Instant rasam recipe in Kannada | ದಿಢೀರ್ ಸಾರು ಮಾಡುವ ವಿಧಾನ
ದಿಢೀರ್ ಸಾರು ವಿಡಿಯೋ
ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)
- 1/2 ಟೊಮೆಟೋ
- 1/2 ಟೀಸ್ಪೂನ್ ಸಾಸಿವೆ
- 7 - 8 ಕರಿಬೇವಿನ ಎಲೆ
- 1/4 ಟೀಸ್ಪೂನ್ ಅರಿಶಿನ ಪುಡಿ
- 1 ಟೇಬಲ್ ಸ್ಪೂನ್ ಸಣ್ಣದಾಗಿ ಕೊಚ್ಚಿದ ಕೊತ್ತಂಬರಿ ಸೊಪ್ಪು
- 1 ಟೇಬಲ್ ಸ್ಪೂನ್ ಎಣ್ಣೆ
- ಉಪ್ಪು ರುಚಿಗೆ ತಕ್ಕಷ್ಟು
ಅರೆಯಲು ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)
- 2 ಒಣ ಮೆಣಸಿನಕಾಯಿ
- 1 ಹಸಿಮೆಣಸಿನಕಾಯಿ
- 1 ಟೀಸ್ಪೂನ್ ಕಾಳುಮೆಣಸು
- 1 ಟೀಸ್ಪೂನ್ ಜೀರಿಗೆ
- 1/2 ಟೊಮೇಟೊ
- 7 - 8 ಎಸಳು ಬೆಳ್ಳುಳ್ಳಿ
- 1 ಟೇಬಲ್ ಸ್ಪೂನ್ ಕೊತ್ತಂಬರಿ ಸೊಪ್ಪು
- ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು
ದಿಢೀರ್ ಸಾರು ಮಾಡುವ ವಿಧಾನ:
- ಅರೆಯಲು ಪಟ್ಟಿಮಾಡಿದ ಪದಾರ್ಥಗಳನ್ನು (ಒಣಮೆಣಸಿನಕಾಯಿ, ಹಸಿಮೆಣಸಿನಕಾಯಿ, ಕಾಳುಮೆಣಸು, ಜೀರಿಗೆ, ಟೊಮೇಟೊ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ಹುಣಿಸೇಹಣ್ಣು) ಮಿಕ್ಸಿಜಾರಿನಲ್ಲಿ ಸ್ವಲ್ಪ ನೀರು ಸೇರಿಸಿ ಅರೆದಿಟ್ಟುಕೊಳ್ಳಿ.
- ನಂತರ ಎಣ್ಣೆ, ಸಾಸಿವೆ ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
- ಅದಕ್ಕೆ ಟೊಮೇಟೊ ಹಾಕಿ ಹುರಿಯಿರಿ.
- ಅರೆದ ಮಸಾಲೆ ಪೇಸ್ಟ್ ಮತ್ತು ಸ್ವಲ್ಪ ನೀರು ಸೇರಿಸಿ.
- ಉಪ್ಪು ಮತ್ತು ಅರಿಶಿನ ಪುಡಿ ಸೇರಿಸಿ ಮಗುಚಿ, ಕುದಿಸಿ.
- ಸುಮಾರು ಅರ್ಧ ಲೀಟರ್ ನೀರು ಸೇರಿಸಿ ಕುದಿಸಿ.
- ಕೊತ್ತಂಬರಿ ಸೊಪ್ಪು ಉದುರಿಸಿ, ಸ್ಟವ್ ಆಫ್ ಮಾಡಿ.
- ಬಿಸಿಯಾದ ಅನ್ನದೊಂದಿಗೆ ಬಡಿಸಿ. ಅಥವಾ ಸೂಪ್ ತರಹ ಕುಡಿಯಲು ಕೊಡಿ.