Ragi dose recipe in Kannada | ರಾಗಿ ದೋಸೆ ಮಾಡುವ ವಿಧಾನ
ರಾಗಿ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 3/4 ಕಪ್ ರಾಗಿ
- 1/4 ಕಪ್ ದೋಸೆ ಅಕ್ಕಿ
- 1/4 ಕಪ್ ಉದ್ದಿನಬೇಳೆ
- 1 ಟೀಸ್ಪೂನ್ ಮೆಂತ್ಯ
- 1/4 - 1/2 ಕಪ್ ತೆಳು ಅವಲಕ್ಕಿ
- ತುಪ್ಪ ಅಥವಾ ಎಣ್ಣೆ ದೋಸೆ ಮಾಡಲು
- ಉಪ್ಪು ರುಚಿಗೆ ತಕ್ಕಷ್ಟು.
ರಾಗಿ ದೋಸೆ ಮಾಡುವ ವಿಧಾನ:
- ರಾಗಿ, ಅಕ್ಕಿ, ಉದ್ದಿನಬೇಳೆ ಮತ್ತು ಮೆಂತೆಯನ್ನು ತೊಳೆದು 4-5 ಗಂಟೆಗಳ ಕಾಲ ನೆನೆಯಲು ಬಿಡಿ. ರಾಗಿ ಹಿಟ್ಟು ಬಳಸುತ್ತೀರಾದಲ್ಲಿ ಅಕ್ಕಿ ಮತ್ತು ಉದ್ದಿನಬೇಳೆ ನೆನೆಸಿ, ಅರೆದ ಮೇಲೆ ಸೇರಿಸಬಹುದು.
- ನೆನೆಸಿದ ನಂತರ ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ.
- ಅವಲಕ್ಕಿ ತೊಳೆದು ಸೇರಿಸಿ. ಗಟ್ಟಿ ಅವಲಕ್ಕಿ ಆದಲ್ಲಿ, ೧೦ ನಿಮಿಷ ನೆನೆಸಿ ಸೇರಿಸಿ.
- ಎಲ್ಲವನ್ನು ನುಣ್ಣನೆ ಅರೆದು ಒಂದು ಪಾತ್ರೆಗೆ ಹಾಕಿ.
- ಹಿಟ್ಟನ್ನು ಚೆನ್ನಾಗಿ ಕಲಸಿ, ಮುಚ್ಚಳವನ್ನು ಮುಚ್ಚಿ, 8-10 ಘಂಟೆ ಕಾಲ ಹಿಟ್ಟು ಹುದುಗಲು ಬಿಡಿ.
- ಹುದುಗಿದ ನಂತರ ಹಿಟ್ಟಿಗೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ಹಿಟ್ಟು ಉದ್ದಿನ ದೋಸೆ ಹಿಟ್ಟಿನಂತಿರಲಿ.
- ದೋಸೆ ಹೆಂಚನ್ನು ಬಿಸಿಮಾಡಿ. ಎಣ್ಣೆ ಹಚ್ಚಿ, ಹಿಟ್ಟು ಸುರಿದು, ದೋಸೆ ಮಾಡಿ.
- ಮುಚ್ಚಳವನ್ನು ಮುಚ್ಚಿ ಬೇಯಿಸಿ.
- ಮುಚ್ಚಳವನ್ನು ತೆಗೆದು, ಎಣ್ಣೆ ಅಥವಾ ತುಪ್ಪ ಹಾಕಿ. ದೋಸೆ ಒಂದು ಬದಿ ಕಾಯಿಸಿದರೆ ಸಾಕು. ತೆಂಗಿನಕಾಯಿ ಚಟ್ನಿ ಅಥವಾ ಸಾಂಬಾರ್ ನೊಂದಿಗೆ ಬಡಿಸಿರಿ.