ಮಂಗಳವಾರ, ಜನವರಿ 10, 2017

Unde kadubu recipe in Kannada | ಉಂಡೆ ಕಡುಬು ಅಥವಾ ಪುಂಡಿ ಗಟ್ಟಿ ಮಾಡುವ ವಿಧಾನ

Unde kadubu recipe in Kannada

Unde kadubu recipe in Kannada | ಉಂಡೆ ಕಡುಬು ಅಥವಾ ಪುಂಡಿ ಗಟ್ಟಿ ಮಾಡುವ ವಿಧಾನ 

ಉಂಡೆ ಕಡುಬು ವಿಡಿಯೋ

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 1 ಕಪ್ ಸೋನಾ ಮಸೂರಿ ಅಕ್ಕಿ
  2. 1/2 ಕಪ್ ತೆಂಗಿನ ತುರಿ
  3. 2 ಕಪ್ ನೀರು 
  4. ಉಪ್ಪು ರುಚಿಗೆ ತಕ್ಕಷ್ಟು

ಉಂಡೆ ಕಡುಬು ಅಥವಾ ಪುಂಡಿ ಗಟ್ಟಿ ಮಾಡುವ ವಿಧಾನ:

  1. ಅಕ್ಕಿಯನ್ನು ತೊಳೆದು, ನೀರು ಬಗ್ಗಿಸಿ, ಅಗಲವಾದ ಪಾತ್ರೆಯಲ್ಲಿ ಹರಡಿ ನೀರಾರಲು ಬಿಡಿ. 
  2. ನಂತರ ಮಿಕ್ಸಿಯಲ್ಲಿ ತೆಂಗಿನ ತುರಿಯೊಂದಿಗೆ, ತರಿ ತರಿಯಾಗಿ ಪುಡಿ ಮಾಡಿಕೊಳ್ಳಿ. ಕೆಲವು ಸೆಕೆಂಡ್ ಗಳ ಕಾಲ ಮಿಕ್ಸಿ ಮಾಡಿದರೆ ಸಾಕಾಗುತ್ತದೆ. 
  3. ಒಂದು ಬಾಣಲೆಯಲ್ಲಿ ನೀರು ಮತ್ತು ಉಪ್ಪು ಹಾಕಿ ಕುದಿಯಲು ಇಡಿ. 
  4. ನೀರು ಕುದಿಯಲು ಪ್ರಾರಂಭಿಸಿದ ನಂತರ ಅಕ್ಕಿ ತರಿ ಅಥವಾ ರವೆಯನ್ನು ಹಾಕುತ್ತಾ ದೋಸೆ ಸಟ್ಟುಗ ಉಪಯೋಗಿಸಿ ಗಂಟಾಗದಂತೆ ಮಗುಚಿ. 
  5. ಮಧ್ಯಮ ಉರಿಯಲ್ಲಿ ಗಟ್ಟಿಯಾಗುವವರೆಗೆ ಮಗುಚಿ. ತುಂಬ ಗಟ್ಟಿಯಾಗುವುದು ಬೇಡ. ಸಟ್ಟುಗ ಬೀಳದೆ ನೇರ ನಿಲ್ಲುವಷ್ಟು ಗಟ್ಟಿ ಆದರೆ ಸಾಕು. ಸ್ಟವ್ ಆಫ್ ಮಾಡಿ.
  6. ಸ್ವಲ್ಪ ಬಿಸಿ ಆರಿದ ಮೇಲೆ, ಕೈಗೆ ನೀರು ಮುಟ್ಟಿಸಿಕೊಂಡು, ಸಣ್ಣ ಕಿತ್ತಳೆ ಗಾತ್ರದ ಉಂಡೆಗಳನ್ನು ಮಾಡಿ, ಹೆಬ್ಬೆರಳಿಂದ ಒಂದು ಗುಳಿಯನ್ನು ಮಾಡಿ. ಅಥವಾ ನಿಮ್ಮಿಷ್ಟದಂತೆ ಚಪ್ಪಟೆ ಅಥವಾ ಗೋಲಾಕಾರದಲ್ಲೂ ಮಾಡಬಹುದು. 
  7. ಸೆಕೆಯಲ್ಲಿ (ಆವಿಯಲ್ಲಿ) 15 ನಿಮಿಷ ಬೇಯಿಸಿ. ಬೇಯಿಸುವ ಸಮಯ ಕಡುಬಿನ ಪ್ರಮಾಣದ ಮೇಲೆ ಬದಲಾಗಬಹುದು. ಚಟ್ನಿ, ಸಾಂಬಾರ್ ಅಥವಾ ಸಾರಿನಿಂದಿಗೆ ಸವಿದು ಆನಂದಿಸಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Related Posts Plugin for WordPress, Blogger...