Masale majjige recipe in Kannada | ಮಸಾಲೆ ಮಜ್ಜಿಗೆ ಮಾಡುವ ವಿಧಾನ - 2
ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂಎಲ್)
- 1 ಕಪ್ ಗಟ್ಟಿ ಮೊಸರು
- 2 ಕಪ್ ನೀರು
- 1/2 ಟೀಸ್ಪೂನ್ ಜಜ್ಜಿದ ಕಾಳುಮೆಣಸು ಅಥವಾ ಹೆಚ್ಚಿದ ಹಸಿ ಮೆಣಸಿನಕಾಯಿ
- 1/2 ಟೀಸ್ಪೂನ್ ಹೆಚ್ಚಿದ ಶುಂಠಿ
- 1 ಟೀಸ್ಪೂನ್ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1/2 ಟೀಸ್ಪೂನ್ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1 ಟೀಸ್ಪೂನ್ ಎಣ್ಣೆ
- ದೊಡ್ಡ ಚಿಟಿಕೆ ಇಂಗು
- 1/2 ಟೀಸ್ಪೂನ್ ಸಾಸಿವೆ
- 1/2 ಟೀಸ್ಪೂನ್ ಜೀರಿಗೆ
- ಉಪ್ಪು ರುಚಿಗೆ ತಕ್ಕಷ್ಟು.
ಮಸಾಲೆ ಮಜ್ಜಿಗೆ ಮಾಡುವ ವಿಧಾನ:
- ಒಂದು ಪಾತ್ರೆಗೆ ಮೊಸರು, ನೀರು ಮತ್ತು ಉಪ್ಪು ಸೇರಿಸಿ ಕಡಗೋಲಿನಿಂದ ಅಥವಾ ಒಂದು ಪಾತ್ರೆಯಿಂದ ಇನ್ನೊಂದಕ್ಕೆ ಎತ್ತಿ ಹಾಕುತ್ತಾ ಚೆನ್ನಾಗಿ ಬೆರೆಸಿ.
- ಶುಂಠಿ, ಕರಿಬೇವಿನ ಸೊಪ್ಪು ಮತ್ತು ಕೊತ್ತಂಬರಿ ಸೊಪ್ಪುಗಳನ್ನು ಸಣ್ಣಗೆ ಕತ್ತರಿಸಿ. ಕಾಳುಮೆಣಸನ್ನು ಗುದ್ದಿ ಪುಡಿ ಮಾಡಿ ಕೊಳ್ಳಿ.
- ಈಗ ಎಣ್ಣೆ, ಸಾಸಿವೆ, ಜೀರಿಗೆ, ಇಂಗು, ಜಜ್ಜಿದ ಕಾಳುಮೆಣಸು, ಹೆಚ್ಚಿದ ಶುಂಠಿ, ಕೊತ್ತಂಬರಿ ಸೊಪ್ಪು ಮತ್ತು ಕೊತ್ತಂಬರಿ ಸೊಪ್ಪು ಹಾಕಿ ಒಗ್ಗರಣೆ ತಯಾರಿಸಿ.
- ಒಗ್ಗರಣೆಯನ್ನು ಉಪ್ಪು ಬೆರೆಸಿದ ಮಜ್ಜಿಗೆಗೆ ಹಾಕಿ ಬೆರಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ