Ottu shavige recipe in Kannada | ಒತ್ತು ಶಾವಿಗೆ ಮಾಡುವ ವಿಧಾನ
ಒತ್ತು ಶಾವಿಗೆ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಅಕ್ಕಿ ಹಿಟ್ಟು
- 1.5 ಕಪ್ ನೀರು (ಅಕ್ಕಿ ಹಿಟ್ಟಿನ ಗುಣಮಟ್ಟ ಅವಲಂಬಿಸಿ ಸ್ವಲ್ಪ ಹೆಚ್ಚು ಕಡಿಮೆ)
- 1 ಟೀಸ್ಪೂನ್ ತುಪ್ಪ
- ಉಪ್ಪು ರುಚಿಗೆ ತಕ್ಕಷ್ಟು
ಒತ್ತು ಶಾವಿಗೆ ಮಾಡುವ ವಿಧಾನ:
- ಒಂದು ಬಾಣಲೆಯಲ್ಲಿ ನೀರು, 1/2 ಟೀಸ್ಪೂನ್ ತುಪ್ಪ ಮತ್ತು ಉಪ್ಪು ಹಾಕಿ ಕುದಿಯಲು ಇಡಿ.
- ನೀರು ಕುದಿಯಲು ಪ್ರಾರಂಭಿಸಿದ ನಂತರ ಅಕ್ಕಿ ಹಿಟ್ಟನ್ನು ಹಾಕಿ, ಸ್ಟವ್ ಆಫ್ ಮಾಡಿ.
- ಒಮ್ಮೆ ಚೆನ್ನಾಗಿ ಮಗುಚಿ, ಮುಚ್ಚಳ ಮುಚ್ಚಿ ಪಕ್ಕಕ್ಕಿಡಿ.
- ಅಕ್ಕಿ ಹಿಟ್ಟು ಸ್ವಲ್ಪ ಬಿಸಿ ಆರಿದ ಮೇಲೆ ಚೆನ್ನಾಗಿ ನಾದಿ. ಹಿಟ್ಟು ಮೃದುವಾಗಿರಬೇಕು.
- ಉದ್ದುದ್ದ ಉಂಡೆಗಳನ್ನು ಮಾಡಿ, ಶಾವಿಗೆ ಅಚ್ಚಿನಲ್ಲಿ ಹಾಕಿ ಎಣ್ಣೆ ಸವರಿದ ಇಡ್ಲಿ ಪ್ಲೇಟ್ ಗೆ ಒತ್ತಿ.
- ಸೆಕೆಯಲ್ಲಿ (ಆವಿಯಲ್ಲಿ) 10 - 12 ನಿಮಿಷ ಬೇಯಿಸಿ. ಚಟ್ನಿಯೊಂದಿಗೆ ಸವಿದು ಆನಂದಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ