Southekai dose recipe in Kannada | ಸೌತೆಕಾಯಿ ದೋಸೆ ಮಾಡುವ ವಿಧಾನ
ಸೌತೆಕಾಯಿ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 1 ಕಪ್ ರವೆ
- 2 ಮಧ್ಯಮ ಗಾತ್ರದ ಸೌತೆಕಾಯಿ
- 1/4 ಕಪ್ ತೆಂಗಿನತುರಿ
- 2 ಒಣಮೆಣಸಿನಕಾಯಿ
- 1 ಟೀಸ್ಪೂನ್ ಕೊತ್ತಂಬರಿ ಬೀಜ
- 1/2 ಟೀಸ್ಪೂನ್ ಜೀರಿಗೆ
- ತುಪ್ಪ ಅಥವಾ ಎಣ್ಣೆ ದೋಸೆ ಮಾಡಲು
- ಉಪ್ಪು ರುಚಿಗೆ ತಕ್ಕಷ್ಟು.
ಸೌತೆಕಾಯಿ ದೋಸೆ ಮಾಡುವ ವಿಧಾನ:
- ರವೆಯನ್ನು ಒಂದು ಕಪ್ ನೀರಿನಲ್ಲಿ ಹತ್ತು ನಿಮಿಷ ನೆನೆಯಲು ಬಿಡಿ.
- ಸೌತೆಕಾಯಿಯನ್ನು ಕತ್ತರಿಸಿಟ್ಟುಕೊಳ್ಳಿ. ಸಿಪ್ಪೆ ತೆಗೆಯಬೇಕಾಗಿಲ್ಲ.
- ನೆನೆಸಿದ ರವೆಯನ್ನು ಮಿಕ್ಸಿ ಜಾರಿನಲ್ಲಿ ತೆಗೆದುಕೊಳ್ಳಿ.
- ಕತ್ತರಿಸಿದ ಸೌತೆಕಾಯಿ ಸೇರಿಸಿ.
- ತೆಂಗಿನತುರಿ ಮತ್ತು ಒಣಮೆಣಸಿನಕಾಯಿ ಸೇರಿಸಿ.
- ಕೊತ್ತಂಬರಿ ಮತ್ತು ಜೀರಿಗೆ ಸೇರಿಸಿ.
- ನುಣ್ಣನೆ ಅರೆದು ಒಂದು ಪಾತ್ರೆಗೆ ಹಾಕಿ. ನೀರು ಸೇರಿಸುವ ಅಗತ್ಯ ಇಲ್ಲ.
- ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
- ಹಿಟ್ಟು ಉದ್ದಿನ ದೋಸೆ ಹಿಟ್ಟಿನಂತಿರಲಿ.
- ದೋಸೆ ಹೆಂಚನ್ನು ಬಿಸಿಮಾಡಿ. ಈಗ ವೃತ್ತಾಕಾರದ ರೀತಿಯಲ್ಲಿ ದೋಸೆ ಹಿಟ್ಟನ್ನು ತೆಳುವಾಗಿ ಹರಡಿ,
- ಮುಚ್ಚಳವನ್ನು ಮುಚ್ಚಿ ಬೇಯಿಸಿ.
- 5 ಸೆಕೆಂಡುಗಳ ನಂತರ ಮುಚ್ಚಳವನ್ನು ತೆಗೆದು, ಎಣ್ಣೆ ಅಥವಾ ತುಪ್ಪ ಹಾಕಿ.
- ಸಣ್ಣ ಉರಿಯಲ್ಲಿ ಗರಿಗರಿ ಆಗುವವರೆಗೆ ಕಾಯಿಸಿ. ತೆಂಗಿನಕಾಯಿ ಚಟ್ನಿಯೊಂದಿಗೆ ಬಡಿಸಿರಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ