Basale pundi recipe in Kannada | ಬಸಳೆ ಪುಂಡಿ ಮಾಡುವ ವಿಧಾನ
ಪುಂಡಿಗೆ ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಸೋನಾ ಮಸೂರಿ ಅಕ್ಕಿ
- 1/4 ಕಪ್ ತೆಂಗಿನ ತುರಿ
- 2 ಕಪ್ ನೀರು
- ಉಪ್ಪು ರುಚಿಗೆ ತಕ್ಕಷ್ಟು
ಸಾಂಬಾರಿಗೆ ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 2 ದೊಡ್ಡ ಈರುಳ್ಳಿ
- 1/4 ಟೀಸ್ಪೂನ್ ಅರಿಶಿನ ಪುಡಿ
- 1 ಟೀಸ್ಪೂನ್ ಕಲ್ಲುಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
- ಸಣ್ಣ ಗೋಲಿ ಗಾತ್ರದ ಹುಣಿಸೇಹಣ್ಣು
ಮಸಾಲೆಗೆ ಬೇಕಾಗುವ ಪದಾರ್ಥಗಳು:
- 1/2 ಕಪ್ ತೆಂಗಿನ ತುರಿ
- 2 - 4 ಕೆಂಪು ಮೆಣಸಿನಕಾಯಿ
- 1.5 ಟೀಸ್ಪೂನ್ ಉದ್ದಿನ ಬೇಳೆ
- 2 ಟೀಸ್ಪೂನ್ ಕೊತ್ತಂಬರಿ ಬೀಜ
- 1/4 ಟೀಸ್ಪೂನ್ ಜೀರಿಗೆ
- 7 - 8 ಮೆಂತ್ಯ ಕಾಳು (ಬೇಕಾದಲ್ಲಿ)
- 1 ಟೀಸ್ಪೂನ್ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 5 - 6 ಕರಿಬೇವು
- 1/4 ಟೀಸ್ಪೂನ್ ಸಾಸಿವೆ
- ಒಂದು ಚಿಟಿಕೆ ಇಂಗು
- 1 ಟೀಸ್ಪೂನ್ ಅಡುಗೆ ಎಣ್ಣೆ
ಬಸಳೆ ಪುಂಡಿ ಮಾಡುವ ವಿಧಾನ:
- ಅಕ್ಕಿಯನ್ನು ತೊಳೆದು, ನೀರು ಬಗ್ಗಿಸಿ, ಅಗಲವಾದ ಪಾತ್ರೆಯಲ್ಲಿ ಹರಡಿ ನೀರಾರಲು ಬಿಡಿ.
- ನಂತರ ಮಿಕ್ಸಿಯಲ್ಲಿ ಸ್ವಲ್ಪ ತರಿಯಾದ ಪುಡಿ ಮಾಡಿಕೊಳ್ಳಿ. ರವೆಗಿಂತ ಸ್ವಲ್ಪ ನುಣ್ಣನೆ ಅಥವಾ ಸಣ್ಣಗಿರಲಿ.
- ನಂತರ ಅದಕ್ಕೆ ತೆಂಗಿನ ತುರಿ ಹಾಕಿ ಒಂದೆರಡು ಸುತ್ತು ಅರೆಯಿರಿ.
- ಒಂದು ಬಾಣಲೆಯಲ್ಲಿ ನೀರು ಮತ್ತು ಉಪ್ಪು ಹಾಕಿ ಕುದಿಯಲು ಇಡಿ.
- ನೀರು ಕುದಿಯಲು ಪ್ರಾರಂಭಿಸಿದ ನಂತರ ಅಕ್ಕಿ ತರಿ ಅಥವಾ ರವೆಯನ್ನು ಹಾಕುತ್ತಾ ದೋಸೆ ಸಟ್ಟುಗ ಉಪಯೋಗಿಸಿ ಗಂಟಾಗದಂತೆ ಮಗುಚಿ.
- ಮಧ್ಯಮ ಉರಿಯಲ್ಲಿ ಗಟ್ಟಿಯಾಗುವವರೆಗೆ ಮಗುಚಿ. ತುಂಬ ಗಟ್ಟಿಯಾಗುವುದು ಬೇಡ. ಸಟ್ಟುಗ ಬೀಳದೆ ನೇರ ನಿಲ್ಲುವಷ್ಟು ಗಟ್ಟಿ ಆದರೆ ಸಾಕು. ಸ್ಟವ್ ಆಫ್ ಮಾಡಿ.
- ಸ್ವಲ್ಪ ಬಿಸಿ ಆರಿದ ಮೇಲೆ, ಕೈಗೆ ನೀರು ಮುಟ್ಟಿಸಿಕೊಂಡು, ನೆಲ್ಲಿಕಾಯಿ ಗಾತ್ರದ ಉಂಡೆಗಳನ್ನು ಮಾಡಿ.
- ಸೆಕೆಯಲ್ಲಿ (ಆವಿಯಲ್ಲಿ) 15 ನಿಮಿಷ ಬೇಯಿಸಿ. ಪುಂಡಿ ತಯಾರಾಯಿತು.
- ಈಗ ಒಂದು ಬಾಣಲೆ ತೆಗೆದು ಕೊಂಡು, ಕೆಂಪು ಮೆಣಸಿನಕಾಯಿ, ಉದ್ದಿನಬೇಳೆ, ಕೊತ್ತಂಬರಿ ಬೀಜ, ಜೀರಿಗೆ ಮತ್ತು ಮೆಂತೆಯನ್ನು ಮಧ್ಯಮ ಉರಿಯಲ್ಲಿ 1 ಟೀಸ್ಪೂನ್ ಎಣ್ಣೆ ಹಾಕಿ ಹುರಿಯಿರಿ.
- ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ನೀರು ಸೇರಿಸಿ ಅರೆದು ಪಕ್ಕಕ್ಕಿಡಿ.
- ಒಂದು ಬಾಣಲೆಯಲ್ಲಿ ಎಣ್ಣೆ, ಸಾಸಿವೆ, ಇಂಗು ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
- ಅದಕ್ಕೆ ಸಣ್ಣಗೆ ಕತ್ತರಿಸಿದ ಈರುಳ್ಳಿ ಹಾಕಿ ಬಡಿಸಿ. ಚಿಟಿಕೆ ಅರಿಶಿನ ಪುಡಿ ಮತ್ತು ೧/೪ ಲೋಟ ನೀರು ಹಾಕಿ ಈರುಳ್ಳಿ ಮೆತ್ತಗಾಗುವವರೆಗೆ ಬೇಯಿಸಿ.
- ಅರೆದ ಮಸಾಲೆಯನ್ನು ಹಾಕಿ. ಉಪ್ಪು ಮತ್ತು ಹುಣಿಸೆರಸ ಹಾಕಿ.
- ಬೇಕಾದಷ್ಟು ನೀರು ಸೇರಿಸಿ, ಮಗುಚಿ, ಒಂದು ಕುದಿ ಕುದಿಸಿ.
- ಆವಿಯಲ್ಲಿ ಬೇಯಿಸಿದ ಪುಂಡಿಯನ್ನು ಹಾಕಿ, ಹತ್ತು ನಿಮಿಷ ಬಿಡಿ. ಸವಿದು ಆನಂದಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ