Boodu kumbalakai palya recipe in Kannada | ಬೂದು ಕುಂಬಳಕಾಯಿ ಪಲ್ಯ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/2 ಕೆಜಿ ಬೂದುಕುಂಬಳಕಾಯಿ
- 1/2 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡ್ಲೆ ಬೇಳೆ
- 4 - 6 ಟೀಸ್ಪೂನ್ ಅಡುಗೆ ಎಣ್ಣೆ
- 1 ದೊಡ್ಡ ಚಿಟಿಕೆ ಅರಿಶಿನ ಪುಡಿ
- 1 ದೊಡ್ಡ ಚಿಟಿಕೆ ಇಂಗು
- 4 - 5 ಕರಿಬೇವಿನ ಎಲೆ
- ಸಣ್ಣ ನೆಲ್ಲಿಕಾಯಿ ಗಾತ್ರದ ಬೆಲ್ಲ (ಬೇಕಾದಲ್ಲಿ)
- ಉಪ್ಪು ರುಚಿಗೆ ತಕ್ಕಷ್ಟು
- 2 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- 1/4 ಕಪ್ ನೀರು
ಅರೆಯಲು ಬೇಕಾಗುವ ಪದಾರ್ಥಗಳು:
- 1/2 ಕಪ್ ತೆಂಗಿನ ತುರಿ
- 2 - 4 ಒಣ ಮೆಣಸಿನ ಕಾಯಿ
- 1/2 ಟೀಸ್ಪೂನ್ ಸಾಸಿವೆ
ಬೂದು ಕುಂಬಳಕಾಯಿ ಪಲ್ಯ ಮಾಡುವ ವಿಧಾನ:
- ಬೂದು ಕುಂಬಳಕಾಯಿಯನ್ನು ತೊಳೆದು, ಸಿಪ್ಪೆ ತೆಗೆದು, ಕತ್ತರಿಸಿ.
- ಕುಕ್ಕರ್ ನಲ್ಲಿ ಕತ್ತರಿಸಿದ ಕುಂಬಳಕಾಯಿಯನ್ನು ಹಾಕಿ, 1/4 ಕಪ್ ನೀರು ಸೇರಿಸಿ, ಒಂದು ವಿಷಲ್ ಮಾಡಿ ಬೇಯಿಸಿಕೊಳ್ಳಿ. ನೇರವಾಗಿ ಒಗ್ಗರಣೆಯಲ್ಲೂ ಬೇಯಿಸಬಹುದು.
- ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಸಾಸಿವೆ, ಉದ್ದಿನಬೇಳೆ ಮತ್ತು ಕಡ್ಲೆಬೇಳೆ ಹಾಕಿ. ಸಾಸಿವೆ ಸಿಡಿದ ಕೂಡಲೇ ಅರಶಿನ, ಇಂಗು, ಹಸಿರು ಮೆಣಸಿನಕಾಯಿ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆ ತಯಾರಿಸಿಕೊಳ್ಳಿ.
- ಅದಕ್ಕೆ ಬೇಯಿಸಿದ ಕುಂಬಳಕಾಯಿ ಹಾಕಿ.
- ಉಪ್ಪು ಮತ್ತು ಬೆಲ್ಲ ಹಾಕಿ ಮಗುಚಿ. ದೊಡ್ಡ ಉರಿಯಲ್ಲಿ ನೀರಾರಿಸಿ.
- ಅದೇ ಸಮಯದಲ್ಲಿ ಒಂದು ಮಿಕ್ಸಿ ಜಾರ್ ನಲ್ಲಿ ತೆಂಗಿನ ತುರಿ, 1/4 ಚಮಚ ಸಾಸಿವೆ ಮತ್ತು ಒಣ ಮೆಣಸು ಹಾಕಿ, ನೀರು ಹಾಕದೆ ಪುಡಿ ಮಾಡಿ.
- ಪುಡಿ ಮಾಡಿದ ಮಸಾಲೆ ಮತ್ತು ಕೊತ್ತಂಬರಿ ಸೊಪ್ಪನ್ನು ಬೇಯುತ್ತಿರುವ ಕುಂಬಳಕಾಯಿಗೆ ಹಾಕಿ.
- 2 ನಿಮಿಷ ಮಗುಚಿ. ಕೊತ್ತಂಬರಿ ಸೊಪ್ಪು ಉದುರಿಸಿ. ಸ್ಟೋವ್ ಆಫ್ ಮಾಡಿ. ಚಪಾತಿ ಅಥವಾ ಬಿಸಿ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ