Huruli kalu bassaru recipe in Kannada | ಹುರುಳಿಕಾಳು ಬಸ್ಸಾರು ಮಾಡುವ ವಿಧಾನ
ಹುರುಳಿಕಾಳು ಬಸ್ಸಾರು ವಿಡಿಯೋ
ಮುಖ್ಯ ಪದಾರ್ಥಗಳು: (ಅಳತೆ ಕಪ್ = 240ml)
- 1 ಕಪ್ ಹುರುಳಿ ಕಾಳು
- ಚಿಟಿಕೆ ಅರಿಶಿನ ಪುಡಿ
- ನಿಮ್ಮ ರುಚಿ ಪ್ರಕಾರ ಉಪ್ಪು
ಹುರುಳಿಕಾಳು ಬಸ್ಸಾರಿಗೆ ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ml)
- 2 - 4 ಒಣ ಮೆಣಸಿನಕಾಯಿ
- 2 ಟೀಸ್ಪೂನ್ ಕೊತ್ತಂಬರಿ ಬೀಜ
- 1 ಟೀಸ್ಪೂನ್ ಜೀರಿಗೆ
- 4 - 5 ಕರಿಮೆಣಸು
- 1 ಕತ್ತರಿಸಿದ ಈರುಳ್ಳಿ
- 10 ಬೇಳೆ ಸುಲಿದು ಮತ್ತು ಕತ್ತರಿಸಿದ ಬೆಳ್ಳುಳ್ಳಿ
- 1 ಕತ್ತರಿಸಿದ ಟೊಮೆಟೊ
- 1/2 ನೆಲ್ಲಿಕಾಯಿ ಗಾತ್ರದ ಹುಣಸೆಹಣ್ಣು
- 1/4 ಕಪ್ ತೆಂಗಿನ ತುರಿ
- ನಿಮ್ಮ ರುಚಿ ಪ್ರಕಾರ ಉಪ್ಪು
ಬಸ್ಸಾರು ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಕೆಂಪು ಮೆಣಸಿನಕಾಯಿ
- 5 - 6 ಕರಿಬೇವಿನ ಎಲೆ
- 1/2 ಚಮಚ ಸಾಸಿವೆ
- 2 ಟೀಸ್ಪೂನ್ ಅಡುಗೆ ಎಣ್ಣೆ
ಬಸ್ಸಾರು ಪಲ್ಯಕ್ಕೆ ಬೇಕಾಗುವ ಪದಾರ್ಥಗಳು:
- 1 ಕೆಂಪು ಮೆಣಸಿನಕಾಯಿ
- 1/2 ಚಮಚ ಸಾಸಿವೆ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡಲೆಬೇಳೆ
- 5 - 6 ಕರಿಬೇವಿನ ಎಲೆ
- 1 ಕತ್ತರಿಸಿದ ಈರುಳ್ಳಿ
- 1 - 2 ಹಸಿಮೆಣಸು (ಬೇಕಾದಲ್ಲಿ)
- 2 ಟೇಬಲ್ ಸ್ಪೂನ್ ತೆಂಗಿನ ತುರಿ
- 2 ಟೇಬಲ್ ಸ್ಪೂನ್ ಹೆಚ್ಚಿದ ಕೊತ್ತಂಬರಿ ಸೊಪ್ಪು
- 2 ಟೀಸ್ಪೂನ್ ಅಡುಗೆ ಎಣ್ಣೆ
ಹುರುಳಿಕಾಳು ಬಸ್ಸಾರು ಮಾಡುವ ವಿಧಾನ:
- ಹುರುಳಿಕಾಳನ್ನು ತೊಳೆದು, ಒಂದು ದಿನ ನೆನೆಸಿ, ಮೊಳಕೆ ಕಟ್ಟಿಸಿ ಕೊಳ್ಳಿ. ಅರಿಶಿನ ಪುಡಿ ಮತ್ತು ನೀರಿನೊಂದಿಗೆ ಕುಕ್ಕರ್ ನಲ್ಲಿ ಬೇಯಿಸಿಕೊಳ್ಳಿ.
- ಒಂದು ಬಾಣಲೆಯಲ್ಲಿ ಎಣ್ಣೆ, ಕೆಂಪು ಮೆಣಸಿನಕಾಯಿ, ಕೊತ್ತಂಬರಿ ಬೀಜ, ಜೀರಿಗೆ ಮತ್ತು ಕರಿ ಮೆಣಸನ್ನು ಹುರಿಯಿರಿ.
- ಅದಕ್ಕೆ ಕತ್ತರಿಸಿದ ಈರುಳ್ಳಿ ಮತ್ತು ಬೆಳ್ಳುಳ್ಳಿ ಸೇರಿಸಿ ಹುರಿಯಿರಿ.
- ನಂತರ ಕತ್ತರಿಸಿದ ಟೊಮೇಟೊ ಸೇರಿಸಿ ಹುರಿಯಿರಿ.
- ಕೊನೆಯಲ್ಲಿ ತೆಂಗಿನ ತುರಿ ಮತ್ತು ಹುಣಿಸೆರಸ ಸೇರಿಸಿ ಹುರಿದು ಸ್ಟವ್ ಆಫ್ ಮಾಡಿ.
- ಬೇಯಿಸಿದ ಹುರುಳಿ ಕಾಳಿನಿಂದ ನೀರನ್ನು ಬಸಿದು ತೆಗೆಯಿರಿ.
- ಮಿಕ್ಸಿಯಲ್ಲಿ ಹುರಿದ ಎಲ್ಲ ಪದಾರ್ಥಗಳು ಮತ್ತು ಬೇಯಿಸಿದ ಹುರುಳಿಕಾಳು ೨ ದೊಡ್ಡ ಚಮಚದಷ್ಟು ಹಾಕಿ ನುಣ್ಣನೆ ಅರೆದುಕೊಳ್ಳಿ.
- ಅರೆದ ಮಸಾಲೆಯನ್ನು ಬಗ್ಗಿಸಿದ ನೀರಿಗೆ ಹಾಕಿ, ಬೇಕಾದಷ್ಟು ನೀರು ಸೇರಿಸಿ, ಉಪ್ಪು ಹಾಕಿ ಕುದಿಸಿ.
- ಎಣ್ಣೆ, ಒಣಮೆಣಸು, ಸಾಸಿವೆ ಮತ್ತು ಕರಿಬೇವಿನ ಒಗ್ಗರಣೆ ಹಾಕಿ. ಬಸ್ಸಾರು ತಯಾರಾಯಿತು.
- ಇನ್ನೊಂದು ಬಾಣಲೆಯಲ್ಲಿ ಎಣ್ಣೆ, ಸಾಸಿವೆ, ಕೆಂಪು ಮೆಣಸಿನಕಾಯಿ, ಹಸಿರು ಮೆಣಸಿನಕಾಯಿ, ಉದ್ದಿನ ಬೇಳೆ, ಕಡಲೆಬೇಳೆ ಮತ್ತು ಕರಿಬೇವಿನ ಎಲೆಯ ಒಗ್ಗರಣೆ ಮಾಡಿ.
- ಕತ್ತರಿಸಿದ ಈರುಳ್ಳಿ ಹಾಕಿ ಬಾಡಿಸಿ.
- ನೀರು ಬಸಿದು ಉಳಿದ ಹುರುಳಿಕಾಳನ್ನು ಸೇರಿಸಿ ಮಗುಚಿ. ಬೇಕಾದಲ್ಲಿ ಉಪ್ಪು ಸೇರಿಸಿ.
- ತೆಂಗಿನ ತುರಿ, ಹೆಚ್ಚಿದ ಕೊತ್ತಂಬರಿ ಸೊಪ್ಪು ಸೇರಿಸಿ ಮಗುಚಿ ಸ್ಟೋವ್ ಆಫ್ ಮಾಡಿ.
- ಅನ್ನ ಅಥವಾ ರಾಗಿ ಮುದ್ದೆಯೊಂದಿಗೆ ಬಸ್ಸಾರು ಮತ್ತು ಪಲ್ಯವನ್ನು ಬಡಿಸಿ.
Dhanyavadagalu
ಪ್ರತ್ಯುತ್ತರಅಳಿಸಿ