ಸೋಮವಾರ, ಫೆಬ್ರವರಿ 20, 2017

Simple tomato saaru recipe in Kannada | ಸರಳ ಟೊಮೇಟೊ ಸಾರು ಮಾಡುವ ವಿಧಾನ

Simple tomato saaru recipe in Kannada

Simple tomato saaru recipe in Kannada | ಸರಳ ಟೊಮೇಟೊ ಸಾರು ಮಾಡುವ ವಿಧಾನ 

ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)

  1. 2 ಟೊಮ್ಯಾಟೊ
  2. 1 ಸಣ್ಣ ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು
  3. 1 - 2 ಟೀಸ್ಪೂನ್ ಬೆಲ್ಲ (ನಿಮ್ಮ ರುಚಿಗೆ ತಕ್ಕಷ್ಟು - ಆದರೆ ಹಾಕಲು ಮರೆಯದಿರಿ)
  4. 2 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
  5. 1 ಹಸಿರು ಮೆಣಸಿನಕಾಯಿ
  6. 2 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
  7. ಒಂದು ದೊಡ್ಡ ಚಿಟಿಕೆ ಅರಿಶಿನ ಪುಡಿ.

ಮಸಾಲೆಗೆ ಬೇಕಾಗುವ ಪದಾರ್ಥಗಳು:

  1. 2 - 4ಒಣಮೆಣಸಿನಕಾಯಿ
  2. 2 ಚಮಚ ಕೊತ್ತಂಬರಿ ಬೀಜ ಅಥವಾ ಧನಿಯಾ
  3. 1/2 ಟೀಸ್ಪೂನ್ ಜೀರಿಗೆ
  4. 1/4 ಟೀಸ್ಪೂನ್ ಮೆಂತ್ಯ
  5. ಇಂಗು ಒಂದು ಚಿಟಿಕೆ
  6. 1/4 ಕಪ್ ತೆಂಗಿನ ತುರಿ
  7. 1 ಟೀಸ್ಪೂನ್ ತುಪ್ಪ / ಅಡುಗೆ ಎಣ್ಣೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1/2 ಚಮಚ ಸಾಸಿವೆ
  2. 1/2 ಟೀಸ್ಪೂನ್ ಜೀರಿಗೆ
  3. ಇಂಗು ಒಂದು ಚಿಟಿಕೆ
  4. 5 - 6 ಕರಿಬೇವಿನ ಎಲೆ
  5. 2 ಟೀಸ್ಪೂನ್ ತುಪ್ಪ / ಅಡುಗೆ ಎಣ್ಣೆ

ಸರಳ ಟೊಮೇಟೊ ಸಾರು ಮಾಡುವ ವಿಧಾನ:

  1. ಟೊಮ್ಯಾಟೊವನ್ನು ದೊಡ್ಡದಾಗಿ ಕತ್ತರಿಸಿ, ಮಿಕ್ಸಿಯಲ್ಲಿ ಹಾಕಿ ಅರೆದುಕೊಳ್ಳಿ
  2. ಅರೆದ ಟೊಮ್ಯಾಟೊವನ್ನು ಒಂದು ಪಾತ್ರೆಗೆ ಹಾಕಿ. ಉಪ್ಪು, ಅರಿಶಿನ ಪುಡಿ ಮತ್ತು ಸೀಳಿದ ಹಸಿರುಮೆಣಸಿನಕಾಯಿ ಹಾಕಿ ಕುದಿಸಿ. ಮಂದ ಉರಿಯಲ್ಲಿ ಬೇಯಲು ಬಿಡಿ.
  3. ಅದೇ ಸಮಯದಲ್ಲಿ ಮಸಾಲೆ ಪದಾರ್ಥಗಳನ್ನು ಹುರಿದು, ತೆಂಗಿನತುರಿಯೊಂದಿಗೆ ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ.
  4. ಅರೆದ ಮಸಾಲೆಯನ್ನು ಬೇಯುತ್ತಿರುವ ಟೊಮೇಟೊ ಗೆ ಹಾಕಿ. 
  5. ಉಪ್ಪು, ಬೆಲ್ಲ ಮತ್ತು ಹುಣಿಸೆ ರಸ ಸೇರಿಸಿ. 
  6. ಅಗತ್ಯವಿದ್ದಷ್ಟು ನೀರು ಸೇರಿಸಿ ಕುದಿಸಿ. 
  7. ಒಗ್ಗರಣೆ ಸೌಟು ಬಳಸಿಕೊಂಡು 2 ಚಮಚ ತುಪ್ಪ, 1/2 ಚಮಚ ಸಾಸಿವೆ, 1/2 ಚಮಚ ಜೀರಿಗೆ ಮತ್ತು ಕರಿಬೇವಿನ ಎಲೆಗಳ ಒಗ್ಗರಣೆ ಮಾಡಿ. 
  8. ಒಗ್ಗರಣೆಯನ್ನು ಕುದಿಸಿದ ಸಾರಿಗೆ ಹಾಕಿ.  ಬಿಸಿಯಾದ ಅನ್ನದೊಂದಿಗೆ ಬಡಿಸಿ.

To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Related Posts Plugin for WordPress, Blogger...