Hesaru bele dose recipe in kannada | ಹೆಸರು ಬೇಳೆ ದೋಸೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಹೆಸರು ಬೇಳೆ
- 1/4 ಕಪ್ ಅಕ್ಕಿ ಹಿಟ್ಟು
- 1 - 2 ಹಸಿರುಮೆಣಸಿನಕಾಯಿ
- ಸಣ್ಣ ತುಂಡು ಶುಂಠಿ
- ದೊಡ್ಡ ಚಿಟಿಕೆ ಇಂಗು ಅಥವಾ 1/2 ಟೀಸ್ಪೂನ್ ಜೀರಿಗೆ
- 2 ಟೇಬಲ್ ಚಮಚ ತೆಂಗಿನ ತುರಿ
- 2 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- ಉಪ್ಪು ರುಚಿಗೆ ತಕ್ಕಷ್ಟು.
ಹೆಸರು ಬೇಳೆ ದೋಸೆ ಮಾಡುವ ವಿಧಾನ:
- ಹೆಸರು ಬೇಳೆಯನ್ನು ತೊಳೆದು ನೀರಿನಲ್ಲಿ 15 ನಿಮಿಷಗಳ ಕಾಲ ನೆನೆಯಲು ಬಿಡಿ.
- 15 ನಿಮಿಷದ ನಂತರ ನೀರು ಬಗ್ಗಿಸಿ ಅಕ್ಕಿ ಹಿಟ್ಟು, ಹಸಿರುಮೆಣಸಿನಕಾಯಿ, ಶುಂಠಿ, ತೆಂಗಿನ ತುರಿ ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ, ಅಗತ್ಯವಿದ್ದಷ್ಟು ನೀರು ಹಾಕಿ ನಯವಾಗಿ ಅರೆಯಿರಿ.
- ರುಚಿಗೆ ತಕ್ಕಷ್ಟು ಉಪ್ಪು ಮತ್ತು ಇಂಗು (ಅಥವಾ ಜೀರಿಗೆ) ಸೇರಿಸಿ ಚೆನ್ನಾಗಿ ಕಲಸಿ. ಕೂಡಲೇ ದೋಸೆ ಮಾಡಿ.
- ದೋಸೆ ಮಾಡಲು ಹೆಂಚನ್ನು ಬಿಸಿಮಾಡಿ ಕೊಳ್ಳಿ.
- ಈಗ ವೃತ್ತಾಕಾರದ ರೀತಿಯಲ್ಲಿ ದೋಸೆ ಹಿಟ್ಟನ್ನು ತೆಳುವಾಗಿ ಹರಡಿ, ಮುಚ್ಚಳ ಮುಚ್ಚಿ ಬೇಯಿಸಿ.
- ಮೇಲಿನಿಂದ ತುಪ್ಪ ಅಥವಾ ಎಣ್ಣೆ ಹಾಕಿ. ಬಿಸಿ ಬಿಸಿ ದೋಸೆಯನ್ನು ಚಟ್ನಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ