Potato sagu or kurma recipe in Kannada | ಆಲೂಗಡ್ಡೆ ಸಾಗು ಅಥವಾ ಕೂರ್ಮ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 4 ಟೀಸ್ಪೂನ್ ಅಡುಗೆ ಎಣ್ಣೆ
- 1/2 ಟೀಸ್ಪೂನ್ ಸಾಸಿವೆ
- 1/2 ಟೀಸ್ಪೂನ್ ಜೀರಿಗೆ
- 1 ಟೀಸ್ಪೂನ್ ಕಡ್ಲೆಬೇಳೆ
- 1 ಟೀಸ್ಪೂನ್ ಉದ್ದಿನಬೇಳೆ
- 1/4 ಟೀಸ್ಪೂನ್ ಅರಿಶಿನ ಪುಡಿ
- ಒಂದು ಚಿಟಿಕೆ ಇಂಗು
- 1 ಸೆಮೀ ಉದ್ದದ ಶುಂಠಿ
- 3 ಎಸಳು ಬೆಳ್ಳುಳ್ಳಿ
- 4 - 5 ಕರಿಬೇವಿನ ಎಲೆ
- 1 - 2 ಹಸಿರು ಮೆಣಸಿನಕಾಯಿ
- 1 ದೊಡ್ಡ ಈರುಳ್ಳಿ
- 1 ಸಣ್ಣ ಕ್ಯಾರಟ್
- 1 ಟೊಮೆಟೊ
- 2 ಮಧ್ಯಮ ಗಾತ್ರದ ಆಲೂಗಡ್ಡೆ
- 2 ಟೀಸ್ಪೂನ್ ಕಡ್ಲೆ ಹಿಟ್ಟು
- 1 ಟೀಸ್ಪೂನ್ ಕೊತ್ತಂಬರಿ ಅಥವಾ ಧನಿಯಾ ಪುಡಿ
- 1/2 ಟೀಸ್ಪೂನ್ ಜೀರಿಗೆ ಪುಡಿ
- 2 ಟೇಬಲ್ ಸ್ಪೂನ್ ಕೊತ್ತಂಬರಿ ಸೊಪ್ಪು
- ನಿಮ್ಮ ರುಚಿಗೆ ತಕ್ಕಂತೆ ಉಪ್ಪು
ಆಲೂಗಡ್ಡೆ ಸಾಗು ಅಥವಾ ಕೂರ್ಮ ಮಾಡುವ ವಿಧಾನ:
- ಆಲೂಗಡ್ಡೆಯನ್ನು ತೊಳೆದು, ಬೇಯಿಸಿ, ಸಿಪ್ಪೆ ತೆಗೆದು ಪುಡಿಮಾಡಿಕೊಳ್ಳಿ. ಈರುಳ್ಳಿ ಮತ್ತು ಟೊಮೇಟೊ ಕತ್ತರಿಸಿ. ಕ್ಯಾರಟ್ ತುರಿಯಿರಿ. ಶುಂಠಿ ಮತ್ತು ಬೆಳ್ಳುಳ್ಳಿಯನ್ನು ಸಣ್ಣಗೆ ಕತ್ತರಿಸಿಟ್ಟುಕೊಳ್ಳಿ.
- ಈಗ ಒಂದು ಬಾಣಲೆ ತೆಗೆದುಕೊಂಡು ಎಣ್ಣೆ ಹಾಕಿ ಬಿಸಿ ಮಾಡಿ. ಸಾಸಿವೆ, ಜೀರಿಗೆ, ಕಡ್ಲೆಬೇಳೆ ಮತ್ತು ಉದ್ದಿನಬೇಳೆಯ ಒಗ್ಗರಣೆ ಮಾಡಿ.
- ಸಾಸಿವೆ ಸಿಡಿದ ಕೂಡಲೇ ಅರಿಶಿನ ಪುಡಿ, ಇಂಗು, ಕರಿಬೇವಿನ ಎಲೆ, ಸಣ್ಣಗೆ ಕತ್ತರಿಸಿದ ಶುಂಠಿ, ಬೆಳ್ಳುಳ್ಳಿ ಮತ್ತು ಸೀಳಿದ ಹಸಿರುಮೆಣಸಿನಕಾಯಿ ಹಾಕಿ ಮಗುಚಿ.
- ಕತ್ತರಿಸಿದ ಈರುಳ್ಳಿ ಹಾಕಿ ಹುರಿಯಿರಿ.
- ಈರುಳ್ಳಿ ಮೆತ್ತಗಾದ ಕೂಡಲೇ ತುರಿದ ಕ್ಯಾರಟ್ ಹಾಕಿ ಹುರಿಯಿರಿ.
- ನಂತರ ಟೊಮ್ಯಾಟೋ ಹಾಕಿ ಹುರಿಯಿರಿ.
- ಪುಡಿಮಾಡಿದ ಆಲೂಗಡ್ಡೆ ಹಾಕಿ.
- ಒಂದು ಬಟ್ಟಲಿನಲ್ಲಿ ಕಡ್ಲೆಹಿಟ್ಟು, ಧನಿಯಾ ಪುಡಿ, ಜೀರಿಗೆ ಪುಡಿ ಮತ್ತು ಉಪ್ಪನ್ನು ಒಂದು ಲೋಟ ನೀರಿನಲ್ಲಿ ಕಲಸಿ ಹಾಕಿ.
- ಚೆನ್ನಾಗಿ ಮಗುಚಿ, ಐದು ನಿಮಿಷ ಕುದಿಸಿ.
- ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ. ಕೊತ್ತಂಬರಿ ಸೊಪ್ಪು ಉದುರಿಸಿ. ಸ್ಟವ್ ಆಫ್ ಮಾಡಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ