Instant set dose recipe in Kannada | ದಿಢೀರ್ ಸೆಟ್ ದೋಸೆ ಮಾಡುವ ವಿಧಾನ
ದಿಢೀರ್ ಸೆಟ್ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ರವೆ
- 1/2 ಕಪ್ ಗಟ್ಟಿ ಅವಲಕ್ಕಿ ಅಥವಾ 3/4 ತೆಳು ಅವಲಕ್ಕಿ
- 1/2 ಕಪ್ ಮೊಸರು
- 1/2 ಚಮಚ ಅಡುಗೆ ಸೋಡಾ
- ಎಣ್ಣೆ ಅಥವಾ ತುಪ್ಪ (ದೋಸೆ ಮಾಡಲು)
- ಸುಮಾರು 1.25 ಕಪ್ ನೀರು
- ಉಪ್ಪು ರುಚಿಗೆ ತಕ್ಕಷ್ಟು
ದಿಢೀರ್ ಸೆಟ್ ದೋಸೆ ಮಾಡುವ ವಿಧಾನ:
- ಒಂದು ಪಾತ್ರೆಯಲ್ಲಿ ಅವಲಕ್ಕಿ ತೆಗೆದುಕೊಂಡು ತೊಳೆಯಿರಿ.
- ಅದಕ್ಕೆ ರವೇ ಮತ್ತು ನೀರು ಸೇರಿಸಿ.
- ಮೊಸರನ್ನೂ ಸೇರಿಸಿ.
- ಹತ್ತು ನಿಮಿಷ ನೆನೆಯಲು ಬಿಡಿ.
- ಆಮೇಲೆ ಮಿಕ್ಸಿಯಲ್ಲಿ ನುಣ್ಣನೆ ಅರೆಯಿರಿ.
- ಪಾತ್ರೆಗೆ ಬಗ್ಗಿಸಿ, ಉಪ್ಪು ಮತ್ತು ಅಡುಗೆ ಸೋಡಾ ಸೇರಿಸಿ.
- ಚೆನ್ನಾಗಿ ಕಲಸಿ. ಅಗತ್ಯವಿದ್ದಲ್ಲಿ ನೀರು ಸೇರಿಸಿ. ಹಿಟ್ಟು ಉದ್ದಿನ ದೋಸೆ ಹಿಟ್ಟಿನಂತಿರಲಿ.
- ಕಬ್ಬಿಣದ ದೋಸೆ ಹೆಂಚು ಅಥವಾ ನಾನ್ ಸ್ಟಿಕ್ ಪ್ಯಾನ್ ಬಿಸಿ ಮಾಡಿ.
- ಬಿಸಿ ದೋಸೆ ಕಾವಲಿ ಮೇಲೆ ದೋಸೆ ಹಿಟ್ಟನ್ನು ಸೌಟಿನಿಂದ ಸುರಿಯಿರಿ. ಸೆಟ್ ದೋಸೆಯಂತೆ ಸ್ವಲ್ಪ ಅಗಲ ಮಾಡಿ.
- ಮುಚ್ಚಳ ಮುಚ್ಚಿ ಬೇಯಿಸಿ.
- ಹತ್ತು ಸೆಕೆಂಡುಗಳ ನಂತರ ಮೇಲಿನಿಂದ ಎಣ್ಣೆ ಅಥವಾ ತುಪ್ಪ ಹಾಕಿ.
- ನಂತರ ದೋಸೆಯನ್ನು ತಿರುಗಿಸಿ ಹಾಕಿ. ಇನ್ನೊಂದು ಬದಿಯೂ ಕಾಯಿಸಿ.
- ದೋಸೆಯನ್ನು ತೆಗೆಯಿರಿ. ತೆಂಗಿನ ಕಾಯಿ ಚಟ್ನಿ ಅಥವಾ ಸಾಂಬಾರ್ ಅಥವಾ ಸಾಗುವಿನೊಂದಿಗೆ ಬಡಿಸಿ.