Tomato bath recipe in Kannada | ಈರುಳ್ಳಿ ಬೆಳ್ಳುಳ್ಳಿ ರಹಿತ ಟೊಮೇಟೊ ಬಾತ್ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್)
- 1 ಕಪ್ ಸೋನಾ ಮಸೂರಿ ಅಕ್ಕಿ
- 4 ಟೇಬಲ್ ಚಮಚ ಅಡುಗೆ ಎಣ್ಣೆ
- 1/2 ಚಮಚ ಸಾಸಿವೆ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡಲೆಬೇಳೆ
- 4 - 5 ಕರಿಬೇವಿನ ಎಲೆ
- 4 ಸಣ್ಣದಾಗಿ ಹೆಚ್ಚಿದ ಮಧ್ಯಮ ಗಾತ್ರದ ಟೊಮ್ಯಾಟೊ
- 1/2 ಕಪ್ ತೆಂಗಿನ ತುರಿ
- 1/4 ಟೀಸ್ಪೂನ್ ಅರಶಿನ ಪುಡಿ
- 1 ಟೇಬಲ್ ಚಮಚ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- ಉಪ್ಪು ರುಚಿಗೆ ತಕ್ಕಷ್ಟು
ಮಸಾಲೆ ಪುಡಿಗೆ ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್)
- 2 - 4 ಕೆಂಪು ಮೆಣಸಿನಕಾಯಿ (ಮಧ್ಯಮ ಖಾರ)
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡಲೆಬೇಳೆ
- 2 ಟೀಸ್ಪೂನ್ ಕೊತ್ತಂಬರಿ ಬೀಜ
- 4 - 5 ಲವಂಗ
- 1/2 ಬೆರಳುದ್ದ ಚಕ್ಕೆ
- 1 ಏಲಕ್ಕಿ
- ಚಿಟಿಕೆ ಇಂಗು
ಈರುಳ್ಳಿ ಬೆಳ್ಳುಳ್ಳಿ ರಹಿತ ಟೊಮೇಟೊ ಬಾತ್ ಮಾಡುವ ವಿಧಾನ:
- ಮೊದಲಿಗೆ ಉದುರು ಉದುರಾದ ಅನ್ನ ಮಾಡಿಟ್ಟು ಕೊಳ್ಳಿ.
- ಒಂದು ಬಾಣಲೆಯಲ್ಲಿ ಕೆಂಪು ಮೆಣಸಿನಕಾಯಿ, ಉದ್ದಿನ ಬೇಳೆ, ಕಡಲೆಬೇಳೆ, ಕೊತ್ತಂಬರಿ ಬೀಜ, ಲವಂಗ, ಚಕ್ಕೆ, ಏಲಕ್ಕಿ ಮತ್ತು ಇಂಗನ್ನು 1 ಚಮಚ ಎಣ್ಣೆ ಹಾಕಿ ಹುರಿಯಿರಿ.
- ಹುರಿದ ಎಲ್ಲ ಪದಾರ್ಥಗಳು ತಣ್ಣಗಾದ ಮೇಲೆ ಪುಡಿ ಮಾಡಿಟ್ಟು ಕೊಳ್ಳಿ.
- ನಂತರ 4 ಟೇಬಲ್ ಚಮಚ ಅಡುಗೆ ಎಣ್ಣೆಯನ್ನು ಒಂದು ಬಾಣಲೆಯಲ್ಲಿ ತೆಗೆದುಕೊಂಡು ಬಿಸಿ ಮಾಡಿ.
- ಸಾಸಿವೆ, ಉದ್ದಿನ ಬೇಳೆ, ಕಡಲೆಬೇಳೆ ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
- ನಂತರ ಹೆಚ್ಚಿದ ಟೊಮೇಟೊ ಹಾಕಿ
- ಉಪ್ಪು ಮತ್ತು ಅರಶಿನ ಹಾಕಿ ಟೊಮೇಟೊ ಮುದ್ದೆ ಆಗುವವರೆಗೆ ಬೇಯಿಸಿ.
- ನಂತ್ರ ಮಸಾಲೆ ಪುಡಿ ಮತ್ತು ಕಾಯಿ ತುರಿಯನ್ನ ಹಾಕಿ ಚೆನ್ನಾಗಿ ಮಗುಚಿ. ಸ್ಟವ್ ಆಫ್ ಮಾಡಿ.
- ಬೇಯಿಸಿಟ್ಟ ಅನ್ನ ಹಾಕಿ ಕಲಸಿ. ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ. ಬಿಸಿ ಬಿಸಿಯಾಗಿ ಬಡಿಸಿ.