Sabsige soppu paddu recipe in kannada | ಸಬ್ಸಿಗೆ ಸೊಪ್ಪು ಪಡ್ದು ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 2 ಕಪ್ ದೋಸೆ ಅಕ್ಕಿ
- 3/4 ಕಪ್ ಉದ್ದಿನ ಬೇಳೆ
- 1/2 ಕಪ್ ಗಟ್ಟಿ ಅವಲಕ್ಕಿ ಅಥವಾ 1 ಕಪ್ ತೆಳು ಅವಲಕ್ಕಿ
- 1 ಟೀಸ್ಪೂನ್ ಮೆಂತ್ಯ
- 2 ಈರುಳ್ಳಿ ಸಣ್ಣಗೆ ಹೆಚ್ಚಿದ್ದು
- 2 - 4 ಹಸಿರು ಮೆಣಸಿನ ಕಾಯಿ ಸಣ್ಣಗೆ ಹೆಚ್ಚಿದ್ದು
- 2 ಟೇಬಲ್ ಸ್ಪೂನ್ ಸಣ್ಣಗೆ ಹೆಚ್ಚಿದ ಕರಿಬೇವಿನ ಎಲೆ
- 1/2 ಕಪ್ ಸಣ್ಣಗೆ ಹೆಚ್ಚಿದ ಸಬ್ಸಿಗೆ ಸೊಪ್ಪು
- ಉಪ್ಪು ರುಚಿಗೆ ತಕ್ಕಷ್ಟು.
ಸಬ್ಸಿಗೆ ಸೊಪ್ಪು ಪಡ್ದು ಮಾಡುವ ವಿಧಾನ:
- ಅಕ್ಕಿ, ಉದ್ದಿನ ಬೇಳೆ ಮತ್ತು ಮೆಂತೆಯನ್ನು ತೊಳೆದು ಒಳ್ಳೆಯ ಕುಡಿಯುವ ನೀರಿನಲ್ಲಿ 5-6 ಗಂಟೆಗಳ ಕಾಲ ನೆನೆಯಲು ಬಿಡಿ.
- ಅವಲಕ್ಕಿ ಅಥವಾ ಮಂಡಕ್ಕಿಯನ್ನು 30 ನಿಮಿಷಗಳ ಕಾಲ ನೆನೆಸಿ.
- ನೆನೆಸಿದ ಅಕ್ಕಿ, ಉದ್ದಿನ ಬೇಳೆ, ಮೆಂತೆ ಮತ್ತು ಅವಲಕ್ಕಿಯನ್ನು ಅರೆಯಿರಿ.
- ನಯವಾಗಿ ಅರೆದು, ಹಿಟ್ಟನ್ನು ಒಂದು ದೊಡ್ಡ ಪಾತ್ರೆಗೆ ಹಾಕಿ.
- ಮುಚ್ಚಳವನ್ನು ಮುಚ್ಚಿ, ಹಿಟ್ಟು ಹುದುಗಲು 7-8 ಘಂಟೆ ಕಾಲ ಬಿಡಿ.
- 7-8 ಘಂಟೆಯ ನಂತರ ಹಿಟ್ಟಿಗೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
- ಸಣ್ಣಗೆ ಹೆಚ್ಚಿದ ಈರುಳ್ಳಿ, ಹಸಿರು ಮೆಣಸಿನ ಕಾಯಿ, ಕರಿಬೇವಿನ ಎಲೆ ಮತ್ತು ಸಬ್ಸಿಗೆ ಸೊಪ್ಪನ್ನು ಸೇರಿಸಿ ಕಲಸಿ.
- ಪಡ್ಡು ತವಾವನ್ನು ಬಿಸಿಮಾಡಿ ಕೊಳ್ಳಿ. ಗುಳಿಗಳಿಗೆ ಸ್ವಲ್ಪ ಎಣ್ಣೆ ಹಾಕಿ.
- ಹಿಟ್ಟನ್ನು ಹಾಕಿ, ಮುಚ್ಚಳ ಮುಚ್ಚಿ.
- ೫ - ೧೦ ಸೆಕೆಂಡ್ ಗಳ ನಂತರ ಮುಚ್ಚಳ ತೆರೆದು, ಮೇಲಿನಿಂದ ಎಣ್ಣೆ ಹಾಕಿ.
- ಪಡ್ಡುವನ್ನು ತಿರುಗಿಸಿ ಹಾಕಿ. ಇನ್ನೊಂದು ಬದಿಯೂ ಬೇಯಿಸಿ. ತೆಂಗಿನಕಾಯಿ ಚಟ್ನಿ ಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ