Pumpkin sambar recipe in Kannada | ಚೀನಿಕಾಯಿ ಅಥವಾ ಸಿಹಿಕುಂಬಳಕಾಯಿ ಸಾಂಬಾರ್ ಮಾಡುವ ವಿಧಾನ
Pumpkin sambar video Kannada
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1/2 kg ಚೀನಿಕಾಯಿ ಅಥವಾ ಸಿಹಿಕುಂಬಳಕಾಯಿ
- 4 ಟೇಬಲ್ ಚಮಚ ತೊಗರಿಬೇಳೆ
- 1/4 ಟೀಸ್ಪೂನ್ ಅರಿಶಿನ ಪುಡಿ
- 2 ಟೀಸ್ಪೂನ್ ಕಲ್ಲುಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
- 1 ಟೀಸ್ಪೂನ್ ಬೆಲ್ಲ (ಬೇಕಾದಲ್ಲಿ, ಹಾಕಿದರೆ ಒಳ್ಳೆಯದು)
- ಗೋಲಿ ಗಾತ್ರದ ಹುಣಿಸೇಹಣ್ಣು
ಮಸಾಲೆಗೆ ಬೇಕಾಗುವ ಪದಾರ್ಥಗಳು:
- 1/ ಕಪ್ ತೆಂಗಿನ ತುರಿ
- 2 - 4 ಕೆಂಪು ಮೆಣಸಿನಕಾಯಿ
- 1.5 ಟೀಸ್ಪೂನ್ ಉದ್ದಿನ ಬೇಳೆ
- 2 ಟೀಸ್ಪೂನ್ ಕೊತ್ತಂಬರಿ ಬೀಜ
- 1/4 ಟೀಸ್ಪೂನ್ ಜೀರಿಗೆ
- 7 - 8 ಮೆಂತ್ಯ ಕಾಳು (ಬೇಕಾದಲ್ಲಿ)
- ಒಂದು ಚಿಟಿಕೆ ಇಂಗು
- 1 ಟೀಸ್ಪೂನ್ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಕೆಂಪು ಮೆಣಸಿನಕಾಯಿ
- 5 - 6 ಕರಿಬೇವು
- 1/4 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಅಡುಗೆ ಎಣ್ಣೆ
ಚೀನಿಕಾಯಿ ಅಥವಾ ಸಿಹಿಕುಂಬಳಕಾಯಿ ಸಾಂಬಾರ್ ಮಾಡುವ ವಿಧಾನ:
- ಚೀನಿಕಾಯಿ ಅಥವಾ ಸಿಹಿಕುಂಬಳಕಾಯಿಯನ್ನು ತೊಳೆದು, ಸಿಪ್ಪೆ ತೆಗೆದು ಕತ್ತರಿಸಿ.
- ಬೇಳೆಯನ್ನು ಒಂದು ಕುಕ್ಕರ್ ನಲ್ಲಿ ತೆಗೆದುಕೊಂಡು ತೊಳೆಯಿರಿ. 1/2 ಕಪ್ ನೀರು, ಚಿಟಿಕೆ ಅರಶಿನ ಪುಡಿ ಮತ್ತು ಒಂದೆರಡು ಹನಿ ಎಣ್ಣೆ ಹಾಕಿ. ಬೇಳೆಯನ್ನು ಬೇಯಿಸಿ.
- ಈಗ ಅದೇ ಕುಕ್ಕರ್ ಗೆ ಕತ್ತರಿಸಿದ ಚೀನಿಕಾಯಿ ಅಥವಾ ಸಿಹಿಕುಂಬಳಕಾಯಿ, ಸ್ವಲ್ಪ ಉಪ್ಪು, ಬೆಲ್ಲ ಮತ್ತು ಹುಣಿಸೆ ರಸ ಹಾಕಿ. 1 ಲೋಟ ನೀರು ಹಾಕಿ ಒಂದು ವಿಷಲ್ ಮಾಡಿ. ಚೀನಿಕಾಯಿ ಅಥವಾ ಸಿಹಿಕುಂಬಳಕಾಯಿ ಬೇಗ ಬೇಯುವುದರಿಂದ ವಿಷಲ್ ಮಾಡದೇ ಹಾಗೇ ಸಹ ಬೇಯಿಸಬಹುದು.
- ಈಗ ಒಂದು ಬಾಣಲೆ ತೆಗೆದು ಕೊಂಡು, ಕೆಂಪು ಮೆಣಸಿನಕಾಯಿ, ಉದ್ದಿನಬೇಳೆ, ಕೊತ್ತಂಬರಿ ಬೀಜ, ಜೀರಿಗೆ, ಮೆಂತೆ ಮತ್ತು ಇಂಗನ್ನು ಮಧ್ಯಮ ಉರಿಯಲ್ಲಿ 1 ಟೀಸ್ಪೂನ್ ಎಣ್ಣೆ ಹಾಕಿ ಹುರಿಯಿರಿ.
- ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ನೀರು ಸೇರಿಸಿ ಅರೆಯಿರಿ.
- ಅರೆದ ಮಸಾಲೆಯನ್ನು ತರಕಾರಿ ಮತ್ತು ಬೇಳೆ ಇರುವ ಕುಕ್ಕರ್ ಗೆ ಹಾಕಿ. ನಿಮ್ಮ ರುಚಿ ಪ್ರಕಾರ ಉಪ್ಪು, ಸಿಹಿ ಮತ್ತು ಹುಳಿಯನ್ನು ಸರಿಮಾಡಿಕೊಳ್ಳಿ.
- ಕೊನೆಯಲ್ಲಿ ಬೇಕಾದಷ್ಟು ನೀರು ಸೇರಿಸಿ, ಮಗುಚಿ, ಒಂದು ಕುದಿ ಕುದಿಸಿ.
- ಕೆಂಪು ಮೆಣಸು, ಸಾಸಿವೆ, ಕರಿಬೇವಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ