Badanekayi palya recipe in Kannada | ಬದನೇಕಾಯಿ ಪಲ್ಯ ಮಾಡುವ ವಿಧಾನ
ಬದನೇಕಾಯಿ ಪಲ್ಯ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ 240 ಎಂ ಎಲ್ ):
- 2 ಬದನೆ ಕಾಯಿ
- 1/2 ಚಮಚ ಸಾಸಿವೆ
- 1 ಟೀಸ್ಪೂನ್ ಕಡ್ಲೆಬೇಳೆ
- 1 ಟೀಸ್ಪೂನ್ ಉದ್ದಿನ ಬೇಳೆ
- 1/4 ಟೀಸ್ಪೂನ್ ಅರಿಶಿನ ಪುಡಿ
- ಒಂದು ದೊಡ್ಡ ಚಿಟಿಕೆ ಇಂಗು
- 5 - 6 ಕರಿಬೇವಿನ ಎಲೆ
- 1 ಹಸಿರು ಮೆಣಸಿನಕಾಯಿ
- 2 ಟೀಸ್ಪೂನ್ ಬೆಲ್ಲ
- ಒಂದು ಗೋಲಿ ಗಾತ್ರದ ಹುಣಿಸೇಹಣ್ಣು
- ನಿಮ್ಮ ರುಚಿ ಪ್ರಕಾರ ಉಪ್ಪು
- 4 ಟೀಸ್ಪೂನ್ ಅಡುಗೆ ಎಣ್ಣೆ
ಬದನೇಕಾಯಿ ಪಲ್ಯ ಮಾಡುವ ವಿಧಾನ:
- ಮೊದಲಿಗೆ ಬದನೆಕಾಯಿಯನ್ನು ಉದ್ದುದ್ದವಾಗಿ ಕತ್ತರಿಸಿ ನೀರಿನಲ್ಲಿ ಹಾಕಿಟ್ಟು ಕೊಳ್ಳಿ. ಹಾಗೆಯೆ ಈರುಳ್ಳಿಯನ್ನು ಉದ್ದುದ್ದವಾಗಿ ಕತ್ತರಿಸಿ.
- ಎಣ್ಣೆ, ಸಾಸಿವೆ, ಉದ್ದಿನ ಬೇಳೆ, ಕಡ್ಲೆಬೇಳೆ, ಹಸಿರು ಮೆಣಸಿನ ಕಾಯಿ, ಕರಿಬೇವು, ಅರಶಿನ ಪುಡಿ ಮತ್ತು ಇಂಗಿನ ಒಗ್ಗರಣೆ ಮಾಡಿಕೊಳ್ಳಿ.
- ಕತ್ತರಿಸಿಟ್ಟ ಈರುಳ್ಳಿ ಹಾಕಿ ಒಂದೆರಡು ನಿಮಿಷ ಹುರಿಯಿರಿ.
- ನಂತರ ನೀರಿನಲ್ಲಿ ಹಾಕಿದ ಬದನೆಕಾಯಿಯನ್ನು, ನೀರು ಹಿಂಡಿ ತೆಗೆದು ಹಾಕಿ, ಮಧ್ಯಮ ಉರಿಯಲ್ಲಿ ಒಂದೆರಡು ನಿಮಿಷ ಹುರಿಯಿರಿ.
- ಉಪ್ಪು, ಬೆಲ್ಲ ಮತ್ತು ಹುಣಿಸೆರಸ ಹಾಕಿ ಮಗುಚಿ.
- ಮುಚ್ಚಳ ಮುಚ್ಚಿ, ಸಣ್ಣ ಉರಿಯಲ್ಲಿ ಬೇಯಿಸಿ. ಚಪಾತಿ ಅಥವಾ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ