾದಲ್ಲಿ)
- ಉಪ್ಪು ರುಚಿಗೆ ತಕ್ಕಷ್ಟು
ಹಸಿ ಬಟಾಣಿ ಪುಲಾವ್ ಮಾಡುವ ವಿಧಾನ:
- ಅಕ್ಕಿ ತೊಳೆದು ಹತ್ತು ನಿಮಿಷ ನೀರಿನಲ್ಲಿ ನೆನೆಸಿಡಿ.
- ಬಟಾಣಿ ಸುಲಿಯಿರಿ. ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಮತ್ತು ಪುದಿನ ಎಲೆಗಳನ್ನು ಕತ್ತರಿಸಿ.
- ಉಳಿದ ಎಲ್ಲ ಮಸಾಲೆ ಪದಾರ್ಥಗಳನ್ನು ಸಿದ್ಧ ಮಾಡಿಟ್ಟುಕೊಳ್ಳಿ.
- ಕುಕ್ಕರ್ ನಲ್ಲಿ ತುಪ್ಪ ಅಥವಾ ಎಣ್ಣೆ ತೆಗೆದುಕೊಂಡು ಬಿಸಿ ಮಾಡಿ. ಅದಕ್ಕೆ ಪುಲಾವ್ ಎಲೆ, ಮರಾಟಿ ಮೊಗ್ಗು, ಜಾಪತ್ರೆ, ಏಲಕ್ಕಿ, ಚಕ್ಕೆ ಮತ್ತು ಲವಂಗ ಸೇರಿಸಿ. ಕೆಲವು ಸೆಕೆಂಡುಗಳ ಕಾಲ ಹುರಿಯಿರಿ.
- ಸಣ್ಣದಾಗಿ ಕತ್ತರಿಸಿದ ಶುಂಠಿ , ಬೆಳ್ಳುಳ್ಳಿ ಮತ್ತು ತುಂಡು ಮಾಡಿದ ಗೋಡಂಬಿಯನ್ನು ಸೇರಿಸಿ. ಕೆಲವು ಸೆಕೆಂಡುಗಳ ಕಾಲ ಹುರಿಯಿರಿ.
- ಕತ್ತರಿಸಿದ ಪುದಿನ ಎಲೆ ಮತ್ತು ಹಸಿರು ಮೆಣಸಿನಕಾಯಿ ಸೇರಿಸಿ ಹುರಿಯಿರಿ.
- ಸಣ್ಣದಾಗಿ ಕತ್ತರಿಸಿದ ಈರುಳ್ಳಿ ಹಾಕಿ ಮಗುಚಿ.
- ಮತ್ತು ಸುಲಿದ ಬಟಾಣಿ ಹಾಕಿ ಮಧ್ಯಮ ಉರಿಯಲ್ಲಿ ಈರುಳ್ಳಿ ಮೆತ್ತಗಾಗುವವರೆಗೆ ಹುರಿಯಿರಿ.
- ನಂತರ ತೊಳೆದಿಟ್ಟ ಅಕ್ಕಿ ಹಾಕಿ 2 - 3 ನಿಮಿಷಗಳ ಕಾಲ ಹುರಿಯಿರಿ.
- ನೀರು ಮತ್ತು ತೆಂಗಿನ ಕಾಯಿ ಹಾಲು ಹಾಕಿ ಮಗುಚಿ.
- ಉಪ್ಪು ಸೇರಿಸಿ, ಮಗುಚಿ, ಮುಚ್ಚಳ ಮುಚ್ಚಿ 2 ವಿಷಲ್ ಮಾಡಿ.
- ಒತ್ತಡ ಇಳಿದ ಕೂಡಲೇ ಕತ್ತರಿಸಿದ ಕೊತ್ತಂಬರಿ ಸೊಪ್ಪು ಮತ್ತು ನಿಂಬೆರಸ ಹಾಕಿ ಕಲಸಿ. ಮೊಸರು ಬಜ್ಜಿ ಅಥವಾ ಸಲಾಡ್ ನೊಂದಿಗೆ ಸವಿಯಿರಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ