Sorekai dose recipe in Kannada | ಸೋರೆಕಾಯಿ ದೋಸೆ ಮಾಡುವ ವಿಧಾನ
ಸೋರೆಕಾಯಿ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 1 ಕಪ್ ದೋಸೆ ಅಕ್ಕಿ
- 1/4 ಕಪ್ ಹೆಸರುಬೇಳೆ
- 1 ಕಪ್ ಸೋರೆಕಾಯಿ
- 2 ಹಸಿ ಮೆಣಸಿನಕಾಯಿ
- 1 ಸೆಮೀ ಉದ್ದದ ಶುಂಠಿ
- ಸ್ವಲ್ಪ ಕೊತ್ತಂಬರಿ ಸೊಪ್ಪು
- ತುಪ್ಪ ಅಥವಾ ಎಣ್ಣೆ ದೋಸೆ ಮಾಡಲು
- ಉಪ್ಪು ರುಚಿಗೆ ತಕ್ಕಷ್ಟು.
ಸೋರೆಕಾಯಿ ದೋಸೆ ಮಾಡುವ ವಿಧಾನ:
- ಅಕ್ಕಿ ಮತ್ತು ಬೇಳೆಯನ್ನು ನಾಲ್ಕು ಘಂಟೆಗಳ ಕಾಲ ನೆನೆಸಿಡಿ.
- ಸೋರೆಕಾಯಿಯನ್ನು ಸಿಪ್ಪೆ ತೆಗೆದು ಕತ್ತರಿಸಿಟ್ಟುಕೊಳ್ಳಿ.
- ನೆನೆಸಿದ ಅಕ್ಕಿ ಮತ್ತು ಬೇಳೆಯನ್ನು ಮಿಕ್ಸಿ ಜಾರಿನಲ್ಲಿ ತೆಗೆದುಕೊಳ್ಳಿ.
- ಹಸಿಮೆಣಸಿನಕಾಯಿ ಮತ್ತು ಶುಂಠಿ ಸೇರಿಸಿ.
- ಕೊತ್ತಂಬರಿ ಸೊಪ್ಪನ್ನು ಸೇರಿಸಿ.
- ಕತ್ತರಿಸಿದ ಸೋರೆಕಾಯಿ ಸೇರಿಸಿ.
- ಅಗತ್ಯವಿದ್ದಷ್ಟು ನೀರು ಸೇರಿಸಿ, ನುಣ್ಣನೆ ಅರೆದು ಒಂದು ಪಾತ್ರೆಗೆ ಹಾಕಿ.
- ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
- ಹಿಟ್ಟು ತೆಳುವಾದ ಉದ್ದಿನ ದೋಸೆ ಹಿಟ್ಟಿನಂತಿರಲಿ.
- ದೋಸೆ ಹೆಂಚನ್ನು ಬಿಸಿಮಾಡಿ. ಈಗ ವೃತ್ತಾಕಾರದ ರೀತಿಯಲ್ಲಿ ದೋಸೆ ಹಿಟ್ಟನ್ನು ತೆಳುವಾಗಿ ಹರಡಿ. ಮೃದುವಾದ ದೋಸೆ ಬೇಕಾದಲ್ಲಿ ಜಾಸ್ತಿ ನೀರು ಸೇರಿಸಿ ನೀರು ದೋಸೆಯಂತೆ ಮಾಡಿದರಾಯಿತು.
- ಮುಚ್ಚಳವನ್ನು ಮುಚ್ಚಿ ಬೇಯಿಸಿ.
- 5 ಸೆಕೆಂಡುಗಳ ನಂತರ ಮುಚ್ಚಳವನ್ನು ತೆಗೆದು, ಎಣ್ಣೆ ಅಥವಾ ತುಪ್ಪ ಹಾಕಿ.
- ಸಣ್ಣ ಉರಿಯಲ್ಲಿ ಗರಿಗರಿ ಆಗುವವರೆಗೆ ಕಾಯಿಸಿ. ತೆಂಗಿನಕಾಯಿ ಚಟ್ನಿಯೊಂದಿಗೆ ಬಡಿಸಿರಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ