Gobi palya recipe in Kannada | ಹೂಕೋಸು ಪಲ್ಯ ಮಾಡುವ ವಿಧಾನ
ಹೂಕೋಸು ಪಲ್ಯ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ 240 ಎಂ ಎಲ್ ):
- 1 ಹೂಕೋಸು
- 1 ದೊಡ್ಡ ಈರುಳ್ಳಿ
- 2 ಟೊಮೇಟೊ
- ಸ್ವಲ್ಪ ಕರಿಬೇವು
- 1/2 ಟೀಸ್ಪೂನ್ ಸಾಸಿವೆ
- 1/2 ಟೀಸ್ಪೂನ್ ಜೀರಿಗೆ
- 1/4 ಟೀಸ್ಪೂನ್ ಅರಿಶಿನ ಪುಡಿ
- ಒಂದು ದೊಡ್ಡ ಚಿಟಿಕೆ ಇಂಗು
- 1 ಟೀಸ್ಪೂನ್ ಅಚ್ಚಖಾರದ ಪುಡಿ
- 1 ಟೀಸ್ಪೂನ್ ಧನಿಯಾ ಪುಡಿ
- 1/2 ಟೀಸ್ಪೂನ್ ಗರಂ ಮಸಾಲಾ
- 1/4 ಟೀಸ್ಪೂನ್ ಜೀರಿಗೆ ಪುಡಿ
- 2 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- ನಿಮ್ಮ ರುಚಿ ಪ್ರಕಾರ ಉಪ್ಪು
- 1 ಟೇಬಲ್ ಚಮಚ ಅಡುಗೆ ಎಣ್ಣೆ
ಹೂಕೋಸು ಪಲ್ಯ ಮಾಡುವ ವಿಧಾನ:
- ಮೊದಲಿಗೆ ಹೂಕೋಸನ್ನುಬಿಡಿಸಿ, ತೊಳೆದು, ಒಂದು ಪಾತ್ರೆಯಲ್ಲಿ ತೆಗೆದುಕೊಳ್ಳಿ.
- ಅರ್ಧ ಚಮಚ ಉಪ್ಪು ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ, ಎರಡು ನಿಮಿಷ ಬೇಯಿಸಿ.
- ನಂತರ ನೀರು ಬಗ್ಗಿಸಿ ತೆಗೆದಿಟ್ಟುಕೊಳ್ಳಿ.
- ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಸಾಸಿವೆ ಮತ್ತು ಜೀರಿಗೆಯ ಒಗ್ಗರಣೆ ಮಾಡಿಕೊಳ್ಳಿ.
- ಸಾಸಿವೆ ಸಿಡಿದ ಮೇಲೆ ಕತ್ತರಿಸಿದ ಈರುಳ್ಳಿ ಮತ್ತು ಕರಿಬೇವು ಸೇರಿಸಿ. ಈರುಳ್ಳಿ ಮೆತ್ತಗಾಗುವವರೆಗೆ ಹುರಿಯಿರಿ.
- ಅರಿಶಿನ ಮತ್ತು ಇಂಗು ಸೇರಿಸಿ.
- ಕತ್ತರಿಸಿದ ಟೊಮೇಟೊ ಸೇರಿಸಿ, ಟೊಮೇಟೊ ಮೆತ್ತಗಾಗುವವರೆಗೆ ಹುರಿಯಿರಿ.
- ಅಚ್ಚಖಾರದ ಪುಡಿ, ಧನಿಯಾ ಪುಡಿ, ಗರಂ ಮಸಾಲಾ ಮತ್ತು ಜೀರಿಗೆ ಪುಡಿ ಸೇರಿಸಿ ಮಗುಚಿ.
- ಸ್ವಲ್ಪ ನೀರನ್ನು ಸೇರಿಸಿ, ಕುದಿಸಿ, ಗೊಜ್ಜು ತಯಾರಿಸಿಕೊಳ್ಳಿ.
- ಅದಕ್ಕೆ ಬೇಯಿಸಿದ ಹೂಕೋಸು ಸೇರಿಸಿ.
- ಕೊತ್ತಂಬರಿ ಸೊಪ್ಪನ್ನು ಸೇರಿಸಿ.
- ಮಗುಚಿ, ಮುಚ್ಚಳ ಮುಚ್ಚಿ ಹೂಕೋಸು ಮೆತ್ತಗಾಗುವವರೆಗೆ ಬೇಯಿಸಿ.
- ಕೊನೆಯಲ್ಲಿ ಬೇಕಾದಲ್ಲಿ ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಸೇರಿಸಿ, ಸ್ಟವ್ ಆಫ್ ಮಾಡಿ.
- ಚಪಾತಿ ಅಥವಾ ಅನ್ನದೊಂದಿಗೆ ಬಡಿಸಿ.