Hagalakayi palya recipe in Kannada | ಹಾಗಲಕಾಯಿ ಪಲ್ಯ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಹಾಗಲಕಾಯಿ
- 1/2 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಉದ್ದಿನ ಬೇಳೆ
- 4 ಟೀಸ್ಪೂನ್ ಅಡುಗೆ ಎಣ್ಣೆ
- 1 ದೊಡ್ಡ ಚಿಟಿಕೆ ಅರಿಶಿನ ಪುಡಿ
- 1 ದೊಡ್ಡ ಚಿಟಿಕೆ ಇಂಗು
- 4 - 5 ಕರಿಬೇವಿನ ಎಲೆ
- ಒಂದು ದೊಡ್ಡ ಲಿಂಬೆ ಗಾತ್ರದ ಬೆಲ್ಲ
- ಒಂದು ಸಣ್ಣ ಲಿಂಬೆ ಗಾತ್ರದ ಹುಣಿಸೇಹಣ್ಣು
- ಉಪ್ಪು ರುಚಿಗೆ ತಕ್ಕಷ್ಟು
- 1 ಕಪ್ ನೀರು
ಅರೆಯಲು ಬೇಕಾಗುವ ಪದಾರ್ಥಗಳು:
- 1/2 ಕಪ್ ತೆಂಗಿನ ತುರಿ
- 2 - 4 ಒಣ ಮೆಣಸಿನ ಕಾಯಿ
- 1/2 ಟೀಸ್ಪೂನ್ ಸಾಸಿವೆ
ಹಾಗಲಕಾಯಿ ಪಲ್ಯ ಮಾಡುವ ವಿಧಾನ:
- ಹಾಗಲಕಾಯಿಯನ್ನು ತೊಳೆದು ಸಣ್ಣದಾಗಿ ಕತ್ತರಿಸಿ, ಉಪ್ಪು ನೀರಿನಲ್ಲಿ 10 ನಿಮಿಷ ಹಾಕಿಡಿ (ಒಂದು ಚಮಚ ಉಪ್ಪು ಮತ್ತು ಅಗತ್ಯವಿದ್ದಷ್ಟು ನೀರು).
- ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಸಾಸಿವೆ ಮತ್ತು ಉದ್ದಿನಬೇಳೆ ಹಾಕಿ. ಸಾಸಿವೆ ಸಿಡಿದ ಕೂಡಲೇ ಅರಶಿನ, ಇಂಗು ಮತ್ತು ಕರಿಬೇವಿನ ಎಲೆ ಹಾಕಿ.
- ಕತ್ತರಿಸಿದ ಹಾಗಲಕಾಯಿಯನ್ನು. ನೀರು ಬಸಿದು ಹಾಕಿ. ಒಂದು ನಿಮಿಷ ಮಗುಚಿ.
- 1 ಕಪ್ ನೀರು ಸೇರಿಸಿ, ಕುದಿಸಿ. ಸಣ್ಣ ಉರಿಯಲ್ಲಿ ಹಾಗಲಕಾಯಿಯನ್ನು ಬೇಯಿಸಿ. ಗಮನಿಸಿ, ಮುಚ್ಚಳ ಮುಚ್ಚಬಾರದು. ಅಗತ್ಯವಿದ್ದಲ್ಲಿ ಹೆಚ್ಚಿನ ನೀರು ಸೇರಿಸಬಹುದು.
- ಹಾಗಲಕಾಯಿ ಮೆತ್ತಗಾದ ಕೂಡಲೇ ಅಥವಾ ಬೆಂದ ಕೂಡಲೇ, ಉಪ್ಪು, ಹುಣಿಸೆಹಣ್ಣಿನ ರಸ ಮತ್ತು ಬೆಲ್ಲ ಹಾಕಿ. ಮಂದ ಉರಿಯಲ್ಲಿ ಬೇಯಿಸುವುದನ್ನು ಮುಂದುವರೆಸಿ. ಒಂದೆರಡು ಬಾರಿ ಮಗುಚಿ.
- ಅದೇ ಸಮಯದಲ್ಲಿ ಒಂದು ಮಿಕ್ಸಿ ಜಾರ್ ನಲ್ಲಿ ತೆಂಗಿನ ತುರಿ, 1/4 ಚಮಚ ಸಾಸಿವೆ ಮತ್ತು ಒಣ ಮೆಣಸು ಹಾಕಿ, ನೀರು ಹಾಕದೆ ಪುಡಿ ಮಾಡಿಟ್ಟು ಕೊಳ್ಳಿ.
- ಅರೆದ ಮಿಶ್ರಣವನ್ನು ಸೇರಿಸಿ, 2 ನಿಮಿಷ ಮಗುಚಿ. ಸ್ಟೋವ್ ಆಫ್ ಮಾಡಿ. ಚಪಾತಿ ಅಥವಾ ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ