ಶುಕ್ರವಾರ, ಫೆಬ್ರವರಿ 17, 2017

Agase chutney pudi recipe in Kannada | ಅಗಸೆ ಬೀಜದ ಚಟ್ನಿ ಪುಡಿ ಮಾಡುವ ವಿಧಾನ

Agase chutney pudi recipe in Kannada

Agase chutney pudi recipe in Kannada | ಅಗಸೆ ಬೀಜದ ಚಟ್ನಿ ಪುಡಿ ಮಾಡುವ ವಿಧಾನ 

ಅಗಸೆ ಬೀಜದ ಚಟ್ನಿ ಪುಡಿ ವಿಡಿಯೋ

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 10 - 20 ಒಣ ಮೆಣಸಿನಕಾಯಿ (ಮಧ್ಯಮ ಖಾರ)
  2. 1/2 ಕಪ್ ಅಗಸೆ ಬೀಜ
  3. 1/2 ಕಪ್ ಕಡಲೆಬೇಳೆ 
  4. 1/2 ಕಪ್ ಉದ್ದಿನ ಬೇಳೆ 
  5. 1/2 ಕಪ್ ಒಣ ಕೊಬ್ಬರಿ ತುರಿದಿದ್ದು
  6. 1/4 ಕಪ್ ಕರಿಬೇವಿನ ಎಲೆ
  7. 1/2 ಟೀಸ್ಪೂನ್ ಇಂಗು
  8. ಸಣ್ಣ ಲಿಂಬೆ ಹಣ್ಣಿನ ಗಾತ್ರದ ಹುಣಿಸೇಹಣ್ಣು (ನಾನು ವಾಟೆಹುಳಿ ಪುಡಿ ಉಪಯೋಗಿಸಿದ್ದೇನೆ)
  9. 2 ಟೀಸ್ಪೂನ್ ಅಡುಗೆ ಎಣ್ಣೆ

ಅಗಸೆ ಬೀಜದ ಚಟ್ನಿ ಪುಡಿ ಮಾಡುವ ವಿಧಾನ:

  1. ಒಂದು ಬಾಣಲೆಯನ್ನು ಬಿಸಿ ಮಾಡಿ. ಅಗಸೆ ಬೀಜವನ್ನು ಹೊಟ್ಟುವವರೆಗೆ ಅಥವಾ ಸಿಡಿಯುವವರೆಗೆ ಹುರಿದು ತೆಗೆದಿಡಿ.
  2. ನಂತರ ಕಡಲೆಬೇಳೆಯನ್ನು ಮಧ್ಯಮ ಉರಿಯಲ್ಲಿ ಸ್ವಲ್ಪ ಕಂದು ಬಣ್ಣ ಬರುವವರವರೆಗೆ ಹುರಿದು ತೆಗೆದಿಡಿ.
  3. ನಂತರ ಉದ್ದಿನ ಬೇಳೆಯನ್ನು ಮಧ್ಯಮ ಉರಿಯಲ್ಲಿ ಸ್ವಲ್ಪ ಕಂದು ಬಣ್ಣ ಬರುವವರವರೆಗೆ ಹುರಿದು ತೆಗೆದಿಡಿ.
  4. ನಂತರ 2 ಚಮಚ ಅಡುಗೆ ಎಣ್ಣೆ ಹಾಕಿ ಒಣ ಮೆಣಸಿನಕಾಯಿಗಳನ್ನು ಹುರಿಯಿರಿ.
  5. ಅದಕ್ಕೆ ಒಣ ಕೊಬ್ಬರಿ ಮತ್ತು ಕರಿಬೇವು ಸೇರಿಸಿ ಹುರಿಯಿರಿ. 
  6. ಕೊನೆಯಲ್ಲಿ ಇಂಗು ಮತ್ತು ಹುಣಿಸೆಹಣ್ಣಿನ ಚೂರುಗಳನ್ನು ಹಾಕಿ ಕೆಲವು ಸೆಕೆಂಡ್ಗಳ ಕಾಲ ಹುರಿಯಿರಿ. 
  7. ಹುರಿದ ಎಲ್ಲ ಪದಾರ್ಥಗಳು ತಣ್ಣಗೆ ಆದ ಮೇಲೆ ಮಿಕ್ಸಿ ಜಾರಿಗೆ ಹಾಕಿ ನುಣ್ಣನೆ ಪುಡಿ ಮಾಡಿ. ಗಾಳಿಯಾಡದ ಡಬ್ಬದಲ್ಲಿ ಹಾಕಿ ಎತ್ತಿಡಿ. 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Related Posts Plugin for WordPress, Blogger...