Seke undlaka recipe in Kannada | ಸೆಕೆ ಉಂಡ್ಲಕ ಮಾಡುವ ವಿಧಾನ
ಸೆಕೆ ಉಂಡ್ಲಕ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಅಕ್ಕಿ ಹಿಟ್ಟು
- 1 ಕಪ್ ತೆಂಗಿನ ತುರಿ
- 1/2 ಕಪ್ ಬೆಲ್ಲ
- 1.5 - 2 ಕಪ್ ನೀರು (ಅಕ್ಕಿ ಹಿಟ್ಟಿನ ಗುಣಮಟ್ಟ ಅವಲಂಬಿಸಿ)
- 1 - 2 ಏಲಕ್ಕಿ
- 2 ಟೀಸ್ಪೂನ್ ತುಪ್ಪ
- ಉಪ್ಪು ರುಚಿಗೆ ತಕ್ಕಷ್ಟು
ಸೆಕೆ ಉಂಡ್ಲಕ ಮಾಡುವ ವಿಧಾನ:
- ಒಂದು ಬಾಣಲೆಯಲ್ಲಿ 1.5 ಕಪ್ ನೀರು, 1/2 ಟೀಸ್ಪೂನ್ ತುಪ್ಪ ಮತ್ತು ಉಪ್ಪು ಹಾಕಿ ಕುದಿಯಲು ಇಡಿ.
- ನೀರು ಕುದಿಯಲು ಪ್ರಾರಂಭಿಸಿದ ಕೂಡಲೇ ಅಕ್ಕಿ ಹಿಟ್ಟನ್ನು ಹಾಕಿ, ಒಮ್ಮೆ ಚೆನ್ನಾಗಿ ಮಗುಚಿ ಸ್ಟವ್ ಆಫ್ ಮಾಡಿ.
- ನಂತರ, ಅಗತ್ಯವಿದ್ದಲ್ಲಿ ಸ್ವಲ್ಪ ನೀರು ಸೇರಿಸಿ ಮೃದುವಾದ ಹಿಟ್ಟನ್ನು ತಯಾರಿಸಿ. ಮುಚ್ಚಳ ಮುಚ್ಚಿ ಬಿಸಿ ಆರಲು ಬಿಡಿ.
- ಅಕ್ಕಿ ಹಿಟ್ಟು ಬಿಸಿ ಆರಿದ ಮೇಲೆ, ಕೈಗೆ ತುಪ್ಪ ಸವರಿಕೊಂಡು, ಸಣ್ಣ ಗೋಲಿ ಗಾತ್ರದ ಉಂಡೆಗಳನ್ನು ಮಾಡಿ.
- ಸೆಕೆಯಲ್ಲಿ (ಆವಿಯಲ್ಲಿ) ತುಪ್ಪ ಸವರಿದ ಪ್ಲೇಟ್ ನಲ್ಲಿಟ್ಟು 10 ನಿಮಿಷ ಬೇಯಿಸಿ.
- ಆ ಸಮಯದಲ್ಲಿ ಮಿಕ್ಸಿ ಜಾರಿಗೆ ತೆಂಗಿನ ತುರಿ, ಏಲಕ್ಕಿ ಮತ್ತು ಬೆಲ್ಲ ಹಾಕಿ ನೀರು ಹಾಕದೆ ಪುಡಿ ಮಾಡಿ.
- ಪುಡಿಮಾಡಿದ ತೆಂಗಿನ ತುರಿ ಮತ್ತು ಬೆಲ್ಲವನ್ನು ಒಂದು ಬಾಣಲೆಗೆ ಹಾಕಿ ಬಿಸಿ ಮಾಡಿ. ಕಾಯಿ-ಬೆಲ್ಲ ಸಿದ್ಧ ಮಾಡಿಕೊಳ್ಳಿ. ಗಮನಿಸಿ, ನೀರಾರುವಂತೆ ಸ್ವಲ್ಪ ಮಗುಚಿದರೆ ಸಾಕು. ಸ್ಟವ್ ಆಫ್ ಮಾಡಿ.
- ಈಗ ಬೇಯಿಸಿದ ಅಕ್ಕಿ ಹಿಟ್ಟಿನ ಉಂಡೆಗಳನ್ನು ಕಾಯಿ-ಬೆಲ್ಲ ಕ್ಕೆ ಹಾಕಿ ಮಗುಚಿ.
- ತುಪ್ಪದೊಂದಿಗೆ ಸವಿದು ಆನಂದಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ