Kallangadi sippe dose recipe in Kannada | ಕಲ್ಲಂಗಡಿ ಸಿಪ್ಪೆ ದೋಸೆ ಮಾಡುವ ವಿಧಾನ
ಕಲ್ಲಂಗಡಿ ಸಿಪ್ಪೆ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು (ಅಳತೆ ಕಪ್ = 240 ಎಂಎಲ್ ):
- 1 ಕಪ್ ಅಕ್ಕಿ
- 1 ಕಪ್ ಕಲ್ಲಂಗಡಿ ಹಣ್ಣಿನ ಬಿಳಿ ಭಾಗ
- 2 ಟೇಬಲ್ ಚಮಚ ಉದ್ದಿನಬೇಳೆ
- 1 ಟೀಸ್ಪೂನ್ ಮೆಂತ್ಯ
- 1/4 ಕಪ್ ಅವಲಕ್ಕಿ
- ಉಪ್ಪು ರುಚಿಗೆ ತಕ್ಕಷ್ಟು.
ಕಲ್ಲಂಗಡಿ ಸಿಪ್ಪೆ ದೋಸೆ ಮಾಡುವ ವಿಧಾನ:
- ಒಂದು ಪಾತ್ರೆಯಲ್ಲಿಅಕ್ಕಿಯನ್ನು ತೊಳೆದು 4 - 5 ಗಂಟೆಗಳ ಕಾಲ ನೆನೆಯಲು ಬಿಡಿ.
- ಇನ್ನೊಂದು ಪಾತ್ರೆಯಲ್ಲಿಉದ್ದಿನಬೇಳೆ, ಮೆಂತ್ಯ ಮತ್ತು ಅವಲಕ್ಕಿಯನ್ನು ತೊಳೆದು 4 - 5 ಗಂಟೆಗಳ ಕಾಲ ನೆನೆಯಲು ಬಿಡಿ.
- ಕಲ್ಲಂಗಡಿ ಹಣ್ಣನ್ನು ಕತ್ತರಿಸಿ, ಬಿಳಿ ಭಾಗವನ್ನು ತೆಗೆದಿಟ್ಟುಕೊಳ್ಳಿ.
- ನೆನೆಸಿದ ಉದ್ದಿನಬೇಳೆ, ಮೆಂತ್ಯ ಮತ್ತು ಅವಲಕ್ಕಿಯನ್ನು ಮಿಕ್ಸಿಜಾರಿನಲ್ಲಿ ತೆಗೆದುಕೊಂಡು, ಕತ್ತರಿಸಿದ ಕಲ್ಲಂಗಡಿ ಹಣ್ಣಿನ ಬಿಳಿ ಭಾಗವನ್ನು ಹಾಕಿ.
- ಆದಷ್ಟು ಕಡಿಮೆ ನೀರು ಸೇರಿಸಿ ಅರೆಯಿರಿ. ನುಣ್ಣನೆ ಅರೆದು ಒಂದು ಪಾತ್ರೆಗೆ ಹಾಕಿ.
- ನಂತರ ನೆನೆಸಿದ ಅಕ್ಕಿಯನ್ನು ಮಿಕ್ಸಿಜಾರಿನಲ್ಲಿ ತೆಗೆದುಕೊಂಡು, ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ. ಕಡಿಮೆ ನೀರು ಬಳಸಿ, ಏಕೆಂದರೆ ಕಲ್ಲಂಗಡಿ ಹಣ್ಣಿನ ಬಿಳಿ ಭಾಗದಲ್ಲಿ ನೀರಿನಂಶ ಜಾಸ್ತಿ ಇರುತ್ತದೆ.
- ನುಣ್ಣನೆ ಅರೆದು ಅದೇ ಪಾತ್ರೆಗೆ ಹಾಕಿ.
- ಹಿಟ್ಟನ್ನು ಚೆನ್ನಾಗಿ ಕಲಸಿ, ಮುಚ್ಚಳವನ್ನು ಮುಚ್ಚಿ, 7 - 8 ಘಂಟೆ ಕಾಲ ಹಿಟ್ಟು ಹುದುಗಲು ಬಿಡಿ.
- ಹುದುಗಿದ ನಂತರ ಹಿಟ್ಟಿಗೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ಹಿಟ್ಟು ಉದ್ದಿನ ದೋಸೆ ಹಿಟ್ಟಿನಂತಿರಲಿ.
- ದೋಸೆ ಹೆಂಚನ್ನು ಬಿಸಿಮಾಡಿ. ಎಣ್ಣೆ ಹಚ್ಚಿ, ಹಿಟ್ಟು ಸುರಿದು, ದೋಸೆ ಮಾಡಿ.
- ಮುಚ್ಚಳವನ್ನು ಮುಚ್ಚಿ ಬೇಯಿಸಿ.
- ಮುಚ್ಚಳವನ್ನು ತೆಗೆದು, ಎಣ್ಣೆ ಅಥವಾ ತುಪ್ಪ ಹಾಕಿ, ಖಾಯಿಸಿ.
- ತೆಂಗಿನಕಾಯಿ ಚಟ್ನಿ ಅಥವಾ ಸಾಂಬಾರ್ ನೊಂದಿಗೆ ಬಡಿಸಿರಿ.