ಬುಧವಾರ, ಏಪ್ರಿಲ್ 20, 2022

Jeerige ganji recipe in Kannada | ಜೀರಿಗೆ ಗಂಜಿ ಮಾಡುವ ವಿಧಾನ

 

Jeerige ganji recipe in Kannada

Jeerige ganji recipe in Kannada | ಜೀರಿಗೆ ಗಂಜಿ ಮಾಡುವ ವಿಧಾನ

ಜೀರಿಗೆ ಗಂಜಿ  ವಿಡಿಯೋ

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 1/2 ಕಪ್ ಅಕ್ಕಿ
  2. 1/2 ಕಪ್ ಹಸಿ ತೆಂಗಿನತುರಿ
  3. 1 ಟೀಸ್ಪೂನ್ ಜೀರಿಗೆ
  4. 1/4 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
  5. 1 ಟೀಸ್ಪೂನ್ ತುಪ್ಪ (ಬಡಿಸಲು)
  6. ಉಪ್ಪಿನಕಾಯಿ (ಬಡಿಸಲು)

ಸೌತೆಕಾಯಿ ಪಚಡಿಗೆ ಬೇಕಾಗುವ ಪದಾರ್ಥಗಳು:

  1. 1/2 ಸೌತೆಕಾಯಿ
  2. 1/2 ಟೀಸ್ಪೂನ್ ಶುಂಠಿ
  3. 1/2 ಟೀಸ್ಪೂನ್ ಹಸಿರು ಮೆಣಸಿನಕಾಯಿ
  4. 1 ಟೇಬಲ್ ಸ್ಪೂನ್ ಕತ್ತರಿಸಿದ ಕೊತ್ತಂಬರಿ ಸೊಪ್ಪು 
  5. 3/4 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಂತೆ)

ಜೀರಿಗೆ ಗಂಜಿ ಮಾಡುವ ವಿಧಾನ:

  1. ಅಕ್ಕಿಯನ್ನು ಚೆನ್ನಾಗಿ ತೊಳೆದು, ನಾಲ್ಕು ಪಟ್ಟು ನೀರು ಸೇರಿಸಿ ಮೆತ್ತಗೆ ಬೇಯಿಸಿಕೊಳ್ಳಿ. 
  2. ತೆಂಗಿನತುರಿ ಮತ್ತು ಜೀರಿಗೆಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣಗೆ ಅರೆಯಿರಿ. 
  3. ಬೇಯಿಸಿದ ಅನ್ನಕ್ಕೆ ಸೇರಿಸಿ, ಅಗತ್ಯವಿದ್ದಷ್ಟು ನೀರು ಸೇರಿಸಿ ಕುದಿಯಲು ಇಡಿ. 
  4. 1/4 ಟೀಸ್ಪೂನ್ ಅಥವಾ ನಿಮ್ಮ ರುಚಿ ಪ್ರಕಾರ ಉಪ್ಪು ಸೇರಿಸಿ. ಬೇಕಾದಲ್ಲಿ ಸ್ವಲ್ಪ ಬೆಲ್ಲ ಸಹ ಸೇರಿಸಬಹುದು. 
  5. ಒಂದೆರಡು ನಿಮಿಷ ಕುದಿಸಿ ಸ್ಟವ್ ಆಫ್ ಮಾಡಿ. 
  6. ಪಚಡಿ ಮಾಡಲು ಸೌತೆಕಾಯಿಯನ್ನು ಸಣ್ಣಗೆ ಕೊಚ್ಚಿಕೊಳ್ಳಿ. 
  7. ಹೆಚ್ಚಿದ ಶುಂಠಿ, ಹಸಿಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು ಮತ್ತು ಉಪ್ಪು ಸೇರಿಸಿ ಕಲಸಿ. 
  8. ಬಿಸಿ ಗಂಜಿಯನ್ನು ತುಪ್ಪ, ಪಚಡಿ ಮತ್ತು ಉಪ್ಪಿನಕಾಯಿಯೊಂದಿಗೆ ಬಡಿಸಿ. 

ಸೋಮವಾರ, ಏಪ್ರಿಲ್ 18, 2022

Quick onion sambar recipe in Kannada | 10 ನಿಮಿಷದಲ್ಲಿ ಸಾಂಬಾರ್ ಮಾಡುವ ವಿಧಾನ

 

Quick onion sambar recipe in Kannada

Quick onion sambar recipe in Kannada | 10 ನಿಮಿಷದಲ್ಲಿ ಸಾಂಬಾರ್ ಮಾಡುವ ವಿಧಾನ


10 ನಿಮಿಷದಲ್ಲಿ ಸಾಂಬಾರ್  ವಿಡಿಯೋ

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 2 ಟೊಮೇಟೊ
  2. 2 ಟೇಬಲ್ ಚಮಚ ಹುರಿಗಡಲೆ
  3. 1 ಈರುಳ್ಳಿ
  4. 1 ಟೀಸ್ಪೂನ್ ಅಚ್ಚಖಾರದ ಪುಡಿ
  5. 1 ಟೀಸ್ಪೂನ್ ಧನಿಯಾ ಅಥವಾ ಕೊತ್ತಂಬರಿ ಪುಡಿ
  6. 1/4 ಟೀಸ್ಪೂನ್ ಗರಂ ಮಸಾಲಾ
  7. ದೊಡ್ಡ ಚಿಟಿಕೆ ಅರಿಶಿನ ಪುಡಿ
  8. ಉಪ್ಪು ನಿಮ್ಮ ರುಚಿ ಪ್ರಕಾರ
  9. 1 ಟೀಸ್ಪೂನ್ ಬೆಲ್ಲ (ಅಥವಾ ನಿಮ್ಮ ರುಚಿ ಪ್ರಕಾರ)
  10. ಗೋಲಿ ಗಾತ್ರದ ಹುಣಿಸೇಹಣ್ಣು (ಅಥವಾ ನಿಮ್ಮ ರುಚಿ ಪ್ರಕಾರ)
  11. ಸ್ವಲ್ಪ ಕೊತ್ತಂಬರಿ ಸೊಪ್ಪು

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಕೆಂಪು ಮೆಣಸಿನಕಾಯಿ
  2. 1/2 ಟೀಸ್ಪೂನ್ ಸಾಸಿವೆ
  3. 1/2 ಟೀಸ್ಪೂನ್ ಜೀರಿಗೆ
  4. ಒಂದು ಚಿಟಿಕೆ ಇಂಗು
  5. 5 - 6 ಕರಿಬೇವು
  6. 2 ಟೇಬಲ್ ಚಮಚ ಅಡುಗೆ ಎಣ್ಣೆ

10 ನಿಮಿಷದಲ್ಲಿ ಸಾಂಬಾರ್ ಮಾಡುವ ವಿಧಾನ:

  1. ಮಿಕ್ಸಿಯಲ್ಲಿ ಟೊಮೇಟೊ ಮತ್ತು ಹುರಿಗಡಲೆಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣಗೆ ಅರೆಯಿರಿ. 
  2. ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಮೆಣಸಿನಕಾಯಿ, ಸಾಸಿವೆ, ಜೀರಿಗೆ, ಇಂಗು ಮತ್ತು ಕರಿಬೇವು ಹಾಕಿ ಒಗ್ಗರಣೆ ಮಾಡಿ. 
  3. ಕತ್ತರಿಸಿದ ಈರುಳ್ಳಿ ಹಾಕಿ ಸಣ್ಣ ಉರಿಯಲ್ಲಿ ಹುರಿಯಿರಿ. 
  4. ಅಚ್ಚಖಾರದ ಪುಡಿ, ಧನಿಯಾ ಪುಡಿ, ಗರಂ ಮಸಾಲಾ ಮತ್ತು ಅರಿಶಿನ ಪುಡಿ ಸೇರಿಸಿ ಹುರಿಯಿರಿ. 
  5. ಅರೆದ ಟೊಮೇಟೊ ಮತ್ತು ಹುರಿಗಡಲೆ ಪೇಸ್ಟ್ ಸೇರಿಸಿ, ಅಗತ್ಯವಿದ್ದಷ್ಟು ನೀರು ಸೇರಿಸಿ ಕುದಿಯಲು ಇಡಿ. 
  6. ನಿಮ್ಮ ರುಚಿ ಪ್ರಕಾರ ಉಪ್ಪು, ಬೆಲ್ಲ ಮತ್ತು ಹುಣಿಸೆರಸವನ್ನು ಸೇರಿಸಿ. 
  7. ಐದು ನಿಮಿಷ ಕುದಿಸಿ ಸ್ಟವ್ ಆಫ್ ಮಾಡಿ. 
  8. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ. ಬಿಸಿ ಅನ್ನದೊಂದಿಗೆ ಬಡಿಸಿ. ದೋಸೆ ಅಥವಾ ಇಡ್ಲಿಯೊಂದಿಗೂ ಬಡಿಸಬಹುದು. 

ಶುಕ್ರವಾರ, ಏಪ್ರಿಲ್ 8, 2022

Southekayi sasive recipe in kannada | ಸೌತೆಕಾಯಿ ಸಾಸಿವೆ ಮಾಡುವ ವಿಧಾನ

 

Southekayi sasive recipe in kannada

Southekayi sasive recipe in kannada | ಸೌತೆಕಾಯಿ ಸಾಸಿವೆ (ಹಸಿಗೊಜ್ಜು) ಮಾಡುವ ವಿಧಾನ

ಸೌತೆಕಾಯಿ ಸಾಸಿವೆ ವಿಡಿಯೋ

ಬೇಕಾಗುವ ಪದಾರ್ಥಗಳು - ವಿಧಾನ ೧: ( ಅಳತೆ ಕಪ್ = 240 ಎಂಎಲ್ )

  1. 1 ಮಧ್ಯಮ ಗಾತ್ರದ ಸೌತೆಕಾಯಿ
  2. 1 - 2 ಒಣಮೆಣಸಿನಕಾಯಿ
  3. 1/2 ಕಪ್ ತೆಂಗಿನ ತುರಿ 
  4. 1/2 ಟೀಸ್ಪೂನ್ ಸಾಸಿವೆ
  5. ಉಪ್ಪು ನಿಮ್ಮ ರುಚಿಗೆ ತಕ್ಕಷ್ಟು 

ಬೇಕಾಗುವ ಪದಾರ್ಥಗಳು - ವಿಧಾನ ೨: ( ಅಳತೆ ಕಪ್ = 240 ಎಂಎಲ್ )

  1. 1 ಮಧ್ಯಮ ಗಾತ್ರದ ಸೌತೆಕಾಯಿ 
  2. 1/4 ಕಪ್ ಮೊಸರು
  3. 1 - 2 ಹಸಿ ಮೆಣಸಿನಕಾಯಿ
  4. 1/2 ಕಪ್ ತೆಂಗಿನ ತುರಿ 
  5. 1/4 ಟೀಸ್ಪೂನ್ ಸಾಸಿವೆ
  6. ಉಪ್ಪು ನಿಮ್ಮ ರುಚಿಗೆ ತಕ್ಕಷ್ಟು 

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1/4 ಚಮಚ ಸಾಸಿವೆ
  2. 1/2 ಕೆಂಪು ಮೆಣಸಿನಕಾಯಿ
  3. 4 -5 ಕರಿಬೇವು
  4. 2 ಟೀಸ್ಪೂನ್ ಅಡುಗೆ ಎಣ್ಣೆ

ಸೌತೆಕಾಯಿ ಸಾಸಿವೆ ಮಾಡುವ ವಿಧಾನ - ೧:

  1. ಸೌತೆಕಾಯಿಯನ್ನು ಸಣ್ಣದಾಗಿ ಕೊಚ್ಚಿ ಅಥವಾ ತುರಿದುಕೊಳ್ಳಿ. 
  2. ಮಿಕ್ಸಿ ಜಾರಿನಲ್ಲಿ ತೆಂಗಿನ ತುರಿ, ಒಣಮೆಣಸು ಮತ್ತು ಸಾಸಿವೆಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣನೆ ಅರೆಯಿರಿ. 
  3. ತುರಿದ ಅಥವಾ ಕೊಚ್ಚಿದ ಸೌತೆಕಾಯಿ ಹಾಕಿ ಒಂದೆರಡು ಸುತ್ತು ಅರೆಯಿರಿ.
  4. ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ. 
  5. ಎಣ್ಣೆ, ಮೆಣಸಿನಕಾಯಿ, ಕರಿಬೇವು ಮತ್ತು ಸಾಸಿವೆಯ ಒಗ್ಗರಣೆ ಮಾಡಿ ಸೇರಿಸಿ. ಬಿಸಿಯಾದ ಅನ್ನ ಅಥವಾ ಚಪಾತಿಯೊಂದಿಗೆ ಬಡಿಸಿ.

ಸೌತೆಕಾಯಿ ಸಾಸಿವೆ ಮಾಡುವ ವಿಧಾನ - ೨:

  1. ಸೌತೆಕಾಯಿಯನ್ನು ಸಣ್ಣದಾಗಿ ಕೊಚ್ಚಿ ಅಥವಾ ತುರಿದುಕೊಳ್ಳಿ. 
  2. ಮಿಕ್ಸಿ ಜಾರಿನಲ್ಲಿ ತೆಂಗಿನ ತುರಿ, ಹಸಿಮೆಣಸಿನಕಾಯಿ ಮತ್ತು ಸಾಸಿವೆಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣನೆ ಅರೆಯಿರಿ. 
  3. ತುರಿದ ಅಥವಾ ಕೊಚ್ಚಿದ ಸೌತೆಕಾಯಿ, ಮೊಸರು ಮತ್ತು ಉಪ್ಪು ಸೇರಿಸಿ. ಒಂದೆರಡು ಸುತ್ತು ಅರೆಯಿರಿ.
  4. ಎಣ್ಣೆ, ಮೆಣಸಿನಕಾಯಿ, ಕರಿಬೇವು ಮತ್ತು ಸಾಸಿವೆಯ ಒಗ್ಗರಣೆ ಮಾಡಿ ಸೇರಿಸಿ. ಬಿಸಿಯಾದ ಅನ್ನ ಅಥವಾ ಚಪಾತಿಯೊಂದಿಗೆ ಬಡಿಸಿ.
Related Posts Plugin for WordPress, Blogger...