ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 250 ಗ್ರಾಂ ಬೆಂಡೆಕಾಯಿ
- 1 ಚಿಟಿಕೆ ಅರಿಶಿನ ಪುಡಿ
- ಹುಣಸೆ ಹಣ್ಣು ಒಂದು ನೆಲ್ಲಿಕಾಯಿ ಗಾತ್ರ
- ಬೆಲ್ಲ ಒಂದು ನೆಲ್ಲಿಕಾಯಿ ಗಾತ್ರ
- ಉಪ್ಪು ರುಚಿಗೆ ತಕ್ಕಷ್ಟು.
ಅರೆಯಲು ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 2 ಟೀಸ್ಪೂನ್ ಉದ್ದಿನ ಬೇಳೆ
- 2 - 4 ಒಣ ಮೆಣಸಿನಕಾಯಿ
- 1/2 ಕಪ್ ತೆಂಗಿನ ತುರಿ
- 1/2 ಟೀಸ್ಪೂನ್ ಮೆಂತ್ಯ
- 1 ಟೀಸ್ಪೂನ್ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1/4 ಟೀಸ್ಪೂನ್ ಸಾಸಿವೆ
- 1 ಒಣಮೆಣಸಿನಕಾಯಿ (ಬೇಕಾದಲ್ಲಿ)
- 4 - 5 ಕರಿಬೇವಿನ ಎಲೆ
- 1 ಟೀಸ್ಪೂನ್ ಅಡುಗೆ ಎಣ್ಣೆ
ಬೆಂಡೆಕಾಯಿ ಕಾಯಿರಸ ಮಾಡುವ ವಿಧಾನ:
- ಬೆಂಡೆಕಾಯಿ ತೊಳೆದು, ತುದಿ ಮತ್ತು ಬುಡ ತೆಗೆದು, 2 ಸೆಮೀ ಉದ್ದಕ್ಕೆ ಕತ್ತರಿಸಿಕೊಳ್ಳಿ.
- 1 ಕಪ್ ನೀರಿನಲ್ಲಿ ಹುಣಸೆ ಹಣ್ಣನ್ನು ನೆನೆಸಿ ರಸ ತೆಗೆದಿಟ್ಟುಕೊಳ್ಳಿ.
- ಕುಕ್ಕರ್‌ಗೆ ಕತ್ತರಿಸಿದ ಬೆಂಡೆಕಾಯಿ ಹಾಕಿ. ಉಪ್ಪು, ಅರಿಶಿನ ಪುಡಿ, ಬೆಲ್ಲ ಮತ್ತು ಹುಣಸೆ ರಸ ಸೇರಿಸಿ ಒಂದು ವಿಷಲ್ ಮಾಡಿ.
- ಒಂದು ಬಾಣಲೆಯನ್ನು ತೆಗೆದುಕೊಂಡು ಅದಕ್ಕೆ ಒಣ ಮೆಣಸು, ಉದ್ದಿನ ಬೇಳೆ, ಮೆಂತ್ಯ ಮತ್ತು ಎಣ್ಣೆ ಹಾಕಿ. ಉದ್ದಿನ ಬೇಳೆ ಹೊಂಬಣ್ಣಕ್ಕೆ ಬರುವ ತನಕ ಕಡಿಮೆ ಉರಿಯಲ್ಲಿ ಹುರಿಯಿರಿ.
- ಮಿಕ್ಸಿ ಜಾರ್ಗೆ ತೆಂಗಿನತುರಿ ಮತ್ತು ಹುರಿದ ಪದಾರ್ಥಗಳನ್ನು ಹಾಕಿ ಅರೆಯಿರಿ.
- ಬೇಯಿಸಿದ ಬೆಂಡೆಕಾಯಿಗೆ ಅರೆದ ಮಸಾಲೆ ಸೇರಿಸಿ. ಬೇಕಾದಲ್ಲಿ ಉಪ್ಪು ಸೇರಿಸಿ. ಒಂದು ಕುದಿ ಕುದಿಸಿ.
- ನಂತರ ಎಣ್ಣೆ, ಒಣಮೆಣಸು, ಸಾಸಿವೆ ಮತ್ತು ಕರಿಬೇವಿನ ಸೊಪ್ಪಿನ ಒಗ್ಗರಣೆ ಮಾಡಿ. ಅನ್ನ ಅಥವಾ ಚಪಾತಿ ಜೊತೆ ಬಡಿಸಿ.
Bendekai fry madabeku sarena sir?
ಪ್ರತ್ಯುತ್ತರಅಳಿಸಿIlla..bendekai fry madodu beda.
ಅಳಿಸಿ