Banale dose recipe in Kannada | ಬಾಣಲೆ ದೋಸೆ ಮಾಡುವ ವಿಧಾನ
ಬಾಣಲೆ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 1 ಕಪ್ ದೋಸೆ ಅಕ್ಕಿ
- 1 - 2 ಟೇಬಲ್ ಸ್ಪೂನ್ ಉದ್ದಿನಬೇಳೆ
- 1 ಟೀಸ್ಪೂನ್ ಮೆಂತ್ಯ
- 1/2 ಕಪ್ ತೆಂಗಿನತುರಿ
- 1/2 ಕಪ್ ಗಟ್ಟಿ ಅವಲಕ್ಕಿ ಅಥವಾ 1 ಕಪ್ ತೆಳು ಅವಲಕ್ಕಿ
- ಎಣ್ಣೆ ದೋಸೆ ಮಾಡಲು
- 1/2 ಟೀಸ್ಪೂನ ಸಕ್ಕರೆ
- ಉಪ್ಪು ರುಚಿಗೆ ತಕ್ಕಷ್ಟು.
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 1 ಟೀಸ್ಪೂನ್ ಸಾಸಿವೆ
- 1 ಟೀಸ್ಪೂನ್ ಕಡ್ಲೆಬೇಳೆ
- 1 ಟೀಸ್ಪೂನ್ ಉದ್ದಿನಬೇಳೆ
- 1 ಟೀಸ್ಪೂನ್ ಹೆಚ್ಚಿದ ಶುಂಠಿ
- 1 - 2 ಹಸಿಮೆಣಸಿನಕಾಯಿ
- 2 ಟೇಬಲ್ ಸ್ಪೂನ್ ಹೆಚ್ಚಿದ ಕರಿಬೇವು
- ಸ್ವಲ್ಪ ಕೊತ್ತಂಬರಿ ಸೊಪ್ಪು
- 2 - 3 ಟೇಬಲ್ ಸ್ಪೂನ್ ಎಣ್ಣೆ
ಬಾಣಲೆ ದೋಸೆ ಮಾಡುವ ವಿಧಾನ:
- ಅಕ್ಕಿ, ಉದ್ದಿನಬೇಳೆ ಮತ್ತು ಮೆಂತೆಯನ್ನು ತೊಳೆದು 4-5 ಗಂಟೆಗಳ ಕಾಲ ನೆನೆಯಲು ಬಿಡಿ.
- ಅವಲಕ್ಕಿಯನ್ನು ತೊಳೆದು ಹತ್ತು ನಿಮಿಷ ನೆನೆಯಲು ಬಿಡಿ.
- ನೆನೆಸಿದ ನಂತರ ಮೊದಲಿಗೆ ಅಕ್ಕಿ ಮತ್ತು ಬೇಳೆಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣನೆ ಅರೆಯಿರಿ.
- ಅರೆದ ಹಿಟ್ಟನ್ನು ಒಂದು ಪಾತ್ರೆಗೆ ಹಾಕಿ.
- ನಂತರ ತೆಂಗಿನತುರಿ ಮತ್ತು ಅವಲಕ್ಕಿ ಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ.
- ಅರೆದು ಅದೇ ಪಾತ್ರೆಗೆ ಹಾಕಿ.
- ಹಿಟ್ಟನ್ನು ಚೆನ್ನಾಗಿ ಕಲಸಿ, ಮುಚ್ಚಳವನ್ನು ಮುಚ್ಚಿ, 10 - 12 ಘಂಟೆ ಕಾಲ ಹಿಟ್ಟು ಹುದುಗಲು ಬಿಡಿ.
- ಹುದುಗಿದ ನಂತರ ಹಿಟ್ಟಿಗೆ ರುಚಿಗೆ ತಕ್ಕಷ್ಟು ಉಪ್ಪು ಮತ್ತು ಸಕ್ಕರೆ ಸೇರಿಸಿ ಚೆನ್ನಾಗಿ ಕಲಸಿ. ಹಿಟ್ಟು ಉದ್ದಿನ ದೋಸೆ ಹಿಟ್ಟಿನಂತಿರಲಿ.
- ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಸಾಸಿವೆ ಕಡ್ಲೆಬೇಳೆ ಮತ್ತು ಉದ್ದಿನಬೇಳೆಯ ಒಗ್ಗರಣೆ ಮಾಡಿ.
- ಕತ್ತರಿಸಿದ ಶುಂಠಿ, ಹಸಿಮೆಣಸಿನಕಾಯಿ, ಕರಿಬೇವು ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ ಹುರಿಯಿರಿ.
- ಬಿಸಿ ಸ್ವಲ್ಪ ಕಡಿಮೆ ಆದಮೇಲೆ ದೋಸೆ ಹಿಟ್ಟಿಗೆ ಸೇರಿಸಿ.
- ದೋಸೆ ಹೆಂಚನ್ನು ಬಿಸಿಮಾಡಿ. ಎಣ್ಣೆ ಹಚ್ಚಿ, ಹಿಟ್ಟು ಸುರಿದು, ಸೆಟ್ ದೋಸೆಯಂತೆ ಸಣ್ಣ ಸಣ್ಣ ದೋಸೆ ಮಾಡಿ. ಹಿಟ್ಟನ್ನು ಜಾಸ್ತಿ ಹರಡಬೇಡಿ.
- ಮುಚ್ಚಳವನ್ನು ಮುಚ್ಚಿ ಮಧ್ಯಮ ಉರಿಯಲ್ಲಿ ಬೇಯಿಸಿ.
- ಮುಚ್ಚಳವನ್ನು ತೆಗೆದು, ಎಣ್ಣೆ ಅಥವಾ ತುಪ್ಪ ಹಾಕಿ. ದೋಸೆ ಒಂದು ಬದಿ ಕಾಯಿಸಿದರೆ ಸಾಕು. ಚಟ್ನಿಅಥವಾ ಸಾಂಬಾರ್ ನೊಂದಿಗೆ ಬಡಿಸಿರಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ