Akki uppittu recipe in Kannada | ಅಕ್ಕಿ ಉಪ್ಪಿಟ್ಟು ಮಾಡುವ ವಿಧಾನ
ಅಕ್ಕಿ ಉಪ್ಪಿಟ್ಟು ವಿಡಿಯೋ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್)
- 1 ಕಪ್ ಸೋನಾ ಮಸೂರಿ ಅಕ್ಕಿ
- 2.5 ಕಪ್ ನೀರು
- 1/2 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಉದ್ದಿನಬೇಳೆ
- 1 ಟೀಸ್ಪೂನ್ ಕಡ್ಲೆಬೇಳೆ
- 1 ದೊಡ್ಡ ಈರುಳ್ಳಿ
- 1 ಟೊಮ್ಯಾಟೋ
- 1-2 ಹಸಿರು ಮೆಣಸಿನಕಾಯಿ
- 4-5 ಕರಿ ಬೇವಿನ ಎಲೆ
- 1 ಟೀಸ್ಪೂನ್ ಸಣ್ಣಗೆ ಹೆಚ್ಚಿದ ಶುಂಠಿ
- 1/2 ಮಧ್ಯಮ ಗಾತ್ರದ ಕ್ಯಾರಟ್ (ಬೇಕಾದಲ್ಲಿ)
- 4 ಬೀನ್ಸ್ (ಬೇಕಾದಲ್ಲಿ)
- 2 ಟೇಬಲ್ ಚಮಚ ಹಸಿ ಬಟಾಣಿ (ಬೇಕಾದಲ್ಲಿ)
- 1/4 ಟೀಸ್ಪೂನ್ ಅರಶಿನ ಪುಡಿ
- 6-8 ಟೀಸ್ಪೂನ್ ಅಡುಗೆ ಎಣ್ಣೆ
- 1 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
- 2 ಟೀಸ್ಪೂನ್ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1/2 ಕಪ್ ತೆಂಗಿನತುರಿ
- 2 ಟೀಸ್ಪೂನ್ ನಿಂಬೆರಸ
ಅಕ್ಕಿ ಉಪ್ಪಿಟ್ಟು ಮಾಡುವ ವಿಧಾನ:
- ಅಕ್ಕಿಯನ್ನು ತೊಳೆದು ನೀರು ಬಗ್ಗಿಸಿ ಪಕ್ಕಕ್ಕಿಡಿ.
- ಈರುಳ್ಳಿ, ಟೊಮ್ಯಾಟೋ, ಶುಂಠಿ, ಕೊತ್ತಂಬರಿ ಸೊಪ್ಪು, ಹಸಿರು ಮೆಣಸಿನಕಾಯಿ ಮತ್ತು ತರಕಾರಿಗಳನ್ನು ಕತ್ತರಿಸಿಟ್ಟು ಕೊಳ್ಳಿ. ಬೇರೆ ಪದಾರ್ಥಗಳನ್ನು ಸಿದ್ಧ ಮಾಡಿಟ್ಟು ಕೊಳ್ಳಿ.
- ಒಂದು ಕುಕ್ಕರ್ ಬಿಸಿಮಾಡಿ, ಎಣ್ಣೆ, ಸಾಸಿವೆ, ಉದ್ದಿನಬೇಳೆ ಮತ್ತು ಕಡ್ಲೆಬೇಳೆ ಹಾಕಿ.
- ಸಾಸಿವೆ ಸಿಡಿದ ಕೂಡಲೇ ಕರಿಬೇವು, ಕತ್ತರಿಸಿದ ಶುಂಠಿ, ಈರುಳ್ಳಿ ಮತ್ತು ಹಸಿರು ಮೆಣಸಿನಕಾಯಿ ಸೇರಿಸಿ. ಈರುಳ್ಳಿ ಮೆತ್ತಗಾಗುವವರೆಗೆ ಮಧ್ಯಮ ಉರಿಯಲ್ಲಿ ಹುರಿಯಿರಿ.
- ಈರುಳ್ಳಿ ಮೆತ್ತಗಾದ ಮೇಲೆ ಬಟಾಣಿ ಮತ್ತು ತರಕಾರಿಗಳನ್ನು ಹಾಕಿ, ಒಂದೆರಡು ನಿಮಿಷ ಹುರಿಯಿರಿ.
- ನಂತರ ಟೊಮ್ಯಾಟೋ ಸೇರಿಸಿ ಮತ್ತು ಅರಶಿನ ಪುಡಿ ಸೇರಿಸಿ ಹುರಿಯಿರಿ.
- ನಂತರ ತೊಳೆದಿಟ್ಟ ಅಕ್ಕಿಯನ್ನು ಹಾಕಿ ಒಂದು ನಿಮಿಷ ಹುರಿಯಿರಿ.
- 2.5 ಕಪ್ ನೀರು ಹಾಕಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ.
- ಒಮ್ಮೆ ಮಗುಚಿ ಕುಕ್ಕರ್ ಮುಚ್ಚಳ ಮುಚ್ಚಿ ಎರಡು ವಿಷಲ್ ಮಾಡಿ ಬೇಯಿಸಿ.
- ಕುಕ್ಕರ್ ಒತ್ತಡ ಕಡಿಮೆ ಆದ ಮೇಲೆ, ಮುಚ್ಚಳ ತೆಗೆದು ತೆಂಗಿನತುರಿ, ಕೊತ್ತಂಬರಿ ಸೊಪ್ಪು ಮತ್ತು ನಿಂಬೆರಸ ಸೇರಿಸಿ ಮಗುಚಿ.ರುಚಿಕರ ಅಕ್ಕಿ ಉಪ್ಪಿಟ್ಟು ತಿಂದು ಆನಂದಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ