Kadle bele uddina bele chutney recipe | ಕಡ್ಲೆಬೇಳೆ ಉದ್ದಿನಬೇಳೆ ಚಟ್ನಿ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ತೆಂಗಿನ ತುರಿ
- 1 - 2 ಒಣ ಮೆಣಸಿನಕಾಯಿ
- 2 ಟೀಸ್ಪೂನ್ ಉದ್ದಿನ ಬೇಳೆ
- 2 ಟೀಸ್ಪೂನ್ ಕಡ್ಲೆ ಬೇಳೆ
- 1/4 ಟೀಸ್ಪೂನ್ ಕೊತ್ತಂಬರಿ ಬೀಜ
- ಸಣ್ಣ ಗೋಲಿ ಗಾತ್ರದ ಹುಣಿಸೇಹಣ್ಣು
- 1/2 ಟೀಸ್ಪೂನ್ ಅಡುಗೆ ಎಣ್ಣೆ
- ಉಪ್ಪು ರುಚಿಗೆ ತಕ್ಕಷ್ಟು.
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಒಣ ಮೆಣಸಿನಕಾಯಿ
- 1/4 ಟೀಸ್ಪೂನ್ ಸಾಸಿವೆ
- 4 ಕರಿಬೇವಿನ ಎಲೆ
- ಚಿಟಿಕೆ ಇಂಗು
- 2 ಟೀಸ್ಪೂನ್ ಅಡುಗೆ ಎಣ್ಣೆ
ಕಡ್ಲೆಬೇಳೆ ಉದ್ದಿನಬೇಳೆ ಚಟ್ನಿ ಮಾಡುವ ವಿಧಾನ:
- ಒಂದು ಬಾಣಲೆಗೆ ಎಣ್ಣೆ, ಒಣ ಮೆಣಸಿನಕಾಯಿ, ಕಡ್ಲೆಬೇಳೆ, ಉದ್ದಿನಬೇಳೆ ಮತ್ತು ಕೊತ್ತಂಬರಿ ಬೀಜ ಹಾಕಿ ಹೊಂಬಣ್ಣ ಬರುವವರೆಗೆ ಹುರಿಯಿರಿ.
- ತೆಂಗಿನ ತುರಿ, ಹುರಿದ ಪದಾರ್ಥಗಳು, ಉಪ್ಪು ಮತ್ತು ಹುಣಿಸೇಹಣ್ಣು ಹಾಕಿ. ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ.
- ಒಣಮೆಣಸಿನಕಾಯಿ, ಇಂಗು, ಕರಿಬೇವು ಮತ್ತು ಸಾಸಿವೆಯ ಒಗ್ಗರಣೆ ಮಾಡಿ. ದೋಸೆ, ಇಡ್ಲಿ ಅಥವಾ ಅನ್ನದೊಂದಿಗೆ ಬಡಿಸಿ.
I am looking forward to try various chutneys you have so generously shared with us. I have forwarded your blog to several dozen friends of mine.
ಪ್ರತ್ಯುತ್ತರಅಳಿಸಿRegards
Henry