Shavige chitranna recipe in Kannada | ಶಾವಿಗೆ ಚಿತ್ರಾನ್ನ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂ ಎಲ್)
- 1 ಕಪ್ ಶಾವಿಗೆ
- 1/2 ಕಪ್ ತೆಂಗಿನ ತುರಿ
- 2 - 4 ಹಸಿರು ಮೆಣಸಿನಕಾಯಿ
- 1 ಟೀಸ್ಪೂನ್ ಸಾಸಿವೆ
- 2 ಟೇಬಲ್ ಸ್ಪೂನ್ ಶೇಂಗಾ ಅಥವಾ ಕಡಲೆಕಾಯಿ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡ್ಲೆಬೇಳೆ
- ಉಪ್ಪು ನಿಮ್ಮ ರುಚಿ ಪ್ರಕಾರ
- 5 - 6 ಕರಿಬೇವಿನ ಎಲೆ
- 1 ದೊಡ್ಡ ಈರುಳ್ಳಿ ಸಣ್ಣಗೆ ಹೆಚ್ಚಿದ್ದು
- 2 ಟೇಬಲ್ ಚಮಚ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1/4 ಟೀಸ್ಪೂನ್ ಅರಿಶಿನ ಪುಡಿ
- 1 ಮಧ್ಯಮ ಗಾತ್ರದ ನಿಂಬೆ ಹಣ್ಣು
- 4 ಟೇಬಲ್ ಸ್ಪೂನ್ ಅಡುಗೆ ಎಣ್ಣೆ
ಶಾವಿಗೆ ಚಿತ್ರಾನ್ನ ಮಾಡುವ ವಿಧಾನ:
- ಒಂದು ಪಾತ್ರೆಯಲ್ಲಿ ಸುಮಾರು 5 ಕಪ್ ನೀರು, 1/2 ಚಮಚ ಉಪ್ಪು ಮತ್ತು 1 ಚಮಚ ಎಣ್ಣೆ ತೆಗೆದುಕೊಳ್ಳಿ. ನೀರನ್ನು ಕುದಿಸಿ, ಅದಕ್ಕೆ ಶಾವಿಗೆ ಹಾಕಿ ಬೇಯಿಸಿಕೊಳ್ಳಿ. ಗಮನಿಸಿ ತುಂಬ ಮೆತ್ತಗೆ ಬೇಯಿಸುವುದು ಬೇಡ.
- ಬೇಯಿಸಿದ ನಂತರ ನೀರನ್ನು ಬಸಿದು ಪಕ್ಕಕ್ಕಿಡಿ.
- ಒಂದು ಮಿಕ್ಸಿ ಜಾರಿನಲ್ಲಿ 1 ಕಪ್ ತೆಂಗಿನ ತುರಿ, 2 ಹಸಿರು ಮೆಣಸಿನಕಾಯಿ ಮತ್ತು 1/2 ಚಮಚ ಸಾಸಿವೆ ಹಾಕಿ.
- ನೀರು ಹಾಕದೇ ಪುಡಿ ಮಾಡಿ ಪಕ್ಕಕ್ಕಿಡಿ. ಇದನ್ನು ಒಗ್ಗರಣೆ ಮಾಡುವಾಗ ಮುಂದೆ ಉಪಯೋಗಿಸಲಾಗುತ್ತದೆ.
- ಈಗ ಒಂದು ದೊಡ್ಡ ಬಾಣಲೆಯನ್ನು ತೆಗೆದುಕೊಂಡು ಎಣ್ಣೆ ಹಾಕಿ ಕಾಯಲು ಇಡಿ. ಮೊದಲಿಗೆ ಶೇಂಗಾ ಅಥವಾ ಕಡಲೆಕಾಯಿಯನ್ನು ಹಾಕಿ.
- ಕಡಲೆಕಾಯಿ ಸ್ವಲ್ಪ ಕಾದು ಸಿಡಿಯಲು ಪ್ರಾರಂಭಿಸಿದ ಕೂಡಲೇ ಸಾಸಿವೆ, ಕಡ್ಲೆಬೇಳೆ ಮತ್ತು ಉದ್ದಿನ ಬೇಳೆಯನ್ನು ಸೇರಿಸಿ.
- ಸಾಸಿವೆ ಸಿಡಿದ ಕೂಡಲೇ ಸಣ್ಣಗೆ ಹೆಚ್ಚಿದ ಈರುಳ್ಳಿ ಮತ್ತು ಕರಿಬೇವು ಸೇರಿಸಿ. ಈರುಳ್ಳಿ ಮೆತ್ತಗಾಗುವವರೆಗೆ ಹುರಿಯಿರಿ.
- ನಂತರ ಪುಡಿಮಾಡಿದ ತೆಂಗಿನ ತುರಿ, ಸಾಸಿವೆ ಮತ್ತು ಹಸಿಮೆಣಸಿನ ಮಿಶ್ರಣವನ್ನು ಸೇರಿಸಿ. ಅರಿಶಿನ ಪುಡಿಯನ್ನು ಹಾಕಿ. ಚೆನ್ನಾಗಿ ಕಲಸಿ. ನಂತರ ಸ್ಟೋವ್ ಆಫ್ ಮಾಡಿ.
- ಈಗ ಬೇಯಿಸಿದ ಶಾವಿಗೆ ಹಾಕಿ.
- ಮೇಲಿನಿಂದ ಹೆಚ್ಚಿದ ಕೊತ್ತಂಬರಿ ಸೊಪ್ಪು, ಉಪ್ಪು ಮತ್ತು ನಿಂಬೆಹಣ್ಣಿನ ರಸವನ್ನು ಸೇರಿಸಿ.
- ಚಪ್ಪಟೆಯಾದ ಸಟ್ಟುಗ ಬಳಸಿ ಚಿತ್ರಾನ್ನವನ್ನು ಕಲಸಿ. ಸವಿದು ಆನಂದಿಸಿ.
To see step by step pictures click here (ಈ ಅಡುಗೆ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ