Nellikai chitranna recipe in Kannada | ನೆಲ್ಲಿಕಾಯಿ ಚಿತ್ರಾನ್ನ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂ ಎಲ್)
- 1/2 ಕಪ್ ಅಕ್ಕಿ (ಸೋನಾ ಮಸೂರಿ)
- 1/4 ಕಪ್ ತೆಂಗಿನ ತುರಿ
- 3 ದೊಡ್ಡ ನೆಲ್ಲಿಕಾಯಿ
- 1 ದೊಡ್ಡ ಈರುಳ್ಳಿ
- 1 - 2 ಹಸಿರು ಮೆಣಸಿನಕಾಯಿ
- 1/2 ಟೀಸ್ಪೂನ್ ಸಾಸಿವೆ
- 2 ಟೇಬಲ್ ಸ್ಪೂನ್ ಶೇಂಗಾ / ಕಡಲೆಕಾಯಿ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡ್ಲೆಬೇಳೆ
- 1 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
- 5 - 6 ಕರಿಬೇವಿನ ಎಲೆ
- 2 ಟೀ ಚಮಚ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1/4 ಟೀಸ್ಪೂನ್ ಅರಿಶಿನ ಪುಡಿ
- 4 ಟೇಬಲ್ ಸ್ಪೂನ್ ಅಡುಗೆ ಎಣ್ಣೆ
ನೆಲ್ಲಿಕಾಯಿ ಚಿತ್ರಾನ್ನ ಮಾಡುವ ವಿಧಾನ:
- ಒಂದು ಕುಕ್ಕರ್ ನಲ್ಲಿ ಅಕ್ಕಿ ತೊಳೆದು ಅನ್ನ ಮಾಡಿಟ್ಟುಕೊಳ್ಳಿ. ಅನ್ನ ಸ್ವಲ್ಪ ಉದುರುದುರಾಗಿರಲಿ.
- ಅನ್ನ ಬೇಯುವ ಸಮಯದಲ್ಲಿ ಚಿತ್ರಾನ್ನಕ್ಕೆ ಒಗ್ಗರಣೆ ಮಾಡಿಕೊಳ್ಳೋಣ. ಒಂದು ದೊಡ್ಡ ಬಾಣಲೆಯಲ್ಲಿ ಎಣ್ಣೆ ಹಾಕಿ ಕಾಯಲು ಇಡಿ. ಮೊದಲಿಗೆ ಶೇಂಗಾ ಅಥವಾ ಕಡಲೆಕಾಯಿಯನ್ನು ಹಾಕಿ.
- ಕಡಲೆಕಾಯಿ ಸ್ವಲ್ಪ ಕಾದು ಸಿಡಿಯಲು ಪ್ರಾರಂಭಿಸಿದ ಕೂಡಲೇ ಸಾಸಿವೆ, ಕಡ್ಲೆಬೇಳೆ ಮತ್ತು ಉದ್ದಿನ ಬೇಳೆಯನ್ನು ಸೇರಿಸಿ.
- ಸಾಸಿವೆ ಸಿಡಿದ ಕೂಡಲೇ ಸಣ್ಣಗೆ ಕತ್ತರಿಸಿದ ಈರುಳ್ಳಿ, ಹಸಿರು ಮೆಣಸಿನಕಾಯಿ ಮತ್ತು ಕರಿಬೇವು ಸೇರಿಸಿ. ಈರುಳ್ಳಿ ಮೆತ್ತಗಾಗುವವರೆಗೆ ಹುರಿಯಿರಿ.
- ನಂತರ ತೆಂಗಿನ ತುರಿ, ತುರಿದ ನೆಲ್ಲಿಕಾಯಿ ಮತ್ತು ಅರಿಶಿನ ಪುಡಿ ಹಾಕಿ ಚೆನ್ನಾಗಿ ಕಲಸಿ. ಸ್ಟೋವ್ ಆಫ್ ಮಾಡಿ.
- ನಂತರ ಬೇಯಿಸಿದ ಅನ್ನ, ಹೆಚ್ಚಿದ ಕೊತ್ತಂಬರಿ ಸೊಪ್ಪು ಮತ್ತು ಉಪ್ಪು ಸೇರಿಸಿ ಕಲಸಿ..
- ಎಚ್ಚರಿಕೆಯಿಂದ ಒಂದು ಚಪ್ಪಟೆಯಾದ ಸಟ್ಟುಗ ಬಳಸಿ ಚಿತ್ರಾನ್ನವನ್ನು ಕಲಸಿ.ಬಿಸಿ-ಬಿಸಿ ಯಾಗಿರುವಾಗಲೇ ಬಡಿಸಿ.
To read more and to see step by step pictures click here (ಈ ಅಡುಗೆ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ