Shenga or Kadlekai chutney recipe in Kannada | ಶೇಂಗಾ ಚಟ್ನಿ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
1/2 ಕಪ್ ಶೇಂಗಾ ಅಥವಾ ಕಡ್ಲೆಕಾಯಿ
2-4 ಒಣ ಮೆಣಸಿನಕಾಯಿ
3 - 4 ಬೇಳೆ ಬೆಳ್ಳುಳ್ಳಿ
3 - 4 ಕರಿಬೇವಿನ ಎಲೆ
1/4 ಕಪ್ ತೆಂಗಿನ ತುರಿ
ಸಣ್ಣ ಗೋಲಿ ಗಾತ್ರದ ಹುಣಿಸೆಹಣ್ಣು
ಉಪ್ಪು ರುಚಿಗೆ ತಕ್ಕಷ್ಟು
1 ಟೀಸ್ಪೂನ್ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
1/2 ಟೀಸ್ಪೂನ್ ಸಾಸಿವೆ
1 ಒಣ ಮೆಣಸಿನಕಾಯಿ ಅಥವಾ ಹಸಿ ಮೆಣಸಿನಕಾಯಿ
3 - 4 ಕರಿಬೇವಿನ ಎಲೆ
2 ಟೀಸ್ಪೂನ್ ಅಡುಗೆ ಎಣ್ಣೆ
ಶೇಂಗಾ ಚಟ್ನಿ ಮಾಡುವ ವಿಧಾನ:
ಬಾಣಲೆಯಲ್ಲಿ ಒಂದು ಚಮಚ ಎಣ್ಣೆ ಬಿಸಿ ಮಾಡಿ, ಅರ್ಧ ಕಪ್ ಶೇಂಗಾ ಅಥವಾ ನೆಲಗಡಲೆ ಹಾಕಿ ಮಧ್ಯಮ ಉರಿಯಲ್ಲಿ ಹುರಿಯಿರಿ. (ಗಮನಿಸಿ, ಶೇಂಗಾ ಮತ್ತು ತೆಂಗಿನ ತುರಿಯ ಪ್ರಮಾಣವನ್ನು ನಿಮ್ಮಿಷ್ಟದಂತೆ ಬದಲಾಯಿಸಬಹುದು.)
ನೆಲಗಡಲೆ ಕಂದು ಬಣ್ಣಕ್ಕೆ ತಿರುಗಿ, ಗರಿ-ಗರಿಯಾದಾಗ ಒಣಮೆಣಸು ಮತ್ತು ಸಿಪ್ಪೆ ತೆಗೆದು ಕತ್ತರಿಸಿದ ಬೆಳ್ಳುಳ್ಳಿ ಹಾಕಿ. ಒಂದೆರಡು ನಿಮಿಷ ಹುರಿಯಿರಿ.
ಕೊನೆಯಲ್ಲಿ ಕರಿಬೇವು ಮತ್ತು ತೆಂಗಿನ ತುರಿ ಹಾಕಿ, ಮಗುಚಿ ಸ್ಟವ್ ಆಫ್ ಮಾಡಿ.
ಉಪ್ಪು, ಹುಣಿಸೇಹಣ್ಣು ಮತ್ತು ಅಗತ್ಯವಿದ್ದಷ್ಟು ನೀರು ಹಾಕಿ ನುಣ್ಣನೆ ಅರೆಯಿರಿ.
ಅದನ್ನು ಒಂದು ಬಟ್ಟಲಿಗೆ ಹಾಕಿ. ಈ ಚಟ್ನಿ ಸ್ವಲ್ಪ ತೆಳ್ಳಗಿರಬೇಕು. ಅಗತ್ಯವಿದ್ದಷ್ಟು ನೀರು ಸೇರಿಸಿ.
ಎಣ್ಣೆ, ಸಾಸಿವೆ, ಒಣಮೆಣಸು ಮತ್ತು ಕರಿಬೇವಿನ ಒಗ್ಗರಣೆ ಕೊಡಿ. ಇಡ್ಲಿ ಅಥವಾ ದೋಸೆಯೊಂದಿಗೆ ಬಡಿಸಿ.
Bili holige recipe in Kannada | ಬಿಳಿ ಹೋಳಿಗೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
1 ಕಪ್ ಮೈದಾ ಹಿಟ್ಟು (8 ಚಪಾತಿ ಗಾಗುವಷ್ಟು)
4 ಟೇಬಲ್ ಚಮಚ ಅಡುಗೆ ಎಣ್ಣೆ
ಉಪ್ಪು ರುಚಿಗೆ ತಕ್ಕಷ್ಟು.
ತುಂಬಿಸಲು ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
1 ಕಪ್ ಅಕ್ಕಿಹಿಟ್ಟು
2 ಕಪ್ ನೀರು (ಸ್ವಲ್ಪ ಹೆಚ್ಚು ಕಡಿಮೆ, ಅಕ್ಕಿ ಹಿಟ್ಟಿನ ಗುಣಮಟ್ಟ ಅವಲಂಬಿಸಿ)
1 ಟೀಸ್ಪೂನ್ಎಣ್ಣೆ
ಉಪ್ಪು ರುಚಿಗೆ ತಕ್ಕಷ್ಟು.
ಬಿಳಿ ಹೋಳಿಗೆ ಮಾಡುವ ವಿಧಾನ:
ಒಂದು ಬಟ್ಟಲಿನಲ್ಲಿ ಮೈದಾ ಹಿಟ್ಟು ಮತ್ತು ಉಪ್ಪನ್ನು ತೆಗೆದುಕೊಳ್ಳಿ.
ಅಗತ್ಯವಿದ್ದಷ್ಟು ನೀರು ಸೇರಿಸಿ ಮೃದುವಾದ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ.
ಕೊನೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ, ಪುನಃ ಕಲಸಿ, ಮುಚ್ಚಿಡಿ.
ಒಂದು ಬಾಣಲೆಯಲ್ಲಿ ನೀರು, ಎಣ್ಣೆ ಮತ್ತು ಉಪ್ಪನ್ನು ಹಾಕಿ ಕುದಿಯಲು ಇಡಿ.
ಕುದಿಯಲು ಪ್ರಾರಂಭವಾದ ಕೂಡಲೇ ಅಕ್ಕಿಹಿಟ್ಟನ್ನು ಹಾಕಿ ಒಂದೆರಡು ನಿಮಿಷ ಮಗುಚಿ.
ಸ್ಟವ್ ಆಫ್ ಮಾಡಿ. ಬಿಸಿ ಆರುವವರೆಗೆ ಮುಚ್ಚಿಡಿ.
ಬಿಸಿ ಆರಿದ ಮೇಲೆ ಕೈಗೆ ಎಣ್ಣೆ ಮುಟ್ಟಿಸಿಕೊಂಡು ಚೆನ್ನಾಗಿ ನಾದಿ. ಗಮನಿಸಿ ಹಿಟ್ಟು ಮೃದುವಾಗಿರಬೇಕು.
ಈಗ ಬಿಳಿ ಹೋಳಿಗೆ ಮಾಡಲು, ಎಣ್ಣೆ ಅಥವಾ ಹಿಟ್ಟನ್ನು ಮುಟ್ಟಿಕೊಂಡು, ಒಂದುಸಣ್ಣನಿಂಬೆ ಗಾತ್ರದ ಹಿಟ್ಟನ್ನು ತೆಗೆದುಕೊಂಡು, ಚಪ್ಪಟೆ ಮಾಡಿ. ಅದರೊಳಗೆ ಒಂದು ಅಕ್ಕಿ ಹಿಟ್ಟಿನ ಉಂಡೆಯನ್ನು ಇರಿಸಿ.
ತುದಿಗಳನ್ನು ಒಟ್ಟಿಗೆ ತಂದು ರವೆಯನ್ನು ಒಳಗೆ ಸೇರಿಸಿ.
ಸಾಕಷ್ಟು ಎಣ್ಣೆ ಅಥವಾ ಗೋಧಿ ಹಿಟ್ಟನ್ನು ಬಳಸಿ ಅಕ್ಕಿ ಹಿಟ್ಟು ಸೇರಿಸಿದ ಉಂಡೆಯನ್ನು ಚಪಾತಿಯಂತೆ ಒತ್ತಿ ಅಥವಾ ಲಟ್ಟಿಸಿ.
ಒಂದು ಹೆಂಚು ಅಥವಾ ನಾನ್ ಸ್ಟಿಕ್ ತವಾ ತೆಗೆದುಕೊಂಡು ಅದನ್ನು ಬಿಸಿ ಮಾಡಿ. ಜಾಗ್ರತೆಯಿಂದ ಲಟ್ಟಿಸಿದ ಹೋಳಿಗೆಯನ್ನು ತವಾ ಮೇಲೆ ಹಾಕಿ.
ಎರಡು ಬದಿ ಕಾಯಿಸಿ. ಬೇಕಾದಲ್ಲಿ ಕಾಯಿಸುವಾಗ ತುಪ್ಪ ಅಥವಾ ಎಣ್ಣೆ ಹಾಕಿ. ಬಿಸಿಯಾಗಿರುವಾಗಲೇ ಯಾವುದೇ ಗೊಜ್ಜು ಅಥವಾ ಸೀಕರಣೆ ಯೊಂದಿಗೆ ಬಡಿಸಿ.
Basale soppu sambar recipe in Kannada | ಬಸಳೆ ಸೊಪ್ಪು ಸಾಂಬಾರ್ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
1 ಕಟ್ಟು ಬಸಳೆ ಸೊಪ್ಪು
1/4 ಕಪ್ ಅಲಸಂದೆ ಕಾಳು ಅಥವಾ ಹುರಿದ ಹುರುಳಿಕಾಳು
1/4 ಟೀಸ್ಪೂನ್ ಅರಿಶಿನ ಪುಡಿ
2 ಟೀಸ್ಪೂನ್ ಕಲ್ಲುಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
ಸಣ್ಣ ಗೋಲಿ ಗಾತ್ರದ ಹುಣಿಸೇಹಣ್ಣು
ಮಸಾಲೆಗೆ ಬೇಕಾಗುವ ಪದಾರ್ಥಗಳು:
1 ಕಪ್ ತೆಂಗಿನ ತುರಿ
2 - 4 ಒಣ ಮೆಣಸಿನಕಾಯಿ
2 ಟೀಸ್ಪೂನ್ ಕೊತ್ತಂಬರಿ ಬೀಜ
1/2 ಟೀಸ್ಪೂನ್ ಸಾಸಿವೆ
2 ಬೇಳೆ ಬೆಳ್ಳುಳ್ಳಿ
1 ಟೀಸ್ಪೂನ್ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
1 ಕೆಂಪು ಮೆಣಸಿನಕಾಯಿ
5 - 6 ಕರಿಬೇವು
1/4 ಟೀಸ್ಪೂನ್ ಸಾಸಿವೆ
1 ಟೀಸ್ಪೂನ್ ಅಡುಗೆ ಎಣ್ಣೆ
ಬಸಳೆ ಸೊಪ್ಪು ಸಾಂಬಾರ್ ಮಾಡುವ ವಿಧಾನ:
ಬಸಳೆ ಎಲೆ ಮತ್ತು ದಂಟನ್ನು ಬೇರೆ ಮಾಡಿ ತೊಳೆಯಿರಿ. ದಂಟನ್ನು ಬೆರಳುದ್ದ ಕತ್ತರಿಸಿ. ಸೊಪ್ಪನ್ನು ಸಣ್ಣಗೆ ಕತ್ತರಿಸಿ.
ಒಂದು ಕುಕ್ಕರ್ ನಲ್ಲಿ ಅಲಸಂದೆ ಕಾಳನ್ನು (ಅಥವಾ ಹುರಿದ ಹುರುಳಿಕಾಳು) ತೆಗೆದುಕೊಂಡು ತೊಳೆಯಿರಿ. ಅದಕ್ಕೆ ಕತ್ತರಿಸಿದ ಬಸಳೆ ಸೊಪ್ಪಿನ ದಂಟನ್ನು ಹಾಕಿ, ಅರ್ಧ ಲೋಟ ನೀರು ಹಾಕಿ, ಒಂದು ವಿಷಲ್ ಮಾಡಿ.
ನಂತರ ಅದಕ್ಕೆ ಕತ್ತರಿಸಿದ ಸೊಪ್ಪು, ಸ್ವಲ್ಪ ಉಪ್ಪು ಮತ್ತು ಅರಿಶಿನ ಪುಡಿ ಹಾಕಿ.
ಅರ್ಧ ಲೋಟ ನೀರು ಹಾಕಿ ಪುನಃ ಒಂದು ವಿಷಲ್ ಮಾಡಿ ಬೇಯಿಸಿ ಕೊಳ್ಳಿ.
ಈಗ ಒಂದು ಬಾಣಲೆ ತೆಗೆದು ಕೊಂಡು, ಕೆಂಪು ಮೆಣಸಿನಕಾಯಿ, ಕೊತ್ತಂಬರಿ ಬೀಜ ಮತ್ತು ಸಾಸಿವೆಯನ್ನು ಮಧ್ಯಮ ಉರಿಯಲ್ಲಿ 1 ಟೀಸ್ಪೂನ್ ಎಣ್ಣೆ ಹಾಕಿ ಹುರಿಯಿರಿ.
ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ನೀರು ಸೇರಿಸಿ ಅರೆಯಿರಿ.
ಕೊನೆಯಲ್ಲಿ ಬೆಳ್ಳುಳ್ಳಿ ಹಾಕಿ ಒಂದು ಸುತ್ತು ಅರೆದು ತೆಗೆಯಿರಿ.
ಅರೆದ ಮಸಾಲೆಯನ್ನು ತರಕಾರಿ ಮತ್ತು ಬೇಳೆ ಇರುವ ಕುಕ್ಕರ್ ಗೆ ಹಾಕಿ. ಉಪ್ಪು ಮತ್ತು ಹುಣಿಸೆರಸ ಹಾಕಿ.
ಕೊನೆಯಲ್ಲಿ ಬೇಕಾದಷ್ಟು ನೀರು ಸೇರಿಸಿ, ಮಗುಚಿ, ಒಂದು ಕುದಿ ಕುದಿಸಿ.
ಒಣ ಮೆಣಸು, ಸಾಸಿವೆ, ಕರಿಬೇವಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.
Sihi kumbalakai chutney recipe in Kannada | ಸಿಹಿಕುಂಬಳಕಾಯಿ ಚಟ್ನಿ ಮಾಡುವ ವಿಧಾನ
ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
1/4 kg ಚೀನಿಕಾಯಿ ಅಥವಾ ಸಿಹಿ ಕುಂಬಳಕಾಯಿ
2-4 ಒಣ ಮೆಣಸಿನಕಾಯಿ
1 ಟಿಸ್ಪೂನ್ ಎಳ್ಳು
2 ಟೇಬಲ್ ಚಮಚ ಹುರಿಗಡಲೆ ಅಥವಾ ಕಡ್ಲೆಬೇಳೆ
ಸಣ್ಣ ಗೋಲಿ ಗಾತ್ರದ ಹುಣಿಸೆಹಣ್ಣು
1/2 ಟಿಸ್ಪೂನ್ ಬೆಲ್ಲ
1/2 ಕಪ್ ತೆಂಗಿನ ತುರಿ
ಉಪ್ಪು ರುಚಿಗೆ ತಕ್ಕಷ್ಟು.
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
1/2 ಟೀಸ್ಪೂನ್ ಸಾಸಿವೆ
1/2 ಟೀಸ್ಪೂನ್ ಉದ್ದಿನಬೇಳೆ
3 - 4 ಕರಿಬೇವಿನ ಎಲೆ
2 ಟೀಸ್ಪೂನ್ ಅಡುಗೆ ಎಣ್ಣೆ
ಸಿಹಿಕುಂಬಳಕಾಯಿ ಚಟ್ನಿ ಮಾಡುವ ವಿಧಾನ:
ಚೀನಿಕಾಯಿ ಅಥವಾ ಸಿಹಿ ಕುಂಬಳಕಾಯಿಯನ್ನು ಸಿಪ್ಪೆ ತೆಗೆದು, ತೊಳೆದು ಕತ್ತರಿಸಿಟ್ಟು ಕೊಳ್ಳಿ.
ಕತ್ತರಿಸಿದ ಸಿಹಿ ಕುಂಬಳಕಾಯಿ, ಉಪ್ಪು, ಬೆಲ್ಲ, ಹುಣಿಸೇಹಣ್ಣು ಮತ್ತು ಸ್ವಲ್ಪ ನೀರನ್ನು ಕುಕ್ಕರ್ ಗೆ ಹಾಕಿ ಬೇಯಿಸಿ.
ಒಂದು ಬಾಣಲೆ ಬಿಸಿಮಾಡಿ, ಅದಕ್ಕೆ ಕೆಂಪು ಮೆಣಸಿನಕಾಯಿ ಮತ್ತು ಎಳ್ಳನ್ನು ಹಾಕಿ ಹುರಿಯಿರಿ. ಕಡ್ಲೆಬೇಳೆ ಹಾಕುವುದಾದಲ್ಲಿ ಅದನ್ನು ಹಾಕಿ ಹುರಿಯಿರಿ. ಸ್ಟವ್ ಆಫ್ ಮಾಡಿ.
ಬೇಯಿಸಿದ ಸಿಹಿ ಕುಂಬಳಕಾಯಿ ಬಿಸಿ ಆರಿದ ಮೇಲೆ ಮಿಕ್ಸಿ ಜಾರಿಗೆ ಹಾಕಿ. ತೆಂಗಿನ ತುರಿ, ಹುರಿದ ಪದಾರ್ಥಗಳು ಮತ್ತು ಹುರಿಗಡಲೆ (ಕಡ್ಲೆಬೇಳೆ ಹಾಕದಿದ್ದಲ್ಲಿ) ಸೇರಿಸಿ. ನುಣ್ಣನೆ ಅರೆಯಿರಿ.
ಎಣ್ಣೆ, ಸಾಸಿವೆ, ಕರಿಬೇವು ಮತ್ತು ಉದ್ದಿನಬೇಳೆಯ ಒಗ್ಗರಣೆ ಕೊಡಿ. ಬಿಸಿ ಬಿಸಿ ಅನ್ನ ಅಥವಾ ದೋಸೆಯೊಂದಿಗೆ ಬಡಿಸಿ.
Southe pundi or unde kadubu recipe in Kannada | ಸೌತೆ ಪುಂಡಿ ಅಥವಾ ಉಂಡೆ ಕಡುಬು ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
1.5 ಕಪ್ ಉತ್ತಮ ಗುಣಮಟ್ಟದ ದೋಸೆ ಅಕ್ಕಿ
1/2 ಕಪ್ ತೆಂಗಿನ ತುರಿ
1/2ಮುಳ್ಳು ಸೌತೆಕಾಯಿ
2.5 ಕಪ್ ನೀರು
ಉಪ್ಪು ರುಚಿಗೆ ತಕ್ಕಷ್ಟು
ಸೌತೆ ಪುಂಡಿ ಅಥವಾ ಉಂಡೆ ಕಡುಬು ಮಾಡುವ ವಿಧಾನ:
ಅಕ್ಕಿಯನ್ನು ತೊಳೆದು, ನೀರು ಬಗ್ಗಿಸಿ, ನೀರಾರಲು ಬಿಡಿ.
ನಂತರ ಮಿಕ್ಸಿಯಲ್ಲಿ ತರಿ ತರಿಯಾಗಿ ಪುಡಿ ಮಾಡಿಕೊಳ್ಳಿ. ಕೆಲವು ಸೆಕೆಂಡ್ ಗಳ ಕಾಲ ಮಿಕ್ಸಿ ಮಾಡಿದರೆ ಸಾಕಾಗುತ್ತದೆ.
ಮುಳ್ಳುಸೌತೆಯನ್ನು ಮತ್ತು ತೆಂಗಿನಕಾಯಿಯನ್ನು ತುರಿದಿಡಿ.
ಒಂದು ಬಾಣಲೆಯಲ್ಲಿ ನೀರು ಮತ್ತು ಉಪ್ಪು ಹಾಕಿ ಕುದಿಯಲು ಇಡಿ.
ನೀರು ಕುದಿಯಲು ಪ್ರಾರಂಭಿಸಿದ ಕೂಡಲೇ ಮೊದಲಿಗೆ ತುರಿದ ಮುಳ್ಳು ಸೌತೆ ಮತ್ತು ತೆಂಗಿನ ತುರಿ ಹಾಕಿ.
ನಂತ್ರ ಅಕ್ಕಿ ತರಿ ಅಥವಾ ರವೆಯನ್ನು ಹಾಕುತ್ತಾ ದೋಸೆ ಸಟ್ಟುಗ ಉಪಯೋಗಿಸಿ ಗಂಟಾಗದಂತೆ ಮಗುಚಿ.
ಮಧ್ಯಮ ಉರಿಯಲ್ಲಿ ಗಟ್ಟಿಯಾಗುವವರೆಗೆ ಮಗುಚಿ. ತುಂಬ ಗಟ್ಟಿಯಾಗುವುದು ಬೇಡ. ಸಟ್ಟುಗ ಬೀಳದೆ ನೇರ ನಿಲ್ಲುವಷ್ಟು ಗಟ್ಟಿ ಆದರೆ ಸಾಕು. ಸ್ಟವ್ ಆಫ್ ಮಾಡಿ.
ಸ್ವಲ್ಪ ಬಿಸಿ ಆರಿದ ಮೇಲೆ, ಕೈಗೆ ನೀರು ಮುಟ್ಟಿಸಿಕೊಂಡು, ಸಣ್ಣ ಕಿತ್ತಳೆ ಗಾತ್ರದ ಉಂಡೆಗಳನ್ನು ಮಾಡಿ, ಹೆಬ್ಬೆರಳಿಂದ ಒಂದು ಗುಳಿಯನ್ನು ಮಾಡಿ. ಅಥವಾ ನಿಮ್ಮಿಷ್ಟದಂತೆ ಚಪ್ಪಟೆ ಅಥವಾ ಗೋಲಾಕಾರದಲ್ಲೂ ಮಾಡಬಹುದು.
ಸೆಕೆಯಲ್ಲಿ (ಆವಿಯಲ್ಲಿ) 15 ನಿಮಿಷ ಬೇಯಿಸಿ. ಬೇಯಿಸುವ ಸಮಯ ಕಡುಬಿನ ಪ್ರಮಾಣದ ಮೇಲೆ ಬದಲಾಗಬಹುದು. ಚಟ್ನಿ, ಸಾಂಬಾರ್ ಅಥವಾ ಸಾರಿನಿಂದಿಗೆ ಸವಿದು ಆನಂದಿಸಿ.
Instant neer dose recipe in Kannada | ದಿಢೀರ್ ನೀರ್ ದೋಸೆ ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
1/2 ಕಪ್ ಅಕ್ಕಿ ಹಿಟ್ಟು
1 ಟೇಬಲ್ ಚಮಚ ತೆಂಗಿನ ತುರಿ
ಉಪ್ಪು ರುಚಿಗೆ ತಕ್ಕಷ್ಟು
ದಿಢೀರ್ ನೀರ್ ದೋಸೆ ವಿಡಿಯೋ
ದಿಢೀರ್ ನೀರ್ ದೋಸೆ ಮಾಡುವ ವಿಧಾನ:
ಮಿಕ್ಸಿ ಜಾರಿನಲ್ಲಿ ಅಕ್ಕಿ ಹಿಟ್ಟು ಮತ್ತು ತೆಂಗಿನ ತುರಿ ತೆಗೆದುಕೊಳ್ಳಿ. ಅಗತ್ಯವಿದ್ದಷ್ಟು ನೀರು ಸೇರಿಸಿ, ನುಣ್ಣನೆ ಅರೆಯಿರಿ.
ಹಿಟ್ಟು ಅರೆದ ಮೇಲೆ ಒಂದು ಪಾತ್ರೆಗೆ ಹಾಕಿ. ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ.
ದೋಸೆ ಹಿಟ್ಟು ತೆಳುವಾಗಲು ಸಾಕಷ್ಟು ನೀರು ಸೇರಿಸಿ.
ಕಬ್ಬಿಣದ ಕಾವಲಿ ತೆಗೆದುಕೊಂಡು ಒಲೆ ಮೇಲೆ ಇರಿಸಿ. ನೀರು ದೋಸೆ ಮಾಡಲು ಕಾವಲಿ ಚೆನ್ನಾಗಿ ಕಾದಿರ ಬೇಕು. ನಾನ್-ಸ್ಟಿಕ್ ತವವನ್ನು ಸಹ ಬಳಸಬಹುದು.
ಸಣ್ಣ ಈರುಳ್ಳಿ ಬಳಸಿಕೊಂಡು ಕಾವಲಿಗೆ ಎಣ್ಣೆ ಹಚ್ಚಿ. ಪ್ರತಿ ದೋಸೆ ಮಾಡುವ ಮುನ್ನ, ಹಿಟ್ಟನ್ನು ಚೆನ್ನಾಗಿ ಸೌಟಿನಲ್ಲಿ ಬೆರೆಸಿಕೊಳ್ಳ ಬೇಕು. ಬಿಸಿ ಕಾವಲಿ ಮೇಲೆ ದೋಸೆ ಹಿಟ್ಟನ್ನು ಸೌಟಿನಿಂದ ಸುರಿಯಿರಿ.
ಸುಮಾರು 10 ಸೆಕೆಂಡುಗಳ ಕಾಲ ಮುಚ್ಚಳವನ್ನು ಮುಚ್ಚಿ. ನಂತರ ಮುಚ್ಚಳ ತೆರೆದು, ಉರಿಯನ್ನು ಕಡಿಮೆ ಮಾಡಿ, 5 ಸೆಕೆಂಡುಗಳ ಕಾಲ ಬಿಟ್ಟು, ದೋಸೆ ಸಟ್ಟುಗ ಉಪಯೋಗಿಸಿ ದೋಸೆಯನ್ನು ತೆಗೆಯಿರಿ. ಪುನಃ ಉರಿಯನ್ನು ಹೆಚ್ಚಿಸಿ.
ನೀರ್ ದೋಸೆ ಕಾವಲಿಯಿಂದ ತೆಗೆಯಲು ಕಷ್ಟಸಾಧ್ಯವಾದಲ್ಲಿ, ಸ್ವಲ್ಪ ಅಕ್ಕಿ ಹಿಟ್ಟು ಬೆರೆಸಿ ನಂತರ ಮತ್ತೆ ಪ್ರಯತ್ನಿಸಿ. ಕಾವಲಿ ಮೇಲೆಯೇ ದೋಸೆಯನ್ನು ಮಡಿಸಿ. ಚಟ್ನಿಯೊಂದಿಗೆ ಸವಿದು ಆನಂದಿಸಿ.