Kadlebele chutney recipe in Kannada |ಕಡ್ಲೆಬೇಳೆ ಚಟ್ನಿ ಮಾಡುವ ವಿಧಾನ
ಕಡ್ಲೆಬೇಳೆ ಚಟ್ನಿ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1/4 ಕಪ್ ಕಡ್ಲೆ ಬೇಳೆ
- 2 - 3 ಒಣ ಮೆಣಸಿನಕಾಯಿ
- 2 ಟೇಬಲ್ ಚಮಚ ಉದ್ದಿನ ಬೇಳೆ
- 1/2 ಟೀಸ್ಪೂನ್ ಕೊತ್ತಂಬರಿ ಬೀಜ
- 1/2 ಕಪ್ ತೆಂಗಿನ ತುರಿ
- ಸಣ್ಣ ಗೋಲಿ ಗಾತ್ರದ ಹುಣಿಸೇಹಣ್ಣು
- 1 ಈರುಳ್ಳಿ
- 1 ಟೀಸ್ಪೂನ್ ಅಡುಗೆ ಎಣ್ಣೆ
- ಉಪ್ಪು ರುಚಿಗೆ ತಕ್ಕಷ್ಟು.
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1/2 ಟೀಸ್ಪೂನ್ ಸಾಸಿವೆ
- 4 ಕರಿಬೇವಿನ ಎಲೆ
- ಚಿಟಿಕೆ ಇಂಗು
- 2 ಟೇಬಲ್ ಸ್ಪೂನ್ ಅಡುಗೆ ಎಣ್ಣೆ
ಕಡ್ಲೆಬೇಳೆ ಚಟ್ನಿ ಮಾಡುವ ವಿಧಾನ:
- ಒಂದು ಬಾಣಲೆಗೆ ಎಣ್ಣೆ, ಒಣ ಮೆಣಸಿನಕಾಯಿ, ಕೊತ್ತಂಬರಿ ಬೀಜ ಕಡ್ಲೆಬೇಳೆ ಮತ್ತು ಉದ್ದಿನಬೇಳೆ ಹಾಕಿ.
- ಬೇಳೆ ಹೊಂಬಣ್ಣ ಹುರಿಯಿರಿ.
- ನಂತರ ತೆಂಗಿನ ತುರಿ, ಹುರಿದ ಪದಾರ್ಥಗಳು, ಉಪ್ಪು ಮತ್ತು ಹುಣಿಸೇಹಣ್ಣು ಹಾಕಿ. ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ.
- ಒಂದು ಪಾತ್ರೆಗೆ ತೆಗೆದು, ಸಣ್ಣದಾಗಿ ಕತ್ತರಿಸಿದ ಈರುಳ್ಳಿ ಸೇರಿಸಿ ಕಲಸಿ.
- ಇಂಗು, ಕರಿಬೇವು ಮತ್ತು ಸಾಸಿವೆಯ ಒಗ್ಗರಣೆ ಮಾಡಿ. ಅನ್ನ, ಇಡ್ಲಿ ಅಥವಾ ದೋಸೆಯೊಂದಿಗೆ ಬಡಿಸಿ. ಒಗ್ಗರಣೆಗೆ ಬೇಕಾದಲ್ಲಿ ಜಜ್ಜಿದ ಬೆಳ್ಳುಳ್ಳಿ ಹಾಕಬಹುದು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ