Siridhanya idli recipe in kannada | ಸಿರಿಧಾನ್ಯ ಇಡ್ಲಿ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಸಿರಿಧಾನ್ಯ (ಇಲ್ಲಿ ನವಣೆ ಉಪಯೋಗಿಸಿದೆ)
- 1/4 ಕಪ್ ಉದ್ದಿನ ಬೇಳೆ
- 1/4 ಗಟ್ಟಿ ಅವಲಕ್ಕಿ
- ಉಪ್ಪು ನಿಮ್ಮ ರುಚಿ ಪ್ರಕಾರ
ಸಿರಿಧಾನ್ಯ ಇಡ್ಲಿ ಮಾಡುವ ವಿಧಾನ:
- ಉದ್ದಿನಬೇಳೆಯನ್ನು ತೊಳೆದು 4 - 5 ಗಂಟೆಗಳ ಕಾಲ ನೆನೆಸಿಡಿ.
- ಅರೆಯುವ ಮುನ್ನ ಅವಲಕ್ಕಿಯನ್ನು ತೊಳೆದು 30 ನಿಮಿಷಗಳ ಕಾಲ ನೆನೆಸಿಡಿ.
- ಸಿರಿಧಾನ್ಯವನ್ನು ತೊಳೆದು 4 - 5 ಗಂಟೆಗಳ ಕಾಲ ನೆನೆಸಿಡಿ.
- 4 - 5 ಗಂಟೆಗಳ ನಂತರ ಮಿಕ್ಸಿಗೆ ನೆನೆಸಿದ ಉದ್ದಿನಬೇಳೆ ಮತ್ತು ಅವಲಕ್ಕಿ ಹಾಕಿ. ಸ್ವಲ್ಪ ಸ್ವಲ್ಪ ನೀರು ಸೇರಿಸುತ್ತಾ ನಯವಾಗಿ ಅರೆದು ಒಂದು ಪಾತ್ರೆಗೆ ಬಗ್ಗಿಸಿ.
- ನಂತರ ನೆನೆಸಿದ ಸಿರಿಧಾನ್ಯದ ನೀರು ಬಸಿದು, ತರಿ ತರಿಯಾಗಿ ಅರೆದು, ಅದೇ ಪಾತ್ರೆಗೆ ಬಗ್ಗಿಸಿ. ಅರೆಯಲು ಅಗತ್ಯವಿದ್ದಷ್ಟು ನೀರು ಸೇರಿಸಿ.
- ಚೆನ್ನಾಗಿ ಕಲಸಿ, ಮುಚ್ಚಳವನ್ನು ಮುಚ್ಚಿ ಮತ್ತು 7 - 8 ಗಂಟೆಗಳ ಕಾಲ ಹುದುಗಲು ಬಿಡಿ.
- ಹುದುಗುವಿಕೆಯ ನಂತರ ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
- ಇಡ್ಲಿ ತಟ್ಟೆಗಳಿಗೆ ಎಣ್ಣೆ ಅಥವಾ ತುಪ್ಪ ಸವರಿ ಇಡ್ಲಿ ಹಿಟ್ಟನ್ನು ಹಾಕಿ.
- 10 ನಿಮಿಷಗಳ ಕಾಲ ಅದನ್ನು ಸೆಕೆಯಲ್ಲಿ ಬೇಯಿಸಿ. ಇಡ್ಲಿ ಪಾತ್ರೆಯಲ್ಲಿ ನೀರು ಕುದಿಯಲು ಪ್ರಾರಂಭವಾದ ಮೇಲೆ ಇಡ್ಲಿ ತಟ್ಟೆಗಳನ್ನಿಡಿ. ೧೦ - ೧೨ ನಿಮಿಷಗಳ ಕಾಲ ಬೇಯಿಸಿ. ಒಂದೈದು ನಿಮಿಷ ಬಿಟ್ಟು ಇಡ್ಲಿಯನ್ನು ತೆಗೆಯಿರಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ