Palak palle in Kannada | ಪಾಲಕ್ ಪಲ್ಲೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1 ದೊಡ್ಡ ಕಟ್ಟು ಪಾಲಕ್ ಸೊಪ್ಪು
- 1 ಕಪ್ ತೊಗರಿಬೇಳೆ
- 1 ಟೀಸ್ಪೂನ್ ಜೀರಿಗೆ
- 1 ಟೀಸ್ಪೂನ್ ಸಾಸಿವೆ
- 1 ಕೆಂಪು ಮೆಣಸಿನಕಾಯಿ (ಬೇಕಾದಲ್ಲಿ)
- ಚಿಟಿಕೆ ಅರಿಶಿನ ಪುಡಿ
- ಚಿಟಿಕೆ ಇಂಗು
- 4 - 5 ಕರಿಬೇವಿನ ಎಲೆ
- 1 - 2 ಹಸಿಮೆಣಸಿನಕಾಯಿ
- 4 ಎಸಳು ಬೆಳ್ಳುಳ್ಳಿ
- 1ಸೆಮೀ ಉದ್ದದ ಶುಂಠಿ
- 1 ಈರುಳ್ಳಿ
- 1 ಟೊಮೆಟೊ (ಬೇಕಾದಲ್ಲಿ)
- 1/2 ಟೀ ಚಮಚ ಜೀರಿಗೆ ಪುಡಿ (ಬೇಕಾದಲ್ಲಿ)
- 1 ಟೀಸ್ಪೂನ್ ನಿಂಬೆರಸ
- ಉಪ್ಪು ರುಚಿಗೆ ತಕ್ಕಷ್ಟು
ಪಾಲಕ್ ಪಲ್ಲೆ ಮಾಡುವ ವಿಧಾನ:
- ತೊಗರಿಬೇಳೆ ತೊಳೆದು ಕುಕ್ಕರ್ ನಲ್ಲಿ ಮೆತ್ತಗೆ ಬೇಯಿಸಿಕೊಳ್ಳಿ.
- ಒಂದು ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಿ. ಸಾಸಿವೆ, ಒಣಮೆಣಸು ಮತ್ತು ಜೀರಿಗೆಯನ್ನು ಹಾಕಿ.
- ಸಾಸಿವೆ ಸಿಡಿದ ಕೂಡಲೇ ಇಂಗು, ಅರಿಶಿನ ಮತ್ತು ಕರಿಬೇವು ಸೇರಿಸಿ.
- ನಂತರ ಸೀಳಿದ ಹಸಿರು ಮೆಣಸಿನಕಾಯಿ, ಸಣ್ಣದಾಗಿ ಹೆಚ್ಚಿದ ಬೆಳ್ಳುಳ್ಳಿ ಮತ್ತು ಶುಂಠಿ ಸೇರಿಸಿ ಹುರಿಯಿರಿ.
- ಕತ್ತರಿಸಿದ ಈರುಳ್ಳಿ ಸೇರಿಸಿ. ಈರುಳ್ಳಿ ಮೆತ್ತಗಾಗುವವರೆಗೆ ಹುರಿಯಿರಿ.
- ಕತ್ತರಿಸಿದ ಟೊಮ್ಯಾಟೊ ಮತ್ತು ಉಪ್ಪು ಸೇರಿಸಿ. ಟೊಮ್ಯಾಟೊ ಮೆತ್ತಗಾಗುವವರೆಗೆ ಹುರಿಯಿರಿ.
- ಕತ್ತರಿಸಿದ ಪಾಲಕ್ ಸೊಪ್ಪು ಸೇರಿಸಿ ಹುರಿಯಿರಿ. ಮುಚ್ಚಳ ಮುಚ್ಚಿ ಬೇಯಿಸಿ.
- ನಂತರ ಬೇಯಿಸಿದ ತೊಗರಿ ಬೇಳೆಯನ್ನು ಸೇರಿಸಿ.
- ಅಗತ್ಯವಿದ್ದಷ್ಟು ನೀರು ಸೇರಿಸಿ ಕುದಿಸಿ.
- ಕೊನೆಯಲ್ಲಿ ಜೀರಿಗೆ ಪುಡಿ ಮತ್ತು ನಿಂಬೆ ರಸ ಸೇರಿಸಿ.
- ಜೋಳದ ರೊಟ್ಟಿ ಅಥವಾ ಚಪಾತಿ ಅಥವಾ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ