Siridhanya mosaranna recipe in kannada | ಸಿರಿಧಾನ್ಯದ ಮೊಸರನ್ನ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್)
- 1/2 ಕಪ್ ಸಿರಿಧಾನ್ಯ
- 2 ಕಪ್ ಮೊಸರು
- 1/2 ಕಪ್ ಹಾಲು (ಮೊಸರು ಹುಳಿ ಇದ್ದರೆ ಮಾತ್ರ)
- 1/2 ಚಮಚ ಸಾಸಿವೆ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡಲೆಬೇಳೆ
- 5 - 6 ಗೋಡಂಬಿ (ಬೇಕಾದಲ್ಲಿ)
- 4 - 5 ಕರಿಬೇವಿನ ಎಲೆ
- 1 ಹಸಿರು ಮೆಣಸಿನಕಾಯಿ
- ಒಂದು ಸೆಮೀ ಉದ್ದದ ಶುಂಠಿ ಸಣ್ಣಗೆ ಕತ್ತರಿಸಿದ್ದು
- ಒಂದು ಚಿಟಿಕೆ ಇಂಗು
- ಒಂದು ಮಧ್ಯಮ ಗಾತ್ರದ ಈರುಳ್ಳಿ ಹೆಚ್ಚಿದ್ದು
- 1 ಟೇಬಲ್ ಚಮಚ ಸಣ್ಣಗೆ ಕತ್ತರಿಸಿದ ಕೊತ್ತಂಬರಿ ಸೊಪ್ಪು
- 2 ಟೀ ಚಮಚ ಅಡುಗೆ ಎಣ್ಣೆ
- ಉಪ್ಪು ರುಚಿಗೆ ತಕ್ಕಷ್ಟು
ಸಿರಿಧಾನ್ಯದ ಮೊಸರನ್ನ ಮಾಡುವ ವಿಧಾನ:
- ಮೊದಲಿಗೆ ಯಾವುದೇ ಸಿರಿಧಾನ್ಯವನ್ನು ಮೆತ್ತಗೆ ಬೇಯಿಸಿಟ್ಟು ಕೊಳ್ಳಿ. ನಾನು 1/2 ಕಪ್ ಸಿರಿಧಾನ್ಯಕ್ಕೆ 1.5 ಕಪ್ ನೀರು ಬಳಸಿದ್ದೇನೆ.
- ಒಂದು ಬಾಣಲೆಯಲ್ಲಿ ಎಣ್ಣೆ, ಸಾಸಿವೆ, ಉದ್ದಿನ ಬೇಳೆ, ಕಡಲೆಬೇಳೆ ಮತ್ತು ಗೋಡಂಬಿಯ ಒಗ್ಗರಣೆ ಮಾಡಿ.
- ಸಾಸಿವೆ ಸಿಡಿದ ಮೇಲೆ ಕರಿಬೇವಿನ ಎಲೆ, ಸೀಳಿದ ಹಸಿರು ಮೆಣಸಿನಕಾಯಿ, ಸಣ್ಣಗೆ ಕತ್ತರಿಸಿದ ಶುಂಠಿ ಮತ್ತು ಇಂಗು ಹಾಕಿ.
- ನಂತರ ಈರುಳ್ಳಿ ಹಾಕಿ ಹೊಂಬಣ್ಣಕ್ಕೆ ಬರುವವರೆಗೆ ಹುರಿಯಿರಿ.
- ಮೆತ್ತಗೆ ಬೇಯಿಸಿಟ್ಟ ಸಿರಿಧಾನ್ಯದ ಅನ್ನ ಹಾಕಿ ಕಲಸಿ.
- ಅನ್ನ ಬಿಸಿ ಆರಿದ ಮೇಲೆ ಮೊಸರು ಹಾಕಿ. ಮೊಸರು ಹುಳಿ ಇದ್ದಲ್ಲಿ ಹಾಲನ್ನು ಸೇರಿಸಿ. ಕೊತ್ತಂಬರಿ ಸೊಪ್ಪು ಮತ್ತು ದಾಳಿಂಬೆಯಿಂದ (ದಾಳಿಂಬೆ ಬೇಕಾದಲ್ಲಿ) ಅಲಂಕರಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ