Eerulli bhaji recipe in Kannada | ಈರುಳ್ಳಿ ಭಾಜಿ ಮಾಡುವ ವಿಧಾನ
ಈರುಳ್ಳಿ ಭಾಜಿ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ 240 ಎಂ ಎಲ್ ):
- 2 ದೊಡ್ಡ ಗಾತ್ರದ ಈರುಳ್ಳಿ
- 1 ಟೊಮೇಟೊ
- 1/2 ಚಮಚ ಸಾಸಿವೆ
- 1/2 ಚಮಚ ಉದ್ದಿನಬೇಳೆ
- ದೊಡ್ಡ ಚಿಟಿಕೆ ಅರಿಶಿನ ಪುಡಿ
- ದೊಡ್ಡ ಚಿಟಿಕೆ ಇಂಗು
- 5 - 6 ಕರಿಬೇವಿನ ಎಲೆ
- ನಿಮ್ಮ ರುಚಿ ಪ್ರಕಾರ ಉಪ್ಪು
- 2 ಟೇಬಲ್ ಚಮಚ ಅಡುಗೆ ಎಣ್ಣೆ
ಮಸಾಲೆ ಪುಡಿಗೆ ಬೇಕಾಗುವ ಪದಾರ್ಥಗಳು (ಅಳತೆ ಕಪ್ 240 ಎಂ ಎಲ್ ):
- 2 ಟೇಬಲ್ ಚಮಚ ಹುರಿಗಡಲೆ
- 2 - 3 ಒಣಮೆಣಸಿನಕಾಯಿ
- 1 ಟೀಸ್ಪೂನ್ ಧನಿಯಾ ಅಥವಾ ಕೊತ್ತಂಬರಿ ಬೀಜ
- 1/2 ಟೀಸ್ಪೂನ್ ಜೀರಿಗೆ
- 1 ಟೀಸ್ಪೂನ್ ಬಡೆಸೋಂಪು
ಈರುಳ್ಳಿ ಭಾಜಿ ಮಾಡುವ ವಿಧಾನ:
- ಮೊದಲಿಗೆ ಈರುಳ್ಳಿ ಮತ್ತು ಟೊಮೇಟೊ ಕತ್ತರಿಸಿಟ್ಟು ಕೊಳ್ಳಿ.
- ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ.
- ಸಾಸಿವೆ ಮತ್ತು ಉದ್ದಿನಬೇಳೆ ಒಗ್ಗರಣೆ ಮಾಡಿ.
- ಅದಕ್ಕೆ ಕರಿಬೇವು ಮತ್ತು ಕತ್ತರಿಸಿದ ಈರುಳ್ಳಿ ಸೇರಿಸಿ ಹುರಿಯಿರಿ.
- ಕತ್ತರಿಸಿಟ್ಟ ಟೊಮೇಟೊ ಹಾಕಿ.
- ಅರಶಿನ ಪುಡಿ ಮತ್ತು ಇಂಗು ಹಾಕಿ ಒಂದು ನಿಮಿಷ ಹುರಿಯಿರಿ.
- ಸ್ವಲ್ಪ ನೀರು ಸೇರಿಸಿ, ಮುಚ್ಚಳ ಮುಚ್ಚಿ ಐದು ನಿಮಿಷ ಬೇಯಲು ಬಿಡಿ.
- ಆ ಸಮಯದಲ್ಲಿ ಹುರಿಗಡಲೆ, ಒಣಮೆಣಸಿನಕಾಯಿ, ಕೊತ್ತಂಬರಿ, ಜೀರಿಗೆ ಮತ್ತು ಸೋಂಪನ್ನು ಮಿಕ್ಸಿಯಲ್ಲಿ ನುಣ್ಣಗೆ ಪುಡಿಮಾಡಿಕೊಳ್ಳಿ.
- ಅದನ್ನು ಬೇಯುತ್ತಿರುವ ಈರುಳ್ಳಿ ಮತ್ತು ಟೊಮ್ಯಾಟೊಗೆ ಸೇರಿಸಿ ಒಮ್ಮೆ ಮಗುಚಿ.
- ಅಗತ್ಯವಿದ್ದಷ್ಟು ನೀರು ಮತ್ತು ರುಚಿಗೆ ತಕ್ಕಂತೆ ಉಪ್ಪು ಸೇರಿಸಿ, ಚೆನ್ನಾಗಿ ಮಗುಚಿ ಕುದಿಸಿ.
- ಮುಚ್ಚಳ ಮುಚ್ಚಿ ಒಂದೆರಡು ನಿಮಿಷ ಬೇಯಿಸಿ.
- ನಂತರ ಕೊತ್ತಂಬರಿ ಸೊಪ್ಪು ಉದುರಿಸಿ, ಸ್ಟವ್ ಆಫ್ ಮಾಡಿ.
- ಚಪಾತಿ ಅಥವಾ ದೋಸೆ ಅಥವಾ ರೊಟ್ಟಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ