Dideer mandakki paddu recipe in Kannada | ದಿಢೀರ್ ಮಂಡಕ್ಕಿ ಪಡ್ಡು ಮಾಡುವ ವಿಧಾನ
ಮಂಡಕ್ಕಿ ಪಡ್ಡು ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 3 ಕಪ್ ಮಂಡಕ್ಕಿ
- 1/2 ಕಪ್ ರವೆ
- 1/4 ಕಪ್ ಅಕ್ಕಿಹಿಟ್ಟು
- 1/2 ಕಪ್ ಮೊಸರು
- ತುಪ್ಪ ಅಥವಾ ಎಣ್ಣೆ ದೋಸೆ ಮಾಡಲು
- 1 ಈರುಳ್ಳಿ
- 4 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- 2 ಟೇಬಲ್ ಚಮಚ ತೆಂಗಿನತುರಿ
- 1 ಹಸಿಮೆಣಸಿನಕಾಯಿ
- 1/2 ಚಮಚ ಶುಂಠಿ
- ಉಪ್ಪು ರುಚಿಗೆ ತಕ್ಕಷ್ಟು
ದಿಢೀರ್ ಮಂಡಕ್ಕಿ ಪಡ್ಡು ಮಾಡುವ ವಿಧಾನ:
- ಮಂಡಕ್ಕಿಯನ್ನು ಮಿಕ್ಸಿ ಜಾರಿನಲ್ಲಿ ತೆಗೆದುಕೊಳ್ಳಿ.
- ಅದಕ್ಕೆ ರವೆ ಮತ್ತು ಅಕ್ಕಿಹಿಟ್ಟು ಸೇರಿಸಿ.
- ಸ್ವಲ್ಪ ತರಿತರಿಯಾಗಿ ಪುಡಿಮಾಡಿಕೊಳ್ಳಿ.
- ಅದಕ್ಕೆ ಅಗತ್ಯವಿದ್ದಷ್ಟು ನೀರು ಸೇರಿಸಿ.
- ಮೊಸರನ್ನು ಸೇರಿಸಿ.
- ರುಬ್ಬಿ ಹಿಟ್ಟನ್ನು ತಯಾರಿಸಿಕೊಳ್ಳಿ. ಹಿಟ್ಟು ದಪ್ಪ ಉದ್ದಿನ ದೋಸೆ ಹಿಟ್ಟಿನಂತಿರಲಿ.
- ಅರೆದ ಹಿಟ್ಟನ್ನು ಒಂದು ಪಾತ್ರೆಗೆ ತೆಗೆದುಕೊಳ್ಳಿ.
- ರುಚಿಗೆ ತಕ್ಕಂತೆ ಉಪ್ಪು ಸೇರಿಸಿ.
- ನಂತರ ಕತ್ತರಿಸಿದ ಈರುಳ್ಳಿ, ಕರಿಬೇವಿನ ಸೊಪ್ಪು, ಕೊತ್ತಂಬರಿ ಸೊಪ್ಪು, ಶುಂಠಿ ಮತ್ತು ಹಸಿಮೆಣಸಿನಕಾಯಿ ಸೇರಿಸಿ. ಚೆನ್ನಾಗಿ ಕಲಸಿ.
- ಪಡ್ಡು ಕಾವಲಿಯನ್ನು ಬಿಸಿಮಾಡಿ ಕೊಳ್ಳಿ. ಗುಳಿಗಳಿಗೆ ಸ್ವಲ್ಪ ಎಣ್ಣೆ ಹಾಕಿ.
- ಎಲ್ಲ ಗುಳಿಗಳಿಗೆ ಹಿಟ್ಟನ್ನು ಹಾಕಿ, ಮುಚ್ಚಳ ಮುಚ್ಚಿ.
- 5 - 10 ಸೆಕೆಂಡ್ ಗಳ ನಂತರ ಮುಚ್ಚಳ ತೆರೆದು, ಮೇಲಿನಿಂದ ಎಣ್ಣೆ ಹಾಕಿ.
- ತಿರುಗಿಸಿ ಹಾಕಿ, ಇನ್ನೊಂದು ಬದಿಯೂ ಬೇಯಿಸಿ. ತೆಂಗಿನಕಾಯಿ ಚಟ್ನಿ ಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ